ಗಾಜಾ: ಕದನ ವಿರಾಮ ಘೋಷಣೆಯಾದ ಬಳಿಕವೂ ಇಸ್ರೇಲ್ ತನ್ನ ವಾಯುದಾಳಿಯನ್ನು ಮುಂದುವರಿಸಿದೆ.
ಇಂದು ಗಾಜಾದಲ್ಲಿ ನಡೆಸಿದ ವೈಮಾನಿಕ ದಾಳಿಯಲ್ಲಿ ಕನಿಷ್ಠ 70 ಮಂದಿ ಪ್ಯಾಲೆಸ್ತೀನಿಯರು ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಗಾಜಾಪಟ್ಟಿಯ ಉತ್ತರ ಮತ್ತು ದಕ್ಷಿಣ ಪ್ರದೇಶಗಳಲ್ಲಿ ಹಲವು ಮನೆಗಳು ಹಾಗೂ ಮೂಲ ಸೌಕರ್ಯಗಳನ್ನು ಗುರಿಯಾಗಿಸಿಕೊಂಡು ಇಸ್ರೇಲ್ ಸೇನೆ ವಾಯುದಾಳಿ ನಡೆಸಿದೆ. ಈ ದಾಳಿಯಲ್ಲಿ ಹಲವು ಹಮಾಸ್ ನಾಯಕರೂ ಹತ್ಯೆಗೀಡಾಗಿದ್ದಾರೆ.
ಕಳೆದ ಎರಡು ದಿನಗಳ ಹಿಂದೆಯಷ್ಟೇ ಭೀಕರ ವೈಮಾನಿಕ ದಾಳಿ ನಡೆಸಿದ್ದ ಇಸ್ರೇಲ್, ಗಾಜಾದಲ್ಲಿ 400ಕ್ಕೂ ಅಧಿಕ ಮಂದಿಯನ್ನು ಹತ್ಯೆ ಮಾಡಿತ್ತು.
ಕದನ ವಿರಾಮ ಘೋಷಣೆಯ ಬಳಿಕ ಒಪ್ಪಂದದ ಪ್ರಕಾರ ಬಾಕಿಯಿರುವ 59 ಒತ್ತೆಯಾಳುಗಳನ್ನು ಬಿಡುಗಡೆ ಮಾಡಲು ಹಮಾಸ್ ನಿರಾಕರಿಸಿದ ಬಳಿಕ ಇಸ್ರೇಲ್ ದಾಳಿ ನಡೆಸಿದೆ ಎಂದು ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ.
ನಂಜನಗೂಡು: ಜಮೀನಿಗೆ ಬೈಕ್‌ನಲ್ಲಿ ಹೋಗುತ್ತಿದ್ದ ರೈತ ದಂಪತಿಗಳ ಮೇಲೆ ಚಿರತೆ ದಾಳಿ ನಡೆಸಿದ್ದು, ಮಗು ಸೇರಿದಂತೆ ಮೂವರಿಗೆ ಗಂಭೀರ ಗಾಯಗಳಾಗಿರುವ…
ಹಿರಿಯ ರಂಗಕರ್ಮಿ ಹೆಗ್ಗೂಡು ಪ್ರಸನ್ನ ನೇತೃತ್ವದಲ್ಲಿ ನಡೆದ ಸಭೆ; ಸುರೇಂದ್ರ ಕೌಲಗಿ ಮತ್ತಿತರರು ಭಾಗಿ ನಂಜನಗೂಡು: ಮಹಾತ್ಮ ಗಾಂಧೀಯವರ ಸರ್ವೋದಯದ…
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ 21ನೇ ಘಟಿಕೋತ್ಸವದ ಸಂಭ್ರಮ ಮನೆಮಾಡಿದ್ದು, ಒಟ್ಟು 8 ಮಂದಿ ಗಣ್ಯರಿಗೆ ಗೌರವ ಡಾಕ್ಟರೇಟ್…
ಬೆಂಗಳೂರು: ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕು ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು ಶಾಲೆಗೆ…
ಬೀದರ್: ನಿಗೂಢ ವಸ್ತುವೊಂದು ಸ್ಫೋಟಗೊಂಡ ಪರಿಣಾಮ ಆರು ಮಕ್ಕಳಿಗೆ ಗಂಭೀರ ಗಾಯಗಳಾಗಿರುವ ಘಟನೆ ಹುಮನಾಬಾದ್ ತಾಲ್ಲೂಕಿನ ಮೋಳಕೇರಾ ಗ್ರಾಮದಲ್ಲಿ ನಡೆದಿದೆ.…
ಮೈಸೂರು: ಮಾಜಿ ಸಚಿವ ಸಿ.ಟಿ.ರವಿ ಅವರಿಂದು ಮೈಸೂರು ಮುಕ್ತ ವಿಶ್ವವಿದ್ಯಾನಿಲಯದಿಂದ ಪಿಎಚ್‌ಡಿ ಪದವಿ ಪಡೆದಿದ್ದಾರೆ. ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್…