Mysore
35
few clouds

Social Media

ಶುಕ್ರವಾರ, 28 ಮಾರ್ಚ್ 2025
Light
Dark

ಇನ್‌ವೆಸ್ಟ್‌ ಕರ್ನಾಟಕ: ಮಲ್ಲಿಕಾರ್ಜುನ ಖರ್ಗೆ, ರಾಹುಲ್‌ ಗಾಂಧಿಗೆ ಗೈರಿಗೆ ಜೈರಾಮ್‌ ಸ್ಪಷ್ಟನೆ

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಸಂಸದ ರಾಹುಲ್‌ ಗಾಂಧಿ ಅವರು ಸಂಸತ್ತಿನ ಕಾರ್ಯಕಲಾಪದಲ್ಲಿ ಭಾಗಿಯಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಇಂದಿನಿಂದ ಪ್ರಾರಂಭವಾಗಿರುವ ಇನ್‌ವೆಸ್ಟ್‌ ಕರ್ನಾಟಕ 2025 ಹೂಡಿಕೆ ಸಮಾವೇಶದಲ್ಲಿ ಭಾಗವಹಿಸುತ್ತಿಲ್ಲ ಎಂದು ಕಾಂಗ್ರೆಸ್‌ನ ಸಂವಹನ ವಿಭಾಗದ ಮುಖ್ಯಸ್ಥ ಜೈರಾಮ್‌ ರಮೇಶ್‌ ತಿಳಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ, ಸಂಸತ್ತಿನ ಬಜೆಟ್‌ ಅಧಿವೇಶನದ ಮೇಲಿನ ಚರ್ಚೆಯಲ್ಲಿ ಭಾಗಿಯಾಗಿದ್ದಾರೆ. ಹೀಗಾಗಿ ಬೆಂಗಳೂರಿನಲ್ಲಿ ಇಂದು(ಫೆಬ್ರವರಿ.11) ಸಂಜೆ ಪ್ರಾರಂಭವಾಗುವ ಇನ್‌ವೆಸ್ಟ್‌ ಕರ್ನಾಟಕ ಹೂಡಿಕೆ ಸಮಾವೇಶದಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ ಡಂದು ವಿಷಾದ ವ್ಯಕ್ಯಪಡಿಸಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಕರ್ನಾಟಕ ಹೂಡಿಕೆ ಸಮಾವೇಶಕ್ಕೆ ಖರ್ಗೆ ಮತ್ತು ರಾಹುಲ್‌ ಗಾಂಧಿ ಅವರು ಶುಭ ಹಾರೈಸಿದ್ದಾರೆ. ಕರ್ನಾಟಕದ ವಿಶಿಷ್ಟ, ಸ್ಪರ್ಧಾತ್ಮಕ ಆರ್ಥಿಕತೆಗೆ ಉತ್ತೇಜನ ನೀಡುವ ಈ ಶೃಂಗವೂ ಅತ್ಯಂತ ಫಲದಾಯಕ ಹಾಗೂ ಯಶಸ್ವಿಯಾಗಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ಜೈರಾಮ್‌ ಅವರು ತಿಳಿಸಿದ್ದಾರೆ.

ಈ ಮೊದಲು ಕರ್ನಾಟಕ ಸರ್ಕಾರವು ಆಯೋಜಿಸುತ್ತಿರುವ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರು ಹಾಗೂ ಬಿಜೆಪಿ ನಾಯಕರಿಗೆ ಹೆಚ್ಚಿನ ಪ್ರಾಧ್ಯಾನತೆ ನೀಡಿರುವುದು ಕಾಂಗ್ರೆಸ್‌ ನಾಯಕತ್ವದ ಅಸಮಾಧಾನಕ್ಕೆ ಕಾರಣವಾಗಿದ್ದು, ಖರ್ಗೆ ಮತ್ತು ರಾಹುಲ್‌ ಗಾಂಧಿ ಅವರು ಭಾಗವಹಿಸುತ್ತಿಲ್ಲ ಎಂಬ ವರದಿಯಾಗಿತ್ತು ಎಂದಿದ್ದಾರೆ.

ಜಾಗತಿಕ ಬಂಡವಾಳ ಹೂಡಿಕೆಯ ಶಕ್ತಿ ಕೇಂದ್ರವನ್ನಾಗಿ ಕರ್ನಾಟಕವನ್ನು ಅಭಿವೃದ್ಧಿಪಡಿಸಲು ನೆರವಾಗುವ, ನಾವೀನ್ಯ ಕೈಗಾರಿಕಾ ಪ್ರಗತಿ ಹಾಗೂ ಜಾಗತಿಕ ಪಾಲುದಾರಿಕೆಗೆ ರಾಜ್ಯದಲ್ಲಿನ ಸೌಲಭ್ಯಗಳನ್ನು ಇಡೀ ವಿಶ್ವಕ್ಕೆ ಪರಿಚಯಿಸುವ ಆಶಯದ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ಇಂದಿನಿಂದ ಪ್ರಾರಂಭವಾಗಲಿದೆ. 19 ದೇಶಗಳ ಹೆಸರಾಂತ ಉದ್ಯಮಿಗಳು, ಅವರ ಪ್ರತಿನಿಧಿಗಳು ಭಾಗವಹಿಸುವ ಮೂಲಕ ಸುಮಾರು 10 ಲಕ್ಷ ಕೋಟಿ ಬಂಡವಾಳ ಹೂಡಿಕೆಯ ನಿರೀಕ್ಷೆಯನ್ನು ಮೂಡಿಸಿದೆ. ನೀತಿ ನಿರೂಪಣೆ ಹಾಗೂ ನಾವೀನ್ಯತೆ ಕ್ಷೇತ್ರದ ದಿಗ್ಗಜರ ಸಮಾಗಮಕ್ಕೆ ಮತ್ತು ಚಿಂತನ ಮಂಥನ ಸಮಾವೇಶಕ್ಕೆ ವೇದಿಕೆಯಾಗಲಿದೆ ಎಂದು ಹೇಳಿದ್ದಾರೆ.

Tags: