ಟೆಹರಾನ್: ಇಸ್ರೇಲ್ ನಡೆಸುತ್ತಿರುವ ಕ್ಷಿಪಣಿ ದಾಳಿಗೆ ಇರಾನ್ ರಾಜಧಾನಿ ಟೆಹ್ರಾನ್ ನಲ್ಲಿ ಛಿದ್ರಗೊಂಡ ಆಕಾಶದೆತ್ತರದ ಕಟ್ಟಡಗಳು..! ಟೆಹರಾನ್‌ನಲ್ಲಿನ ಬೃಹತ್ ಕಟ್ಟಡಗಳು ಧರೆಗುರುಳಿ ಕಟ್ಟಡಗಳ ಸುತ್ತಲೂ ಎಲ್ಲೆಂದರಲ್ಲಿ ಹೊಗೆ ಗೂಡಾಂತಾಗಿರುವ ವೀಡಿಯೋವನ್ನು ಐಡಿಎಫ್ ಬಿಡುಗಡೆ ಮಾಡಿದೆ.
ಇರಾನ್ ಈಗಾಗಲೇ ಅಮೇರಿಕಾ ಹಡಗುಗಳಿಗೆ ನಿಷೇಧ ಏರಿದ್ದು, ಇರಾನ್‌ನಲ್ಲಿ ಇದೀಗ ಒಂದು ದಿನ ಇಂಟರ್ನೆಟ್ ಬಂದ್ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇತ್ತ ದುಬೈನಲ್ಲಿ ನಿರಂತರವಾಗಿ ಸ್ಫೋಟ ಸಂಭವಿಸುತ್ತಿದ್ದು, ಕ್ಷಣ ಕ್ಷಣಕ್ಕೂ ಭಯದ ವಾತಾವರಣ ಹೆಚ್ಚಾಗುತ್ತಿದೆ. ದೊಡ್ಡ ದೊಡ್ಡ ಕಟ್ಟಡಗಳಲ್ಲಿ ವಾಸ ಮಾಡುತ್ತಿರುವ ಜನರು ಆತಂಕಕ್ಕೆ ಒಳಗಾಗಿದ್ದಾರೆ.
ಇನ್ನು ಅಮೇರಿಕಾ ಮತ್ತು ಇಸ್ರೇಲ್ ತನ್ನ ಮೇಲೆ ದಾಳಿ ಮಾಡಿದ ಕೆಲವೇ ಗಂಟೆಗಳಲ್ಲಿ ಇರಾನ್ ಪ್ರತೀಕಾರ ತೀರಿಸಿಕೊಂಡಿದೆ. ಅಮೇರಿಕಾದ ವಾಯುನೆಲೆಗಳನ್ನ ಹೊಂದಿರುವ ಯುಎಇ, ಬಹ್ರೇನ್, ಕುವೈತ್ ಮತ್ತು ಕತಾರ್ ದೇಶಗಳ ಮೇಲೆ ಸರಣಿ ದಾಳಿ ನಡೆಸಿರುವುದನನು ಇರಾನ್ ಸರ್ಕಾರ ಖಚಿತಪಡಿಸಿದೆ. ಈ ಯುದ್ಧದ ಬೆಳವಣಿಗೆಯಿಂದಾಗಿ ಇಡೀ ಗಲ್ಫ್ ರಾಷ್ಟ್ರಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಿಗ್ ಬಜೆಟ್ ಸಿನಿಮಾ ಟಾಕ್ಸಿಕ್ ಇರಾನ್- ಇಸ್ರೇಲ್ ಯುದ್ಧದ ಕಾರಣದಿಂದಾಗಿ ಮುಂದೂಡಲ್ಪಟ್ಟಿದೆ. ಮಾರ್ಚ್.19ರಂದು ಬಿಡುಗಡೆಯಾಗಬೇಕಿದ್ದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಗ್ರಾಮದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ದೇವಸ್ಥಾನದ ಜಾತ್ರಾ ಮಹೋತ್ಸವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮದ ಚಂಗಡಿ ಗ್ರಾಮದ ಸಮೀಪ ಪ್ರತಿನಿತ್ಯ…
ಮೈಸೂರಿನ ಊಟಿ ರಸ್ತೆಯಲ್ಲಿರುವ ಜೆಎಸ್‌ಎಸ್ ಕಾಲೇಜು ಬಸ್ ನಿಲ್ದಾಣದ ಮೂಲಕ ನಂಜನಗೂಡು ಹಾಗೂ ಚಾಮರಾಜನಗರ ಸಂಜೆಯ ವೇಳೆ ಸಾಕಷ್ಟು ಬಸ್‌ಗಳಿಲ್ಲದೆ…
ಸೇಡು.. ಕೇಡು ! ಯುದ್ಧವೆಂದರೆ ಏನಿದೆ ಅದರಲ್ಲಿ.. ದೇಶ-ದೇಶಗಳ ನಡುವೆ ಬರೀ ದ್ವೇಷ, ಸೇಡು ಭರಿಸಲಾಗದ ಕೇಡು ಗೆದ್ದವರ ಹಾಡು…
ದೇಶದಲ್ಲಿ ಸಾವಿರಾರು ಯುವಕರು ವಿದ್ಯಾವಂತರಾಗಿದ್ದರೂ ಉದ್ಯೋಗಾವಕಾಶಗಳ ಕೊರತೆಯಿಂದ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಇತ್ತೀಚಿನ ಅಂಕಿ ಅಂಶಗಳ ಪ್ರಕಾರ ಕೇಂದ್ರ ಹಾಗೂ ರಾಜ್ಯ…