ದೇಶ- ವಿದೇಶ

ISRO | 101ನೇ ಮಹತ್ವಾಕಾಂಕ್ಷೆಯ ಉಪಗ್ರಹ ವಿಫಲ

ಶ್ರೀಹರಿಕೋಟಾ : ಇಸ್ರೊ 101ನೇ ಭೂ ವೀಕ್ಷಣಾ ಉಪಗ್ರಹ ಉಡಾವಣೆ ಮಾಡಿ ಇತಿಹಾಸ ಸೃಷ್ಟಿಸಿದೆ. ಆದರೆ, ಯಶಸ್ವಿಯಾಗಿ ಉಡಾವಣೆ ಮಾಡಿ ಉಪಗ್ರಹದಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡು, ಕಾರ್ಯಾಚರಣೆ ಸಾಧಿಸಲು ಸಾಧ್ಯವಾಗಲಿಲ್ಲ.

ಈ ಬಗ್ಗೆ ಅಧಿಕೃತ ಮಾಹಿತಿ ನೀಡಿರುವ ಇಸ್ರೊ ಅಧ್ಯಕ್ಷ ವಿ.ನಾರಾಯಣನ, EOS-09 ಉಪಗ್ರಹವು ಕಾರ್ಯಾಚಣೆಯನ್ನು ಸಾಧಿಸಲು ಸಾಧ್ಯವಾಗಲಿಲ್ಲ ಎಂದು ಹೇಳಿದ್ದಾರೆ.

ಇಂದು ಬೆಳ್ಳಂಬೆಳಗ್ಗೆ 5.59ಕ್ಕೆ ಆಂದ್ರಪ್ರದೇಶದ ಶ್ರೀಹರಿಕೋಟಾದ ಸತೀಶ್‌ ಧವನ್‌ ಬಾಹ್ಯಾಕಾಶ ಕೇಂದ್ರದಿಂದ ಪಿಎಸ್‌ಎಲ್‌ವಿ-61 ಮೂಲಕ EOS-09 ಉಪಗ್ರಹ ಉಡಾವಣೆಯನ್ನು ಮಾಡಲಾಯಿತು, ಆದರೆ ಪಿಎಸ್‌ಎಲ್‌ವಿ-ಸಿ 61 ಕಾರ್ಯಕ್ಷಮತೆ 2ನೇ ಹಂತದವರೆಗೆ ಸಾಮಾನ್ಯವಾಗಿತ್ತು. 3ನೇ ಹಂತದಲ್ಲಿ ವೀಕ್ಷಣೆಯಿಂದಾಗಿ ಕಾರ್ಯಾಚರಣೆ ಸಾಧಿಸಲು ಸಾಧ್ಯವಾಗಲಿಲ್ಲ ಎಂದು ತಿಳಿದು ಬಂದಿದೆ.

ಈ ಉಪಗ್ರಹವು 1696.24ಕೆಜಿ ತೂಕವಿದ್ದು, ಇದು ಇಸ್ರೊ ನಿರ್ಮಿಸಿದ ಅತ್ಯಂತ ಭಾರವಾದ ಉಪಗ್ರಹವಾಗಿದೆ. ಇದರ ಜೀವಿತಾವಧಿ 5 ವರ್ಷ ಆಗಿತ್ತು. ಈ ಉಪಗ್ರಹ ಯಶಸ್ವಿಯಾಗಿದ್ದರೇ ಎಲ್ಲಾ ಹವಾಮಾನ ಪರಿಸ್ಥಿತಿಗಳಲ್ಲಿ ಹೆಚ್ಚಿನ ರೆಸಲ್ಯೂಶನ್‌ ಫೋಟೊಗಳನ್ನು ತಲುಪಿಸುತ್ತಿತ್ತು.
ಆದರೆ, ಈಗ ತಾಂತ್ರಿಕ ಕಾರಣದಿಂದ ಉಡಾವಣೆ ಯಶಸ್ವಿಯಾಗಿಲ್ಲ ಎನ್ನಲಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಸಾಧಕರಿಗೆ ಸಂದ ಗೌರವ

