Mysore
13
few clouds

Social Media

ಭಾನುವಾರ, 21 ಡಿಸೆಂಬರ್ 2025
Light
Dark

ಗಾಜಾದಲ್ಲಿ ಮುಂದುವರಿದ ಇಸ್ರೇಲ್‌ ದಾಳಿ: 100ಕ್ಕೂ ಹೆಚ್ಚು ಜನರು ಸಾವು

ಗಾಜಾ: ಗಾಜಾದಲ್ಲಿ ಇಸ್ರೇಲ್‌ ದಾಳಿ ಮುಂದುವರಿದಿದ್ದು, ಶಾಲೆಯೊಂದರ  ಮೇಲೆ ನಡೆದ ವೈಮಾನಿಕ ದಾಳಿಯಲ್ಲಿ 100ಕ್ಕೂ ಹೆಚ್ಚು ಪ್ಯಾಲೆಸ್ತೇನಿಯರು ಮೃತಪಟ್ಟಿದ್ದಾರೆ.

ಗಾಜಾದ ಅಲ್-ತಬಾಯೀನ್‌ ಶಾಲೆಯಲ್ಲಿ ಮುಂಜಾನೆ ಪ್ರಾರ್ಥನೆ ನಡೆಯುತ್ತಿದ್ದ ವೇಳೆ ಈ ದಾಳಿ ನಡೆಸಲಾಗಿದೆ. ಘಟನೆಯಲ್ಲಿ 100ಕ್ಕೂ ಹೆಚ್ಚು ಪ್ಯಾಲೆಸ್ತೇನಿಯರು ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎನ್ನಲಾಗಿದೆ.

ಅಲ್‌ ತಬಾಯೀನ್‌ ಶಾಲೆಯಲ್ಲಿ ಅಡಗಿಕೊಂಡಿರುವ ಹಮಾಸ್‌ ಕಮಾಂಡ್‌ ಮತ್ತು ಕಂಟ್ರೋಲ್‌ ಸೆಂಟರ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಭಯೋತ್ಪಾದಕರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದೆ ಎಂದು ಐಎಎಫ್‌ ಮಾಹಿತಿ ನೀಡಿದೆ.

ದಾಳಿಗೂ ಮುನ್ನ ನಾಗರಿಕರಿಗೆ ಅಪಾಯವಾಗುವುದನ್ನು ತಪ್ಪಿಸಲು ಹಲವು ಕ್ರಮಗಳನ್ನು ತೆಗೆದುಕೊಳ್ಳಲಾಗಿತ್ತು. ಆದರೂ ಇಲ್ಲಿ ದಾಳಿ ನಡೆಸಲಾಗಿದೆ ಎಂದು ತಿಳಿಸಲಾಗಿದೆ.

ಘಟನೆಯಲ್ಲಿ 50ಕ್ಕೂ ಹೆಚ್ಚು ನಾಗರಿಕರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.

Tags:
error: Content is protected !!