ಶ್ರೀಹರಿಕೋಟಾ : ಇಸ್ರೊ 101ನೇ ಭೂ ವೀಕ್ಷಣಾ ಉಪಗ್ರಹ ಉಡಾವಣೆ ಮಾಡಿ ಇತಿಹಾಸ ಸೃಷ್ಟಿಸಿದೆ. ಆದರೆ, ಯಶಸ್ವಿಯಾಗಿ ಉಡಾವಣೆ ಮಾಡಿ ಉಪಗ್ರಹದಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡು, ಕಾರ್ಯಾಚರಣೆ ಸಾಧಿಸಲು ಸಾಧ್ಯವಾಗಲಿಲ್ಲ.
ಈ ಬಗ್ಗೆ ಅಧಿಕೃತ ಮಾಹಿತಿ ನೀಡಿರುವ ಇಸ್ರೊ ಅಧ್ಯಕ್ಷ ವಿ.ನಾರಾಯಣನ, EOS-09 ಉಪಗ್ರಹವು ಕಾರ್ಯಾಚಣೆಯನ್ನು ಸಾಧಿಸಲು ಸಾಧ್ಯವಾಗಲಿಲ್ಲ ಎಂದು ಹೇಳಿದ್ದಾರೆ.
ಇಂದು ಬೆಳ್ಳಂಬೆಳಗ್ಗೆ 5.59ಕ್ಕೆ ಆಂದ್ರಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಪಿಎಸ್‌ಎಲ್‌ವಿ-61 ಮೂಲಕ EOS-09 ಉಪಗ್ರಹ ಉಡಾವಣೆಯನ್ನು ಮಾಡಲಾಯಿತು, ಆದರೆ ಪಿಎಸ್‌ಎಲ್‌ವಿ-ಸಿ 61 ಕಾರ್ಯಕ್ಷಮತೆ 2ನೇ ಹಂತದವರೆಗೆ ಸಾಮಾನ್ಯವಾಗಿತ್ತು. 3ನೇ ಹಂತದಲ್ಲಿ ವೀಕ್ಷಣೆಯಿಂದಾಗಿ ಕಾರ್ಯಾಚರಣೆ ಸಾಧಿಸಲು ಸಾಧ್ಯವಾಗಲಿಲ್ಲ ಎಂದು ತಿಳಿದು ಬಂದಿದೆ.
ಈ ಉಪಗ್ರಹವು 1696.24ಕೆಜಿ ತೂಕವಿದ್ದು, ಇದು ಇಸ್ರೊ ನಿರ್ಮಿಸಿದ ಅತ್ಯಂತ ಭಾರವಾದ ಉಪಗ್ರಹವಾಗಿದೆ. ಇದರ ಜೀವಿತಾವಧಿ 5 ವರ್ಷ ಆಗಿತ್ತು. ಈ ಉಪಗ್ರಹ ಯಶಸ್ವಿಯಾಗಿದ್ದರೇ ಎಲ್ಲಾ ಹವಾಮಾನ ಪರಿಸ್ಥಿತಿಗಳಲ್ಲಿ ಹೆಚ್ಚಿನ ರೆಸಲ್ಯೂಶನ್ ಫೋಟೊಗಳನ್ನು ತಲುಪಿಸುತ್ತಿತ್ತು.
ಆದರೆ, ಈಗ ತಾಂತ್ರಿಕ ಕಾರಣದಿಂದ ಉಡಾವಣೆ ಯಶಸ್ವಿಯಾಗಿಲ್ಲ ಎನ್ನಲಾಗಿದೆ.
ಪ್ರಶಾಂತ್ ಎನ್ ಮಲ್ಲಿಕ್ ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…
ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…
ಮಹಾದೇಶ್ ಎಂ ಗೌಡ ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…
ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…
ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್ ತೀವ್ರ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…