ದೇಶ- ವಿದೇಶ

ಐಎಸ್‌ಐ ಬೆಂಬಲಿತ ಶಸ್ತ್ರಾಸ್ತ್ರಾ ಕಳ್ಳಸಾಗಣೆ ಜಾಲ ಪತ್ತೆ : ಐವರ ಬಂಧನ

ಚಂಡೀಗಢ : ಪಾಕಿಸ್ತಾನದ ಐಎಸ್‌ಐ ಬೆಂಬಲಿತ ಹ್ಯಾಂಡ್ಲರ್‌ಗಳಿಂದ ನಿರ್ವಹಿಸಲ್ಪಡುತ್ತಿದ್ದ ಅತ್ಯಾಧುನಿಕ ಶಸ್ತ್ರಾಸ್ತ್ರಗಳ ಕಳ್ಳಸಾಗಣೆ ಜಾಲವನ್ನು ಭೇದಿಸಿರುವ ಅಮೃತಸರ ಪೊಲೀಸರು, ಐವರನ್ನು ಬಂಧಿಸಿದ್ದಾರೆ ಎಂದು ಪಂಜಾಬ್ ಪೊಲೀಸ್ ಇಲಾಖೆಯ ಮಹಾ ನಿರ್ದೇಶಕ ಗೌರವ್ ಯಾದವ್ ತಿಳಿಸಿದ್ದಾರೆ.

ಆರೋಪಿಗಳಿಂದ ಎಕೆ ಸೈಗಾ 308 ಅಸಾಲ್ಟ್ ರೈಫಲ್, ಎರಡು ಮ್ಯಾಗಜೀನ್, ಎರಡು 9 ಎಂಎಂ ಗ್ಲಾಕ್ ಪಿಸ್ತೂಲ್, ಎಕೆ ರೈಫಲ್ನ 90 ಜೀವಂತ ಗುಂಡುಗಳನ್ನು ಸೇರಿದಂತೆ ರೂ. 7.50 ಲಕ್ಷ ನಗದು, ಒಂದು ಕಾರು ಮತ್ತು ಮೂರು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಯಾದವ್ ಮಾಹಿತಿ ನೀಡಿದ್ದಾರೆ.

ಆರೋಪಿಗಳು ಪಾಕಿಸ್ತಾನ ಮೂಲದ ಐಎಸ್‌ಐ ಕಾರ್ಯಕರ್ತರೊಂದಿಗೆ ನೇರ ಸಂಪರ್ಕ ಹೊಂದಿದ್ದಾರೆಂದು ತಿಳಿದುಬಂದಿದೆ. ವಶಪಡಿಸಿಕೊಂಡಿರುವ ಶಸ್ತ್ರಾಸ್ತ್ರಗಳನ್ನು ಗ್ಯಾಂಗ್‌ಸ್ಟರ್ ಜಗ್ಗು ಭಗವಾನ್ಪುರಿಯಾ ಆತನ ಸಹಚರ ನವ್ ಪಂಡೋರಿಗೆ ತಲುಪಿಸಲು ಉದ್ದೇಶಿಸಲಾಗಿತ್ತು ಎಂದು ಯಾದವ್ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.

ಬಂಧಿತರನ್ನು ರಂಗರ್ ಗ್ರಾಮದ ನಿವಾಸಿಗಳಾದ ಜೋಬನ್ಜಿತ್ ಸಿಂಗ್ ಅಲಿಯಾಸ್ ಜೋಬನ್ ಮತ್ತು ಗೋರಾ ಸಿಂಗ್, ಅಮೃತಸರದ ರಸೂಲ್ಪುರ್ ಕಲ್ಲಾರ್‌ನ ಶೆನ್ಶನ್ ಅಲಿಯಾಸ್ ಶಾಲು ಮತ್ತು ಸನ್ನಿ ಸಿಂಗ್ ಹಾಗೂ ರೂಪನಗರದ ಜಸ್ಪ್ರೀತ್ ಸಿಂಗ್ ಅಲಿಯಾಸ್ ಮೋಟು ಎಂದು ಗುರುತಿಸಲಾಗಿದೆ ಎಂದು ಯಾದವ್ ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕಾಡುವುದು ಅನುಮಾನ!

