ದೇಶ- ವಿದೇಶ

ಇಂಧನ ಸೌಲಭ್ಯಗಳ ಮೇಲೆ ದಾಳಿ ಮಾಡಿದರೆ, ಹೊರ್ಮುಜ್‌ ಸಂಪೂರ್ಣ ಮುಚ್ಚುತ್ತೇವೆ : ಅಮೆರಿಕಗೆ ಇರಾನ್‌ ಎಚ್ಚರಿಕೆ

ಟೆಹ್ರಾನ್ : ಪಶ್ಚಿಮ ಏಷ್ಯಾದಲ್ಲಿನ ಯುದ್ಧಕ್ಕೆ ಶೀಘ್ರವೇ ಅಂತ್ಯ ಹಾಡುವುದಾಗಿ ಶನಿವಾರವಷ್ಟೆ ಹೇಳಿದ್ದ ಟ್ರಂಪ್‌, ಈಗ ಇರಾನ್‌ ಮೇಲಿನ ದಾಳಿಗಳನ್ನು ಹೆಚ್ಚಿಸುವುದಾಗಿ ಹೇಳಿದ್ದು, ಇರಾನಿನ ಇಂಧನ ಸೌಲಭ್ಯಗಳ ಮೇಲೆ ದಾಳಿ ನಡೆಸುವುದಾಗಿ ಬೆದರಿಕೆ ಹಾಕಿದ್ದಾರೆ. ಆದರೆ, ಇದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಇರಾನ್‌ ಹೊರ್ಮುಜ್‌ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಲಾಗುವುದು ಎಂದು ಎಚ್ಚರಿಕೆ ನೀಡಿದೆ.

ಹೊರ್ಮುಜ್‌ ಜಲಸಂಧಿಯನ್ನು 48 ಗಂಟೆಗಳ ಒಳಗಾಗಿ ಸಂಚಾರಕ್ಕೆ ಮುಕ್ತಗೊಳಿಸಬೇಕು. ಇಲ್ಲದಿದ್ದರೆ, ಇರಾನ್‌ನ ವಿದ್ಯುತ್‌ ಸ್ಥಾವರ ಸೇರಿದಂತೆ ಎಲ್ಲ ಸ್ಥಾವರಗಳ ಜತೆಗೆ ಇಂಧನ ಸೌಲಭ್ಯಗಳನ್ನು ನಾಶ ಮಾಡಲಾಗುವುದು ಎಂದು ಟ್ರಂಪ್‌ ಎಚ್ಚರಿಕೆ ನೀಡಿದ್ದರು.

ಈ ಬೆದರಿಕೆಗೆ ಬಗ್ಗದ ಇರಾನ್‌, ಜಲಮಾರ್ಗಗಳನ್ನು ಸಂಪೂರ್ಣ ಬಂದ್‌ ಮಾಡುವುದಾಗಿ ತಿರುಗೇಟು ನೀಡಿದೆ. ಪರಿಣಾಮ ಉದ್ವಿಗ್ನತೆ ಮತ್ತಷ್ಟು ಹೆಚ್ಚುವ ಆತಂಕ ಸೃಷ್ಟಿಯಾಗಿದೆ.

ಇರಾನ್‌ನ ಇಂಧನ ಸೌಲಭ್ಯಗಳನ್ನು ಗುರಿಯಾಗಿಸಿದರೆ, ಅಮೆರಿಕದ ಷೇರು ಕಂಪನಿಗಳನ್ನು ಸಂಪೂರ್ಣ ನಾಶಮಾಡಲಾಗುವುದು. ಅಮೆರಿಕವು ನೆಲೆಗಳನ್ನು ಹೊಂದಿರುವ ದೇಶಗಳ ಇಂಧನ ಸೌಕರ್ಯಗಳು ಕಾನೂನುಬದ್ಧವಾಗಿಯೂ ನಮ್ಮ ಗುರಿಯಾಗಲಿದೆ ಎಂಬುದಾಗಿ ಇರಾನ್‌ ರೆವಲ್ಯೂಷನರಿ ಗಾರ್ಡ್ಸ್‌ ತನ್ನ ಹೇಳಿಕೆಯಲ್ಲಿ ಉಲ್ಲೇಖಿಸಿದೆ.

ಆಂದೋಲನ ಡೆಸ್ಕ್

Recent Posts

ಕೊಳ್ಳೇಗಾಲ: ಅಂಬೇಡ್ಕರ್ ಪ್ರತಿಮೆಗೆ ಸಿಎಂ ಡಿ.ಕೆ.ಶಿವಕುಮಾರ್ ಮಾಲಾರ್ಪಣೆ

ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…

6 hours ago

ಶಿಕಾರಿಪುರದಿಂದ ‘ಭಾರತ್ ಜೋಡೋ 2.0’ ಪಾದಯಾತ್ರೆಗೆ ಚಾಲನೆ!

ಶಿವಮೊಗ್ಗ: ಕಾಂಗ್ರೆಸ್‌ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್‌ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

7 hours ago

ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ: ಸಿಎಂ ಡಿ.ಕೆ.ಶಿವಕುಮಾರ್‌

ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…

7 hours ago

ಹನೂರು ತಾಲೂಕಿನಲ್ಲಿ ಮುಂದುವರಿದ ಮಳೆ ಅವಾಂತರ: ಹಳ್ಳದಲ್ಲಿ ಗಣಪತಿ ದೇವಾಲಯ ಜಲಸಮಾಧಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…

8 hours ago

ಹನೂರಿನಲ್ಲಿ ಮಳೆಯ ಅಬ್ಬರ: 50ಕ್ಕೂ ಹೆಚ್ಚು ಮನೆಗಳು ಜಲಾವೃತ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…

8 hours ago

ಓದುಗರ ಪತ್ರ: ಜನರ ಹಿತ ಕಾಯಲಿ!

ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…

14 hours ago