ನವದೆಹಲಿ: ಹರಿಯಾಣ ವಿಧಾನಸಭಾ ಚುನಾವಣಾ ಫಲಿತಾಂಶದ ಹೊತ್ತಲ್ಲಿ ಮತ ಎಣಿಕೆಯ ಪ್ರಾರಂಭದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ ನಂತರ ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಮತ ಎಣಿಕೆಯ ಡೇಟಾದ ಮಾಹಿತಿ ಹಂಚಿಕೊಳ್ಳಲಾಗಿದೆ ಎಂದು ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಆರೋಪಿಸಿದ್ದಾರೆ.
ಈ ವಿಚಾರದ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಹರಿಯಾಣದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 48 ಸ್ಥಾನಗಳಲ್ಲಿ ಹಾಗೂ ಕಾಂಗ್ರೆಸ್ 33 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ ಎಂದು ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾಗಿತ್ತು.
ಲೋಕಸಭಾ ಚುನಾವಣೆ ಅಂತೆಯೇ, ಇಂದು ಹರಿಯಾಣದಲ್ಲಿ ವಿಧಾನಸಭೆ ಚುನಾವಣೆಯಲ್ಲಿಯೂ ಸಹ ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಚುನಾವಣಾ ಫಲಿತಾಂಶಗಳ ವೇಳೆ ಕ್ಷಣ ಕ್ಷಣದ ಅಂಕಿ-ಅಂಶಗಳನ್ನು ಅಪ್‌ಲೋಡ್ ಮಾಡುವ ಕಾರ್ಯದಲ್ಲಿ ನಿಧಾನಗತಿಯನ್ನು ವೀಕ್ಷಿಸಿದ್ದೇವೆ. ಆದರೆ, ಈ ವೆಬ್‌ಸೈಟ್‌ನಲ್ಲಿ ಅಪ್ಲೋಡ್ ಮಾಡಿರುವ ಅಂಕಿ ಅಂಶಗಳು ದಾರಿ ತಪ್ಪಿಸುವ ರೀತಿಯಲ್ಲಿ ಆಗಿದೆ. ಅಲ್ಲದೇ ಬಿಜೆಪಿ ಪಕ್ಷವೂ ಚುನಾವಣಾ ಆಯೋಗದ ಮೇಲೆ ಒತ್ತಡ ಹೇರಲು ಪ್ರಯತ್ನಿಸುತ್ತಿದ್ದೆಯಾ? ಎಂದು ಪ್ರಶ್ನಿಸಿದ್ದಾರೆ.
ಎಚ್.ಡಿ.ಕೋಟೆ: ತಾಲೂಕಿನ ಹ್ಯಾಂಡ್‌ಪೋಸ್ಟ್ ಜಕ್ಕಳ್ಳಿ ಸಮೀಪವಿರುವ ಜಫ್ರುಲ್ಲಾ ಎಂಬುವರಿಗೆ ಸೇರಿದ ಗುಜರಿ ಗೋಡೌನ್‌ಗೆ ಬೆಂಕಿ ತಗುಲಿ, ಲಕ್ಷಾಂತರ ರೂಪಾಯಿ ವೆಚ್ಚದ…
ಪಾಟ್ನಾ: ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಪ್ರಯಾಣಿಕರಿಗೆ ನೀಡಿದ ಮೊಸರಿನಲ್ಲಿ ಹುಳುಗಳು ಪತ್ತೆಯಾದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಐಆರ್‌ಸಿಟಿಸಿಗೆ 10…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶ ಬೈಲೂರು ವಲಯ ವ್ಯಾಪ್ತಿಯ…
ಮೈಸೂರು: ಜನಸ್ನೇಹಿ ಪಾದಾಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ ರೂ ಮೀಸಲಿಟ್ಟಿರುವ ಪಾಲಿಕೆಯು ಪಾರಂಪರಿಕ ಕಟ್ಟಡಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ…
ಗುಂಡ್ಲುಪೇಟೆ: ತಾಲ್ಲೂಕಿನ ಮದ್ದೂರು ವಲಯದಲ್ಲಿ ಮತ್ತೆರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಹುಲಿಗಳ ಚಲನವಲನದ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ…
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಬಜೆಟ್ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿರುವುದನ್ನು ಅಧಿವೇಶನದಲ್ಲಿ ಮನವರಿಕೆ ಮಾಡಿಕೊಟ್ಟಿದ್ದೇವೆ. ಹಾಗೆಯೇ ಅನೇಕ ಸಮಸ್ಯೆಗಳನ್ನು…