ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧ ಪರಿಸ್ಥಿತಿ ದಿನದಿಂದ ದಿನಕ್ಕೆ ಮತ್ತಷ್ಟು ಉದ್ವಿಗ್ನವಾಗುತ್ತಿದೆ. ಇರಾನ್ ಹಾಗೂ ಅಮೆರಿಕ-ಇಸ್ರೇಲ್ ನಡುವಿನ ಸಂಘರ್ಷದ ನಡುವೆಯೇ ಪರ್ಶಿಯನ್ ಕೊಲ್ಲಿಯಲ್ಲಿ ಮತ್ತೊಂದು ಭಾರೀ ದಾಳಿ ನಡೆದಿದ್ದು, ಅಮೆರಿಕ ಮಾಲೀಕತ್ವದ ಕಚ್ಚಾ ತೈಲ ಟ್ಯಾಂಕರ್ ಮೇಲೆ ಇರಾನ್ ಅಂಡರ್‌ವಾಟರ್ ಡ್ರೋನ್ ದಾಳಿ ನಡೆಸಿದ್ದು ಈ ದಾಳಿಯಲ್ಲಿ ಭಾರತೀಯ ನಾವಿಕನೊಬ್ಬ ಸಾವನ್ನಪ್ಪಿದ್ದಾರೆ.
ಇರಾಕ್‌ನ ಬಸ್ರಾ ಸಮೀಪ ಮಂಗಳವಾರ ಅಮೆರಿಕ ಮೂಲದ ಕಂಪನಿಯ ಒಡೆತನದಲ್ಲಿರುವ “ಸಫೆಸಿಯಾ ವಿಷ್ಣು” (Safe Sea Vishnu) ಎಂಬ ಕಚ್ಚಾ ತೈಲ ಟ್ಯಾಂಕರ್ ಮೇಲೆ ದಾಳಿ ನಡೆದಿದೆ. ಈ ಹಡಗು ಮಾರ್ಷಲ್ ದ್ವೀಪಗಳ ಧ್ವಜದ ಅಡಿಯಲ್ಲಿ ಪ್ರಯಾಣಿಸುತ್ತಿದ್ದು, ಪೆಟ್ರೋಲಿಯಂ ಕಚ್ಚಾ ತೈಲವನ್ನು ಸಾಗಿಸುತ್ತಿತ್ತು. ದಾಳಿಯ ಪರಿಣಾಮವಾಗಿ ಹಡಗಿನಲ್ಲಿ ಭಾರೀ ಸ್ಫೋಟ ಸಂಭವಿಸಿ ಒಬ್ಬ ಭಾರತೀಯ ಸಿಬ್ಬಂದಿ ದುರದೃಷ್ಟವಶಾತ್ ಪ್ರಾಣ ಕಳೆದುಕೊಂಡಿದ್ದಾರೆ.
ಹಡಗಿನಲ್ಲಿ ಕೆಲಸ ಮಾಡುತ್ತಿದ್ದ ಉಳಿದ 15 ಭಾರತೀಯ ಸಿಬ್ಬಂದಿಯನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎಂದು ಬಾಗ್ದಾದ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ತಿಳಿಸಿದೆ. ಗಾಯಗೊಂಡ ಅಥವಾ ಅಪಾಯದಲ್ಲಿದ್ದ ಸಿಬ್ಬಂದಿಯನ್ನು ಸಮೀಪದ ಸುರಕ್ಷಿತ ಸ್ಥಳಗಳಿಗೆ ಕರೆದೊಯ್ಯಲಾಗಿದ್ದು, ಅವರ ಆರೋಗ್ಯದ ಸ್ಥಿತಿಯನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.
ಇರಾನ್ ರಾಜ್ಯ ಪ್ರಸಾರ ಸಂಸ್ಥೆ ಐಆರ್‌ಐಬಿ ವರದಿ ಪ್ರಕಾರ, ಪರ್ಶಿಯನ್ ಕೊಲ್ಲಿಯಲ್ಲಿ ನಡೆದ ದಾಳಿಯಲ್ಲಿ ಎರಡು ತೈಲ ಟ್ಯಾಂಕರ್‌ಗಳು ಸ್ಫೋಟಗೊಂಡಿವೆ ಎಂದು ತಿಳಿಸಲಾಗಿದೆ. ನೀರಿನಾಳದಲ್ಲಿ ಕಾರ್ಯನಿರ್ವಹಿಸುವ ಡ್ರೋನ್ ಅಥವಾ ಸ್ಫೋಟಕ ಸಾಧನಗಳ ಮೂಲಕ ಈ ದಾಳಿ ನಡೆದಿರಬಹುದು ಎಂದು ವರದಿಗಳು ಸೂಚಿಸಿವೆ.
ದಾಳಿಗೆ ಗುರಿಯಾದ ಮತ್ತೊಂದು ಹಡಗು ಜೆಫಿರೋಸ್ ಎಂಬ ಹೆಸರಿನ ಟ್ಯಾಂಕರ್ ಆಗಿದ್ದು, ಅದು ಮಾಲ್ಟೀಸ್ ಧ್ವಜ ಹೊತ್ತ ಹಡಗು. ಇದರ ಮಾಲೀಕರು ಗ್ರೀಸ್‌ನಲ್ಲಿ ನೆಲೆಸಿದ್ದಾರೆ. ಸ್ಫೋಟದ ಪರಿಣಾಮವಾಗಿ ಈ ಹಡಗಿಗೂ ಹಾನಿಯಾಗಿದೆ ಎಂದು ತಿಳಿದುಬಂದಿದೆ. ಇದಕ್ಕೂ ಮೊದಲು, ಸ್ಫೋಟಕಗಳಿಂದ ಸಜ್ಜುಗೊಂಡ ‘ಆತ್ಮಹತ್ಯಾ’ ದೋಣಿ ಎರಡು ಹಡಗುಗಳಿಗೆ ಡಿಕ್ಕಿ ಹೊಡೆದಿರಬಹುದು ಎಂಬ ಶಂಕೆಯನ್ನೂ ಕೆಲ ಅಂತರರಾಷ್ಟ್ರೀಯ ಮಾಧ್ಯಮಗಳು ವ್ಯಕ್ತಪಡಿಸಿದ್ದವು. ಘಟನೆಯ ಕುರಿತು ತನಿಖೆ ಮುಂದುವರಿದಿದೆ.
ಭಾರತೀಯರ ಸುರಕ್ಷತೆಗೆ ಸರ್ಕಾರದ ಕ್ರಮ
ಈ ಘಟನೆ ಬಗ್ಗೆ ಬಾಗ್ದಾದ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಹಾಗೂ ಭಾರತ ವಿದೇಶಾಂಗ ಸಚಿವಾಲಯ ನಿರಂತರವಾಗಿ ಮಾಹಿತಿ ಪಡೆಯುತ್ತಿದೆ. ರಕ್ಷಿಸಲಾದ ಭಾರತೀಯ ನಾವಿಕರೊಂದಿಗೆ ಅಧಿಕಾರಿಗಳು ಸಂಪರ್ಕದಲ್ಲಿದ್ದು, ಅವರ ಸುರಕ್ಷತೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಭಾರತೀಯ ನಾಗರಿಕರ ಸುರಕ್ಷತೆ ಸರ್ಕಾರದ ಪ್ರಥಮ ಆದ್ಯತೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಹಾರ್ಮುಜ್ ಜಲಸಂಧಿಯಲ್ಲಿ ಉದ್ವಿಗ್ನತೆ
ಪರ್ಶಿಯನ್ ಕೊಲ್ಲಿಯಲ್ಲಿರುವ ಹಾರ್ಮುಜ್ ಜಲಸಂಧಿ ವಿಶ್ವದ ಅತ್ಯಂತ ಪ್ರಮುಖ ತೈಲ ಸಾಗಣೆ ಮಾರ್ಗಗಳಲ್ಲಿ ಒಂದಾಗಿದೆ. ಇರಾನ್ ಮತ್ತು ಓಮನ್ ನಡುವಿನ ಸುಮಾರು 55 ಕಿಲೋಮೀಟರ್ ಅಗಲದ ಈ ಜಲಮಾರ್ಗ ಪರ್ಷಿಯನ್ ಕೊಲ್ಲಿಯನ್ನು ಅರೇಬಿಯನ್ ಸಮುದ್ರಕ್ಕೆ ಸಂಪರ್ಕಿಸುತ್ತದೆ. ಸಾಮಾನ್ಯವಾಗಿ ದಿನಕ್ಕೆ ಸುಮಾರು 13 ಮಿಲಿಯನ್ ಬ್ಯಾರೆಲ್ ತೈಲ ಈ ಮಾರ್ಗದ ಮೂಲಕ ಸಾಗುತ್ತದೆ. ಇದು ಜಾಗತಿಕ ತೈಲ ಸಾಗಣೆಯ ಸುಮಾರು 30 ಶೇಕಡಾ ಪಾಲನ್ನು ಹೊಂದಿದೆ ಎಂದು ಅಂದಾಜಿಸಲಾಗಿದೆ.
ಮಂಡ್ಯ: ಐತಿಹಾಸಿಕ ಹಿನ್ನೆಲೆಯುಳ್ಳ 416ನೇ ಶ್ರೀರಂಗಪಟ್ಟಣ ದಸರಾ ಮಹೋತ್ಸವಕ್ಕೆ ಸಕಲ ಸಿದ್ಧತೆಗಳು ನಡೆಯುತ್ತಿದ್ದು, ಅಕ್ಟೋಬರ್.15ರಂದು ಖ್ಯಾತ ನಟ ವಿ.ರವಿಚಂದ್ರನ್ ಅವರು…
ದಾಸೇಗೌಡ ಸರಗೂರು ಹೊಸ ನಲ್ಲಿ ಸಂಪರ್ಕದಲ್ಲಿ ಸಣ್ಣ ಪ್ರಮಾಣದ ನೀರು; ಕಾಂಕ್ರೀಟ್, ಡಾಂಬರ್ ರಸ್ತೆಗಳ ಅಗೆತಕ್ಕೆ ಆಕ್ರೋಶ ಸರಗೂರು: ಪಟ್ಟಣದ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕರ್ನಾಟಕ ಲೋಕಸೇವಾ ಆಯೋಗವನ್ನು ರದ್ದುಗೊಳಿಸುವ ಇಂಗಿತವನ್ನು ವ್ಯಕ್ತಪಡಿಸಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ. ಕೆಪಿಎಸ್‌ಸಿ ಒಂದು ಸ್ವಾಯತ್ತ ಸಂಸ್ಥೆಯಾದರೂ…
ಸಿನಿಮಾ ಮಾಧ್ಯಮ ಸಮಾಜದ ಮೇಲೆ ಹೆಚ್ಚು ಪ್ರಭಾವ ಬೀರುವ ಮಾಧ್ಯಮವಾಗಿದೆ. ಇತ್ತೀಚಿನ ತಂತ್ರಜ್ಞಾನದ ಅಗಾಧ ಬೆಳವಣಿಗೆಯ ನಡುವೆಯೂ ಉತ್ತಮ ಚಿತ್ರಗಳಿಗೆ…
ಈ ಬಾರಿಯ ವಿಶ್ವವಿಖ್ಯಾತ ಮೈಸೂರು ನಾಡಹಬ್ಬ ದಸರಾ ಮಹೋತ್ಸವವನ್ನು ಕೊಪ್ಪಳದ ಶ್ರೀ ಗವಿಸಿದ್ಧೇಶ್ವರ ಮಠದ ಶ್ರೀ ಅಭಿನವ ಗವಿಸಿದ್ಧೇಶ್ವರ ಸ್ವಾಮಿಗಳವರಿಂದ…
ನಾಗೇಶ ಹೆಗಡೆ ಕೊನೆಗೂ ಪಶ್ಚಿಮ ಘಟ್ಟಗಳ ರಕ್ಷಣೆ ಅನಿರ್ದಿಷ್ಟ ಕಾಲ ಮುಂದೂಡಿಕೆ ಗಾಡ್ಗೀಳ್ ಸಮಿತಿಯ ಕೆಲವು ನಿಯಮಗಳ ಮತ್ತೊಮ್ಮೆ ಖಡಕ್…