Light
Dark

ಭಾರತದ 14ನೇ ಉಪ ರಾಷ್ಟ್ರಪತಿಯಾಗಿ ಜಗದೀಪ್‌ ಧನಕರ್‌ ಪ್ರಮಾಣ ವಚನ ಸ್ವೀಕಾರ

ನವದೆಹಲಿ: ಭಾರತದ 14ನೇ ಉಪ ರಾಷ್ಟ್ರಪತಿಯಾಗಿ ಜಗದೀಪ್‌ ಧನಕರ್‌ ಪ್ರಮಾಣ ವಚನ ಸ್ವೀಕರಿಸಿದ್ದಾರೆ.  ರಾಷ್ಟ್ರಪತಿ ದ್ರೌಪದಿ ಮುರ್ಮು ಗುರುವಾರ ಮಧ್ಯಾಹ್ನ ನೂತನ ಉಪ ರಾಷ್ಟ್ರಪತಿಗೆ ಪ್ರಮಾಣನ ವಚನ ಬೋಧಿಸಿದರು. ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಈ ಕಾರ್ಯಕ್ರಮ ನಡೆದಿದ್ದು, ಈ ವೇಳೆ ಪ್ರಧಾನಿ ಮೋದಿ, ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ, ಕೆಂದ್ರ ಗೃಹ ಸಚಿವ ಅಮಿತ್‌ ಶಾ, ಮಾಜಿ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಸೇರಿ ಹಲವರು ಗಣ್ಯರು ಭಾಗಿಯಾಗಿದ್ದರು.

ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಪ್ರಧಾನಿ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಕೇಂದ್ರ ಸಚಿವರಾದ ರಾಜನಾಥ್‌ ಸಿಂಗ್, ನಿರ್ಮಲಾ ಸೀತಾರಾಮನ್‌, ಸ್ಮೃತಿ ಇರಾನಿ, ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ,ಮಾಜಿ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು, ಮಾಜಿ ರಾಷ್ಟ್ರಪತಿ ರಾಮನಾಥ್‌ ಕೋವಿಂದ್, ಸೇರಿ ಹಲವು ಗಣ್ಯರು ಸಹ ಭಾಗಿಯಾಗಿದ್ದರು.

ಇನ್ನು, ಪ್ರಮಾಣ ವಚನ ಸ್ವೀಕಾರಕ್ಕೆ ಮುನ್ನ ಗುರುವಾರ ಜಗದೀಪ್‌ ಧನಕರ್‌, ದೆಹಲಿಯ ರಾಜ್‌ಘಾಟ್‌ಗೆ ಭೇಟಿ ನೀಡಿ ಮಹಾತ್ಮ ಗಾಂಧೀಜಿ ಅವರ ಸಮಾಧಿಗೆ ನಮನ ಸಲ್ಲಿಸಿದರು.
ವೆಂಕಯ್ಯ ನಾಯ್ಡು ಅವರ ಅಧಿಕಾರಾವಧಿ ಇಂದು ಮುಕ್ತಾಯವಾಗಿದ್ದು,  ಉಪ ರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಜಗದೀಪ್‌ ಧನಕರ್‌ ಇನ್ಮುಂದೆ ರಾಜ್ಯಸಭೆಯ ಸಭಾಪತಿಯೂ ಆಗಿರಲಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