ISI-backed arms smuggling network busted: Five arrested
ಚಂಡೀಗಢ : ಪಾಕಿಸ್ತಾನದ ಐಎಸ್‌ಐ ಬೆಂಬಲಿತ ಹ್ಯಾಂಡ್ಲರ್‌ಗಳಿಂದ ನಿರ್ವಹಿಸಲ್ಪಡುತ್ತಿದ್ದ ಅತ್ಯಾಧುನಿಕ ಶಸ್ತ್ರಾಸ್ತ್ರಗಳ ಕಳ್ಳಸಾಗಣೆ ಜಾಲವನ್ನು ಭೇದಿಸಿರುವ ಅಮೃತಸರ ಪೊಲೀಸರು, ಐವರನ್ನು ಬಂಧಿಸಿದ್ದಾರೆ ಎಂದು ಪಂಜಾಬ್ ಪೊಲೀಸ್ ಇಲಾಖೆಯ ಮಹಾ ನಿರ್ದೇಶಕ ಗೌರವ್ ಯಾದವ್ ತಿಳಿಸಿದ್ದಾರೆ.
ಆರೋಪಿಗಳಿಂದ ಎಕೆ ಸೈಗಾ 308 ಅಸಾಲ್ಟ್ ರೈಫಲ್, ಎರಡು ಮ್ಯಾಗಜೀನ್, ಎರಡು 9 ಎಂಎಂ ಗ್ಲಾಕ್ ಪಿಸ್ತೂಲ್, ಎಕೆ ರೈಫಲ್ನ 90 ಜೀವಂತ ಗುಂಡುಗಳನ್ನು ಸೇರಿದಂತೆ ರೂ. 7.50 ಲಕ್ಷ ನಗದು, ಒಂದು ಕಾರು ಮತ್ತು ಮೂರು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಯಾದವ್ ಮಾಹಿತಿ ನೀಡಿದ್ದಾರೆ.
ಆರೋಪಿಗಳು ಪಾಕಿಸ್ತಾನ ಮೂಲದ ಐಎಸ್‌ಐ ಕಾರ್ಯಕರ್ತರೊಂದಿಗೆ ನೇರ ಸಂಪರ್ಕ ಹೊಂದಿದ್ದಾರೆಂದು ತಿಳಿದುಬಂದಿದೆ. ವಶಪಡಿಸಿಕೊಂಡಿರುವ ಶಸ್ತ್ರಾಸ್ತ್ರಗಳನ್ನು ಗ್ಯಾಂಗ್‌ಸ್ಟರ್ ಜಗ್ಗು ಭಗವಾನ್ಪುರಿಯಾ ಆತನ ಸಹಚರ ನವ್ ಪಂಡೋರಿಗೆ ತಲುಪಿಸಲು ಉದ್ದೇಶಿಸಲಾಗಿತ್ತು ಎಂದು ಯಾದವ್ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.
ಬಂಧಿತರನ್ನು ರಂಗರ್ ಗ್ರಾಮದ ನಿವಾಸಿಗಳಾದ ಜೋಬನ್ಜಿತ್ ಸಿಂಗ್ ಅಲಿಯಾಸ್ ಜೋಬನ್ ಮತ್ತು ಗೋರಾ ಸಿಂಗ್, ಅಮೃತಸರದ ರಸೂಲ್ಪುರ್ ಕಲ್ಲಾರ್‌ನ ಶೆನ್ಶನ್ ಅಲಿಯಾಸ್ ಶಾಲು ಮತ್ತು ಸನ್ನಿ ಸಿಂಗ್ ಹಾಗೂ ರೂಪನಗರದ ಜಸ್ಪ್ರೀತ್ ಸಿಂಗ್ ಅಲಿಯಾಸ್ ಮೋಟು ಎಂದು ಗುರುತಿಸಲಾಗಿದೆ ಎಂದು ಯಾದವ್ ಹೇಳಿದ್ದಾರೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…