ಗಾಜಾ: ಗಾಜಾದಲ್ಲಿ ಇಸ್ರೇಲ್ ದಾಳಿ ಮುಂದುವರಿದಿದ್ದು, ಶಾಲೆಯೊಂದರ ಮೇಲೆ ನಡೆದ ವೈಮಾನಿಕ ದಾಳಿಯಲ್ಲಿ 100ಕ್ಕೂ ಹೆಚ್ಚು ಪ್ಯಾಲೆಸ್ತೇನಿಯರು ಮೃತಪಟ್ಟಿದ್ದಾರೆ.
ಗಾಜಾದ ಅಲ್-ತಬಾಯೀನ್ ಶಾಲೆಯಲ್ಲಿ ಮುಂಜಾನೆ ಪ್ರಾರ್ಥನೆ ನಡೆಯುತ್ತಿದ್ದ ವೇಳೆ ಈ ದಾಳಿ ನಡೆಸಲಾಗಿದೆ. ಘಟನೆಯಲ್ಲಿ 100ಕ್ಕೂ ಹೆಚ್ಚು ಪ್ಯಾಲೆಸ್ತೇನಿಯರು ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎನ್ನಲಾಗಿದೆ.
ಅಲ್ ತಬಾಯೀನ್ ಶಾಲೆಯಲ್ಲಿ ಅಡಗಿಕೊಂಡಿರುವ ಹಮಾಸ್ ಕಮಾಂಡ್ ಮತ್ತು ಕಂಟ್ರೋಲ್ ಸೆಂಟರ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಭಯೋತ್ಪಾದಕರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದೆ ಎಂದು ಐಎಎಫ್ ಮಾಹಿತಿ ನೀಡಿದೆ.
ದಾಳಿಗೂ ಮುನ್ನ ನಾಗರಿಕರಿಗೆ ಅಪಾಯವಾಗುವುದನ್ನು ತಪ್ಪಿಸಲು ಹಲವು ಕ್ರಮಗಳನ್ನು ತೆಗೆದುಕೊಳ್ಳಲಾಗಿತ್ತು. ಆದರೂ ಇಲ್ಲಿ ದಾಳಿ ನಡೆಸಲಾಗಿದೆ ಎಂದು ತಿಳಿಸಲಾಗಿದೆ.
ಘಟನೆಯಲ್ಲಿ 50ಕ್ಕೂ ಹೆಚ್ಚು ನಾಗರಿಕರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…
ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…
ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…
ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…
ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…