ಮೈಸೂರು ವಿಶ್ವವಿದ್ಯಾನಿಲಯಕ್ಕೆ ರಾಷ್ಟ್ರಕವಿ ಕುವೆಂಪು ಅವರು ನೀಡಿರುವ ಅಪಾರ ಕೊಡುಗೆಯ ಸ್ಮರಣಾರ್ಥ ಹಾಗೂ ಅವರ ಪರಿಕಲ್ಪನೆಯ ಮಾನಸಗಂಗೋತ್ರಿಯಲ್ಲಿ ಇರುವ ಬಯಲು…

2 hours ago

ಓದುಗರ ಪತ್ರ: ನದಿಗಳ ಜೋಡಣೆಗೆ ಕೇಂದ್ರ ಸರ್ಕಾರ ಮುಂದಾಗಲಿ

ಕಾವೇರಿ ನದಿ ನೀರಿನ ಹಂಚಿಕೆಯ ವಿಷಯದಲ್ಲಿ ತಮಿಳುನಾಡು ಸರ್ಕಾರವು ಪದೇ ಪದೇ ಕರ್ನಾಟಕದ ಮೇಲೆ ಒತ್ತಡ ಹೇರುವುದು ಹಾಗೂ ಇದರಿಂದಾಗಿ…

2 hours ago

ಓದುಗರ ಪತ್ರ: ಡಿಜಿಟಲ್ ಲಗೇಜ್ ಲಾಕರ್ ಎಲ್ಲೆಡೆ ವಿಸ್ತರಿಸಲಿ

ರಾಜ್ಯದ ಪ್ರಮುಖ ಬಸ್ ನಿಲ್ದಾಣಗಳಲ್ಲಿ ಅತ್ಯಾಧುನಿಕ ಡಿಜಿಟಲ್ ಲಗೇಜ್ ಲಾಕರ್ ವ್ಯವಸ್ಥೆ ಆರಂಭಿಸಿರುವುದು ಶ್ಲಾಘನೀಯ ಹೆಜ್ಜೆಯಾಗಿದೆ. ಪ್ರತಿದಿನ ರಾಜದಾದ್ಯಂತ ಹೆಚ್ಚಿನ…

2 hours ago

ಮಗನ ನೆನಪಲ್ಲಿ ಪೋಷಕರ ಮಾದರಿ ಕಾರ್ಯ

ಪ್ರೊ. ಬಿ. ಜಯಪ್ರಕಾಶಗೌಡ, ಅಧ್ಯಕ್ಷರು, ಕರ್ನಾಟಕ ಸಂಘ, ಮಂಡ್ಯ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನಗದು ಪಶಸ್ತಿ ಪ್ರೋತ್ಸಾಹ ಮಂಡ್ಯದ ಕರ್ನಾಟಕ…

2 hours ago

ಭತ್ತದ ಬೆಳೆಗೆ ಎಲೆ ಸುರುಳಿ-ಬೆಂಕಿ ರೋಗದ ಬಾಧೆ

ಸಿಂಗಿ ಸತೀಶ್ ತಾಕುಗಳನ್ನು ಪರಿಶೀಲಿಸಿದ ಕೃಷಿ ವಿಜ್ಞಾನಗಳು; ಮುನ್ನೆಚ್ಚರಿಕೆ ವಹಿಸಲು ಗೋಣಿಕೊಪ್ಪ ಕೃಷಿ ವಿಜ್ಞಾನ ಕೇಂದ್ರ ಸಲಹೆ  ಗೋಣಿಕೊಪ್ಪ: ಕೊಡಗಿನಲ್ಲಿ ಭತ್ತ…

2 hours ago

ಸಕ್ಕರೆ ನಾಡಿನಲ್ಲಿ ಬರದಿಂದ ಕಂಗಾಲಾದ ರೈತರು

ಹೇಮಂತ್‌ಕುಮಾರ್ ಮಂಡ್ಯ ಜಿಲ್ಲೆಯಲ್ಲಿ ೪೮,೫೯೧ ಹೆ. ಬೆಳೆ ಹಾನಿ ೫೪.೫೩ ಕೋಟಿ ರೂ. ನಷ್ಟದ ಅಂದಾಜು ಮಂಡ್ಯ: ಜಿಲ್ಲೆಯಲ್ಲಿ ಕಳೆದ…

2 hours ago