ನವದೆಹಲಿ: ಕೇಂದ್ರ ಸರ್ಕಾರವು, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಹಾಗೂ ಬಾಹ್ಯಾಕಾಶ ಇಲಾಖೆಯ ಕಾರ್ಯದರ್ಶಿಯಾಗಿ ವಿ.ನಾರಾಯಣನ್ ಆಯ್ಕೆಯಾಗಿದ್ದಾರೆ.
ಇಸ್ರೋದ ಪ್ರಸ್ತುತ ಮುಖ್ಯಸ್ಥ ಎಸ್.ಸೋಮನಾಥ್ ಅವರ ಅಧಿಕಾರವಧಿ 2 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಜನವರಿ.14 ರಂದು ನಿವೃತ್ತರಾಗಲಿದ್ದಾರೆ. ಇವರ ನಿವೃತ್ತಿಯ ನಂತರ ವಿ.ನಾರಾಯಣನ್ ಅವರು ಅಧಿಕಾರವಹಿಸಿಕೊಳ್ಳಲಿದ್ದಾರೆ.
ದೇಶದ ಹಿರಿಯ ಗಗನಯಾತ್ರಿ ಹಾಗೂ ಕ್ರಯೋಜೆನಿಕ್ ಎಂಜಿನ್ ತಜ್ಞ ವಿ.ನಾರಾಯಣನ್ ಅವರು ಜನವರಿ.14 ರಂದು ಪ್ರಸ್ತುತ ಇಸ್ರೋ ಮುಖ್ಯಸ್ಥರಾಗಿರುವ ಎಸ್.ಸೋಮನಾಥ್ ಅವರಿಂದ ಅಧಿಕಾರ ವಹಿಸಿಕೊಳಲಿದ್ದಾರೆ. ಇವರ ಅವಧಿ ಎರಡು ವರ್ಷಗಳ ಅವಧಿಗೆ ಇರುತ್ತದೆ ಎಂದು ಹೇಳಲಾಗಿದೆ. ವಿ.ನಾರಾಯಣನ್ ಅವರಿಗೆ ಸುಮಾರು ನಾಲ್ಕು ದಶಕಗಳ ಅನುಭವವಿದೆ.
ನಾರಾಯಣನ್ ಪ್ರಸ್ತುತ ತಮಿಳುನಾಡಿನ ಮಹೇಂದ್ರಗಿರಿಯಲ್ಲಿರುವ ಇಸ್ರೋದ ಎಲ್‌ಪಿಎಸ್‌ಸಿಯ ನಿರ್ದೇಶಕರಾಗಿದ್ದಾರೆ. ವಲಿಯಮಲದಲ್ಲಿರುವ ಲಿಕ್ವಿಡ್ ಪ್ರೊಪಲ್ಷನ್ ಸಿಸ್ಟಮ್ ಸೆಂಟರ್(ಎಲ್‌ಪಿಎಸ್‌ಸಿ) ನಿರ್ದೇಶಕರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ. 1984ರಲ್ಲಿ ನಾರಾಯಣನ್ ಅವರು ಇಸ್ರೋಗೆ ಸೇರ್ಪಡೆಯಾಗಿದ್ದು, ಆದಿತ್ಯ ಬಾಹ್ಯಾಕಾಶ ನೌಕೆ ಹಾಗೂ ಜಿಎಸ್‌ಎಲ್‌ವಿ ಎಂಕೆ-3 ಮಿಷನ್‌ನಂತಹ ಮುಖ್ಯ ಯೋಜನೆಗಳಿಗೆ ಗಮನಾರ್ಹ ಕೊಡುಗೆಯನ್ನು ನೀಡಿದ್ದರೆ. ಹೀಗಾಗಿ ನಾರಾಯಣನ್ ಪರಿಣತಿ ಮತ್ತು ಸಾಧನೆಗಳನ್ನು ಗುರುತಿಸಿ ಹಲವು ಪ್ರಶಸ್ತಿಗಳು ಬಂದಿವೆ. ಅಲ್ಲದೇ ಭಾರತದ ಆಸ್ಟ್ರೋನಾಟಿಕಲ್ ಸೊಸೈಟಿಯಿಂದ ಶ್ರೀ ಪ್ರಶಸ್ತಿ ಹಾಗೂ ಐಐಟಿ ಖರಗ್‌ಪುರದಿಂದ ಡಿಸ್ಟಿಂಗ್ವಿಶ್ಡ್ ಅಲುಮ್ನಸ್ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್ ಡಿಸೋಜ ಮಡಿಕೇರಿ: ಈ ಬಾರಿಯ…
ಭೇರ್ಯ ಮಹೇಶ್ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…
ದೊಡ್ಡ ಕವಲಂದೆ : ಗಬ್ಬೆದ್ದು ನಾರುತ್ತಿರುವ ಚರಂಡಿಯ ಕೊಳಚೆ ನೀರಿನಿಂದ ಗ್ರಾಮ ಸ್ಥರಿಗೆ ಸಾಂಕ್ರಾಮಿಕ ರೋಗಗಳು ಹರಡು ತ್ತಿದ್ದು, ಗ್ರಾಮ…
ಸರಗೂರು : ಪಟ್ಟಣ ಪಂಚಾಯಿತಿ ವ್ಯಾಪ್ತಿ ಯಲ್ಲಿ ಬೀದಿ ನಾಯಿಗಳ ಹಾವಳಿಯಿಂದ ಜನ ಸಾಮಾನ್ಯರು ತತ್ತರಿಸಿ ಆತಂಕದಲ್ಲಿದ್ದರೂ ನಿಯಂ ತ್ರಣ…
ನುರಿತ ತಜ್ಞರ ತಂಡದಿಂದ ಕೆರೆ ಸ್ವಚ್ಛತೆ ಆರಂಭಿಸಲು ತಯಾರಿ ಮೈಸೂರು : ಪ್ರವಾಸಿಗರು ಹಾಗೂ ವಾಯುವಿಹಾರಿಗಳ ನೆಚ್ಚಿನ ತಾಣವಾದ ಕುಕ್ಕರಹಳ್ಳಿ…
ಮೈಸೂರು ನಗರದ ಪ್ರತಿಯೊಂದೂ ವಾರ್ಡ್‌ನ ಪ್ರತಿ ಮಾರ್ಗದಲ್ಲೂ ಮೈಸೂರು ಮಹಾ ನಗರ ಪಾಲಿಕೆಯಿಂದ ವಾರ್ಡ್ ಸಂಖ್ಯೆ, ವಾರ್ಡ್‌ನ್ನು ಪ್ರತಿನಿಧಿಸುವ ಪಾಲಿಕೆ…