Mysore
19
broken clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಚುನಾವಣಾ ಆಯೋಗದ ವಿರುದ್ಧವೇ ಆರೋಪ ಮಾಡಿದ ಜೈರಾಮ್‌ ರಮೇಶ್‌

ನವದೆಹಲಿ: ಹರಿಯಾಣ ವಿಧಾನಸಭಾ ಚುನಾವಣಾ ಫಲಿತಾಂಶದ ಹೊತ್ತಲ್ಲಿ ಮತ ಎಣಿಕೆಯ ಪ್ರಾರಂಭದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ ನಂತರ ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಮತ ಎಣಿಕೆಯ ಡೇಟಾದ ಮಾಹಿತಿ ಹಂಚಿಕೊಳ್ಳಲಾಗಿದೆ ಎಂದು ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಜೈರಾಮ್‌ ರಮೇಶ್‌ ಆರೋಪಿಸಿದ್ದಾರೆ.

ಈ ವಿಚಾರದ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಹರಿಯಾಣದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 48 ಸ್ಥಾನಗಳಲ್ಲಿ ಹಾಗೂ ಕಾಂಗ್ರೆಸ್‌ 33 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ ಎಂದು ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್‌ ಮಾಡಲಾಗಿತ್ತು.

ಲೋಕಸಭಾ ಚುನಾವಣೆ ಅಂತೆಯೇ, ಇಂದು ಹರಿಯಾಣದಲ್ಲಿ ವಿಧಾನಸಭೆ ಚುನಾವಣೆಯಲ್ಲಿಯೂ ಸಹ ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಚುನಾವಣಾ ಫಲಿತಾಂಶಗಳ ವೇಳೆ ಕ್ಷಣ ಕ್ಷಣದ ಅಂಕಿ-ಅಂಶಗಳನ್ನು ಅಪ್‌ಲೋಡ್‌ ಮಾಡುವ ಕಾರ್ಯದಲ್ಲಿ ನಿಧಾನಗತಿಯನ್ನು ವೀಕ್ಷಿಸಿದ್ದೇವೆ. ಆದರೆ, ಈ ವೆಬ್‌ಸೈಟ್‌ನಲ್ಲಿ ಅಪ್ಲೋಡ್‌ ಮಾಡಿರುವ ಅಂಕಿ ಅಂಶಗಳು ದಾರಿ ತಪ್ಪಿಸುವ ರೀತಿಯಲ್ಲಿ ಆಗಿದೆ. ಅಲ್ಲದೇ ಬಿಜೆಪಿ ಪಕ್ಷವೂ ಚುನಾವಣಾ ಆಯೋಗದ ಮೇಲೆ ಒತ್ತಡ ಹೇರಲು ಪ್ರಯತ್ನಿಸುತ್ತಿದ್ದೆಯಾ? ಎಂದು ಪ್ರಶ್ನಿಸಿದ್ದಾರೆ.

Tags: