ಟೆಹ್ರಾನ್ : ಅಮೆರಿಕ ಮತ್ತು ಇರಾನ್ ಮಧ್ಯೆ ಕದನ ವಿರಾಮ ಘೋಷಣೆಯಾದ ಬಳಿಕ ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ನೌಕಾಪಡೆಯು ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವ ಹಡಗುಗಳಿಗಾಗಿ ಎರಡು ಹೊಸ ಪರ್ಯಾಯ ಮಾರ್ಗಗಳನ್ನು ಪ್ರಕಟಿಸಿದೆ.
ಹಾರ್ಮುಜ್ ಜಲಸಂಧಿಯ ಸಾಮಾನ್ಯ ಹಡಗು ಸಂಚಾರದ ಮಾರ್ಗದಲ್ಲಿ ಸಮುದ್ರದ ಒಳಗೆ ಸಮುದ್ರ ಬಾಂಬ್ ಹಾಕಿದ್ದರಿಂದ ಆ ಮಾರ್ಗದಲ್ಲಿ ಚಲಿಸುವುದು ಸಾಧ್ಯವಿಲ್ಲ. ಈ ಕಾರಣಕ್ಕೆ ಹಡಗುಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಈ ಹೊಸ ಮಾರ್ಗಗಳನ್ನು ರೂಪಿಸಲಾಗಿದೆ ಎಂದು ತಿಳಿಸಿದೆ.
ಈ ಹೊಸ ಮಾರ್ಗಗಳು ಹಡಗುಗಳನ್ನು ಇರಾನ್‌ನ ಲಾರಕ್ ದ್ವೀಪದ ಸಮೀಪವಿರುವ ನೀರಿನ ಮೂಲಕ ಹಾದುಹೋಗುವಂತೆ ಮಾಡುತ್ತವೆ. ಹಡಗುಗಳು ಒಮಾನ್ ಸಮುದ್ರದಿಂದ ಲಾರಕ್ ದ್ವೀಪದ ಉತ್ತರ ಭಾಗದ ಕಡೆಗೆ ಪ್ರವೇಶಿಸಬೇಕು. ಪರ್ಷಿಯನ್ ಕೊಲ್ಲಿಯಿಂದ ಲಾರಕ್ ದ್ವೀಪದ ದಕ್ಷಿಣ ಭಾಗದ ಮೂಲಕ ಒಮಾನ್ ಸಮುದ್ರದ ಕಡೆಗೆ ನಿರ್ಗಮಿಸಬೇಕು ಎಂದು ಸೂಚಿಸಿದೆ.
ಈ ಮಾರ್ಗಗಳಲ್ಲಿ ಸಂಚರಿಸುವ ಎಲ್ಲಾ ಹಡಗುಗಳು ಐಆರ್‌ಜಿಸಿ ನೌಕಾಪಡೆಯೊಂದಿಗೆ ನೇರ ಸಮನ್ವಯ ಸಾಧಿಸುವುದು ಕಡ್ಡಾಯವಾಗಿದೆ. ವರದಿಗಳ ಪ್ರಕಾರ ಈ ಮಾರ್ಗಗಳನ್ನು ಬಳಸುವ ಹಡಗುಗಳಿಗೆ ಕ್ರಿಪ್ಟೋಕರೆನ್ಸಿ ಅಥವಾ ಚೀನೀ ಯುವಾನ್‌ನಲ್ಲಿ ಶುಲ್ಕ ಪಾವತಿಸುವ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ.
ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…
ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…
ಮಂಡ್ಯ: ಇದೇ ಅಕ್ಟೋಬರ್.11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…
ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್…