ಟೆಹರಾನ್ : ಇರಾನ್, ಇಸ್ರೇಲ್ ಮೇಲೆ ಪೂರ್ಣ ಪ್ರಮಾಣದ ಯುದ್ಧ ಘೋಷಿಸಿದೆ. ಈ ಬೆನ್ನಲ್ಲೇ ಮಿತ್ರ ರಾಷ್ಟ್ರ ಇಸ್ರೇಲ್ ಬೆಂಬಲಿಸಿ ಯುದ್ಧದಲ್ಲಿ ಮಧ್ಯಪ್ರವೇಶಿಸುವ ಅಮೆರಿಕ ಪ್ರಯತ್ನಕ್ಕೆ ಇರಾನ್ ಎಚ್ಚರಿಕೆ ನೀಡಿದೆ.
ಯುದ್ಧದಲ್ಲಿ ನೀವು (ಅಮೆರಿಕ) ಇಸ್ರೇಲ್ ಅನ್ನು ಬೆಂಬಲಿಸಿದರೆ ಪ್ರತಿರೋಧ ಒಡ್ಡಲು ನಾವು ಸಿದ್ಧ ಎಂದು ಇರಾನ್‌ನ ಉಪ ವಿದೇಶಾಂಗ ಸಚಿವ ಹೇಳಿದ್ದಾರೆ.
ಯಹೂದಿಗಳ ಪರವಾಗಿ ಅಮೆರಿಕ ಯುದ್ಧದಲ್ಲಿ ಸಕ್ರಿಯವಾಗಿ ಪ್ರವೇಶಿಸಲು ಬಂದರೆ, ಆಕ್ರಮಣಕಾರರಿಗೆ ಪಾಠ ಕಲಿಸಲು, ರಾಷ್ಟ್ರೀಯ ಭದ್ರತೆ ಹಾಗೂ ಹಿತಾಸಕ್ತಿಯನ್ನು ರಕ್ಷಿಸಲು ಇರಾನ್ ತನ್ನ ಆಯುದ್ಧಗಳನ್ನು ಬಳಸಬೇಕಾಗುತ್ತದೆ ಎಂದು ವಿದೇಶಾಂಗ ಸಚಿವ ಕಾಝೆಂ ಘರಿಬಾಬಾದಿ ಎಚ್ಚರಿಕೆ ನೀಡಿದ್ದಾರೆ.
ಇರಾನ್ ʻಟ್ರು ಪ್ರಾಮಿಸ್ 3ʼ ಕಾರ್ಯಚರಣೆಯ 12ನೇ ಅಲೆಯ ಭಾಗವಾಗ ಅತಿ ಭಾರದ, ಧೀರ್ಘ ಶ್ರೇಣಿಯ ಎರಡು ಹಂತದ ಸಿಜ್ಜೀಲ್ ಕ್ರಿಪಣಿ ದಾಳಿಯನ್ನು ಪ್ರಾರಂಭಿಸಿರುವದಾಗಿ ಇರಾನ್ ಘೋಷಿಸಿದೆ.
ತಮ್ಮ(ಇರಾನ್) ದೇಶದ ಹಿತಾಶಕ್ತಿ ಕಾಪಾಡುವ ನಿಟ್ಟಿನಲ್ಲಿ ಸೇನಾ ತೀರ್ಮಾನವನ್ನು ಮಾಡುವ ಅಧಿಕಾರಿಗಳಿಗೆ ಎಲ್ಲಾ ಆಯ್ಕೆಗಳು ಮುಂದಿವೆ ಎಂದು ಅವರು ಹೇಳಿರುವುದಾಗಿ ಅಲ್ಲಿನ ಸರ್ಕಾರಿ ಮಾಧ್ಯಮಗಳು ವರದಿ ಮಾಡಿವೆ.
ಮಹಾದೇಶ್ ಎಂ ಗೌಡ ಹನೂರು: ತಮ್ಮ ಊರಿನಿಂದ ದೂರದಲ್ಲಿರುವ ಶಾಲಾ ಕಾಲೇಜುಗಳಿಗೆ ಹೋಗುವುದಕ್ಕೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಲು ಕೋರಿ…
ಬಿ.ಎಸ್.ವಿನಯ್ ಮೊನ್ನೆ ಯಳಂದೂರಿನ ಬೀದಿಯಲ್ಲಿ ಸಾಗುತ್ತಿದ್ದಾಗ ಬಳೆಮಂಟಪದ ಮುಂದೆ ಪರಿಚಿತ ಹಿರಿಯರೊಬ್ಬರು ಎದುರಾದರು. ‘ಯಜಮಾನರೇ, ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ?’ ಕೇಳಿದರೆ…
ವಿನುತ ಕೋರಮಂಗಲ ನಮ್ಮ ಹಟ್ಟಿಯಿಂದ ನಾಲ್ಕೈದು ಕಿ.ಮೀ. ದೂರವಿರುವ ನಮ್ಮೂರಿನ ಕೆರೆಯ ಅಂಗಳಕ್ಕೆ ನಾವೇನು ನಡೆದುಕೊಂಡು ಹೋಗುತ್ತಿರಲಿಲ್ಲ. ಗಂಗೆ ಎಂದು…
ಅಕ್ಷತಾ ಖಾಲಿ ಹಾಳೆಯ ಒಂದೇ ಮಗ್ಗುಲಿನಲ್ಲಿ ಚಿತ್ತಿಲ್ಲದಂತೆ ಬರೆದು, ಪದ ಮಿತಿಯನ್ನು ಬೆರಳು ಲೆಕ್ಕದಲ್ಲಿ ಎಣಿಸಿ, ಪತ್ರಿಕೆಯ ವಿಳಾಸಕ್ಕೆ ಕಳುಹಿಸಿದ…
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…