ಕಾಡುವುದು ಅನುಮಾನ! ಈಗ ಎಲ್ಲೆಲ್ಲೂ ಕೃತಕ ಬುದ್ಧಿಮತ್ತೆಯದೆ ಸುದ್ದಿ! ಕೃತಕ ಬುದ್ಧಿಮತ್ತೆಗೆ ನೈಜ ಬುದ್ಧಿಮತ್ತೆ ಮೂಲವಾದರೂ ಕಾಡುವುದು ಅನುಮಾನ ಕೃತಕ…

3 hours ago

ಓದುಗರ ಪತ್ರ: ಎಐ ಸಾಕ್ಷರತೆ ಕಡ್ಡಾಯವಾಗಲಿ

ಇಂದಿನ ತಾಂತ್ರಿಕ ಯುಗದಲ್ಲಿ ಸರ್ಕಾರಗಳು ಕೇವಲ ನಿಯಂತ್ರಕರಾಗಿ ಉಳಿಯದೆ, ಮಾರ್ಗದರ್ಶಕ ಶಕ್ತಿಯಾಗಿಯೂ ಕಾರ್ಯನಿರ್ವಹಿಸಬೇಕಿದೆ. ಮೊದಲನೆಯದಾಗಿ ಶಿಕ್ಷಣ ವ್ಯವಸ್ಥೆಯಲ್ಲಿ ಮೂಲಭೂತ ಬದಲಾವಣೆ…

3 hours ago

ಓದುಗರ ಪತ್ರ: ಉಚಿತ ಕೊಡುಗೆಗಳ ಬಗ್ಗೆ ಪರಾಮರ್ಶೆ ಅಗತ್ಯ

ಉಚಿತ ಕೊಡುಗೆ ಪ್ರಕಟಿಸುವ ರಾಜಕೀಯ ಪಕ್ಷಗಳ ನಡೆಗೆ ಕಳೆದ ಗುರುವಾರ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿರುವುದು ಸ್ವಾಗತಾರ್ಹವಾಗಿದೆ. ಚುನಾವಣೆ ವೇಳೆ…

3 hours ago

ಸಫಾರಿಗೆ ಸ್ಥಳೀಯರ ಸ್ವಾಗತ… ರೈತ ಮುಖಂಡರ ವಿರೋಧ

ಪ್ರಶಾಂತ್ ಎನ್.ಮಲ್ಲಿಕ್ ಇಂದಿನಿಂದ ಬಂಡೀಪುರ-ನಾಗರಹೊಳೆ ರಾಷ್ಟ್ರೀಯ ಉದ್ಯಾನವನಗಳಲ್ಲಿ ವನ್ಯಜೀವಿ ಸಫಾರಿ ಪುನರಾರಂಭ  ಮೈಸೂರು: ಬಂಡೀಪುರ ಹಾಗೂ ನಾಗರಹೊಳೆ ರಾಷ್ಟ್ರೀಯ ಉದ್ಯಾನವನಗಳಲ್ಲಿ…

3 hours ago

ಮಹಾಶಿವರಾತ್ರಿ ಜಾತ್ರೆ; ೩.೩೫ ಕೋಟಿ ರೂ.ಆದಾಯ

ಮಹಾದೇಶ್ ಎಂ.ಗೌಡ ಮಲೆ ಮಹದೇಶ್ವರ ಬೆಟ್ಟಕೆ ಆಗಮಿಸಿದ ಲಕ್ಷಾಂತರ ಭಕ್ತಾದಿಗಳಿಂದ ಕಾಣಿಕೆ ಅರ್ಪಣೆ  ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ…

3 hours ago

ಪಿಯುಸಿ ಪರೀಕ್ಷೆ ಅಕ್ರಮ ತಡೆಗೆ ವೆಬ್ ಕಾಸ್ಟಿಂಗ್ ಕಣ್ಗಾವಲು

ಕೆ.ಬಿ.ರಮೇಶನಾಯಕ ಮೈಸೂರು ಜಿಲ್ಲೆಯಲ್ಲಿ ೫೧ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಕೆ ಪರೀಕ್ಷಾ ಕೇಂದ್ರಗಳ ವೀಕ್ಷಣೆಗೆ ೧೦ ಉಪನ್ಯಾಸಕರ ತಂಡ ರಚನೆ…

3 hours ago