ನವದೆಹಲಿ: ದೇಶವನ್ನೇ ಬೆಚ್ಚಿ ಬೀಳಿಸಿರುವ ದೆಹಲಿಯ ಕೆಂಪುಕೋಟೆ ಬಳಿ ಕಾರು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.
ಕಾರು ಸ್ಪೋಟಗೊಂಡ ಪ್ರಕರಣದಲ್ಲಿ ಪುಲ್ವಾಮಾ ನಂಟಿರುವ ಬಗ್ಗೆ ತಿಳಿದುಬಂದಿದೆ. ಅಲ್ಲದೇ ಇದೊಂದು ಭಯೋತ್ಪಾದಕ ಕೃತ್ಯ ಎಂದು ಶಂಕೆ ವ್ಯಕ್ತವಾಗಿದೆ.
ಇದನ್ನು ಓದಿ: ದಿಲ್ಲಿಯಲ್ಲಿ ಬಾಂಬ್ ಬ್ಲಾಸ್ಟ್ | ರಾಜ್ಯದಲ್ಲೂ ಅಲರ್ಟ್ ಘೋಷಣೆ ; ಸಿಎಂ
ಸ್ಫೋಟಗೊಂಡ ಕಾರು ಮೊಹಮ್ಮದ್ ಸಲ್ಮಾನ್ ಎಂಬುವವರ ಹೆಸರಿನಲ್ಲಿ ಹರಿಯಾಣದಲ್ಲಿ ನೋಂದಣಿಯಾಗಿತ್ತು. ಗುರುಗ್ರಾಮದ ಶಾಂತಿನಗರ ನಿವಾಸಿ ಸಲ್ಮಾನ್ ಅವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಅವರು ಕಾರನ್ನು ಒಂದೂವರೆ ವರ್ಷದ ಹಿಂದೆ ದೆಹಲಿಯ ಓಕ್ಲಾ ನಿವಾಸಿ ದೇವೇಂದರ್ ಅವರಿಗೆ ಮಾರಾಟ ಮಾಡಿರುವುದಾಗಿ ತಿಳಿಸಿದ್ದಾರೆ.
ತನಿಖೆ ನಡೆಸಿದ ಪೊಲೀಸರಿಗೆ ದೇವೇಂದರ್ ಕೂಡ ಕಾರನ್ನು ಜಮ್ಮ-ಕಾಶ್ಮೀರದ ಪುಲ್ವಾಮಾ ಮೂಲದ ತಾರೀಕ್ ಎಂಬ ವ್ಯಕ್ತಿಗೆ ಮಾರಾಟ ಮಾಡಿರುವುದು ಗೊತ್ತಾಗಿದೆ.
ಈ ಬೆಳವಣಿಗೆಯು ಪ್ರಕರಣಕ್ಕೆ ಪುಲ್ವಾಮಾ ನಂಟನ್ನು ಸೂಚಿಸಿದ್ದು, ತನಿಖೆ ಮತ್ತಷ್ಟು ಚುರುಕುಗೊಂಡಿದೆ.





