ನವದೆಹಲಿ: ಭಾರತದ 14ನೇ ಉಪ ರಾಷ್ಟ್ರಪತಿಯಾಗಿ ಜಗದೀಪ್ ಧನಕರ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಗುರುವಾರ ಮಧ್ಯಾಹ್ನ ನೂತನ ಉಪ ರಾಷ್ಟ್ರಪತಿಗೆ ಪ್ರಮಾಣನ ವಚನ ಬೋಧಿಸಿದರು. ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಈ ಕಾರ್ಯಕ್ರಮ ನಡೆದಿದ್ದು, ಈ ವೇಳೆ ಪ್ರಧಾನಿ ಮೋದಿ, ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ, ಕೆಂದ್ರ ಗೃಹ ಸಚಿವ ಅಮಿತ್ ಶಾ, ಮಾಜಿ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಸೇರಿ ಹಲವರು ಗಣ್ಯರು ಭಾಗಿಯಾಗಿದ್ದರು.
ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಪ್ರಧಾನಿ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ನಿರ್ಮಲಾ ಸೀತಾರಾಮನ್, ಸ್ಮೃತಿ ಇರಾನಿ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ,ಮಾಜಿ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು, ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಸೇರಿ ಹಲವು ಗಣ್ಯರು ಸಹ ಭಾಗಿಯಾಗಿದ್ದರು.
ಇನ್ನು, ಪ್ರಮಾಣ ವಚನ ಸ್ವೀಕಾರಕ್ಕೆ ಮುನ್ನ ಗುರುವಾರ ಜಗದೀಪ್ ಧನಕರ್, ದೆಹಲಿಯ ರಾಜ್‌ಘಾಟ್‌ಗೆ ಭೇಟಿ ನೀಡಿ ಮಹಾತ್ಮ ಗಾಂಧೀಜಿ ಅವರ ಸಮಾಧಿಗೆ ನಮನ ಸಲ್ಲಿಸಿದರು.
ವೆಂಕಯ್ಯ ನಾಯ್ಡು ಅವರ ಅಧಿಕಾರಾವಧಿ ಇಂದು ಮುಕ್ತಾಯವಾಗಿದ್ದು, ಉಪ ರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಜಗದೀಪ್ ಧನಕರ್ ಇನ್ಮುಂದೆ ರಾಜ್ಯಸಭೆಯ ಸಭಾಪತಿಯೂ ಆಗಿರಲಿದ್ದಾರೆ.
ವಿಧಾನಸಭೆ : ರಾಜ್ಯದಲ್ಲಿರುವ ಮಹಾನಗರಪಾಲಿಕೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರು, ಚಾಲಕರು, ಲೋಡರ್ ಗಳು, ತ್ಯಾಜ್ಯ ಸಂಗ್ರಹಕಾರರು ಸೇರಿದಂತೆ ಇನ್ನಿತರೆ…
ಮೈಸೂರು : ಕಲರ್ಸ್ ಕನ್ನಡ ವಾಹಿನಿಯ ‘ಗಿಚ್ಚಿ ಗಿಲಿಗಿಲಿ ಜೂನಿಯರ‍್ಸ್’ ರಿಯಾಲಿಟಿ ಷೋಗಾಗಿ ಡಿ.20 ರಂದು ಬೆಳಿಗ್ಗೆ 11 ಗಂಟೆಗೆ…
ಬೆಳಗಾವಿ : ಆರೋಗ್ಯ ಸೇವೆಯಿಂದ ವಂಚಿತರಾಗಿರುವ ಜನರಿಗೆ ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕ ಯೋಜನೆ ನೆರವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಮೈಸೂರು : ಸಿನಿಮಾಗಳು ಮನರಂಜನೆಗಷ್ಟೇ ಸೀಮಿತವಾಗದೆ ಸಾಮಾಜಿಕ ಜವಾಬ್ದಾರಿಯುಳ್ಳ ಶಿಕ್ಷಣದ ಮಾಧ್ಯಮವಾಗಬೇಕು ಎಂದು ಖ್ಯಾತ ನಿರ್ದೇಶಕ ಬಿ.ಸುರೇಶ್ ಆಶಿಸಿದರು. ನಗರದ…
ಮೈಸೂರು : ಅಲ್ಪಸಂಖ್ಯಾತರ ಸಮುದಾಯ ವಾಸಿಸುವ ಸ್ಥಳಗಳಲ್ಲಿ ಬಾಲ್ಯ ವಿವಾಹ ಹಾಗೂ ಬಾಲಕಾರ್ಮಿಕ ಪದ್ಧತಿಗಳ ದುಷ್ಪರಿಣಾಮಗಳ ಕುರಿತು ಅರಿವು ಕಾರ್ಯಕ್ರಮಗಳನ್ನು…
ಮೈಸೂರು : ಸಾಂಸ್ಕೃತಿಕ ನಗರಿಯ ಅರಮನೆಗೆ ಡಿ.20ರಂದು ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಮೈಸೂರು ಅರಮನೆ ಮಂಡಳಿಯ ಕಾರ್ಯನಿರ್ವಾಹಕ ಅಧಿಕಾರಿಗಳ…