ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಸಂಸದ ರಾಹುಲ್ ಗಾಂಧಿ ಅವರು ಸಂಸತ್ತಿನ ಕಾರ್ಯಕಲಾಪದಲ್ಲಿ ಭಾಗಿಯಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಇಂದಿನಿಂದ ಪ್ರಾರಂಭವಾಗಿರುವ ಇನ್‌ವೆಸ್ಟ್ ಕರ್ನಾಟಕ 2025 ಹೂಡಿಕೆ ಸಮಾವೇಶದಲ್ಲಿ ಭಾಗವಹಿಸುತ್ತಿಲ್ಲ ಎಂದು ಕಾಂಗ್ರೆಸ್‌ನ ಸಂವಹನ ವಿಭಾಗದ ಮುಖ್ಯಸ್ಥ ಜೈರಾಮ್ ರಮೇಶ್ ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಸಂಸತ್ತಿನ ಬಜೆಟ್ ಅಧಿವೇಶನದ ಮೇಲಿನ ಚರ್ಚೆಯಲ್ಲಿ ಭಾಗಿಯಾಗಿದ್ದಾರೆ. ಹೀಗಾಗಿ ಬೆಂಗಳೂರಿನಲ್ಲಿ ಇಂದು(ಫೆಬ್ರವರಿ.11) ಸಂಜೆ ಪ್ರಾರಂಭವಾಗುವ ಇನ್‌ವೆಸ್ಟ್ ಕರ್ನಾಟಕ ಹೂಡಿಕೆ ಸಮಾವೇಶದಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ ಡಂದು ವಿಷಾದ ವ್ಯಕ್ಯಪಡಿಸಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಕರ್ನಾಟಕ ಹೂಡಿಕೆ ಸಮಾವೇಶಕ್ಕೆ ಖರ್ಗೆ ಮತ್ತು ರಾಹುಲ್ ಗಾಂಧಿ ಅವರು ಶುಭ ಹಾರೈಸಿದ್ದಾರೆ. ಕರ್ನಾಟಕದ ವಿಶಿಷ್ಟ, ಸ್ಪರ್ಧಾತ್ಮಕ ಆರ್ಥಿಕತೆಗೆ ಉತ್ತೇಜನ ನೀಡುವ ಈ ಶೃಂಗವೂ ಅತ್ಯಂತ ಫಲದಾಯಕ ಹಾಗೂ ಯಶಸ್ವಿಯಾಗಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ಜೈರಾಮ್ ಅವರು ತಿಳಿಸಿದ್ದಾರೆ.
ಈ ಮೊದಲು ಕರ್ನಾಟಕ ಸರ್ಕಾರವು ಆಯೋಜಿಸುತ್ತಿರುವ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರು ಹಾಗೂ ಬಿಜೆಪಿ ನಾಯಕರಿಗೆ ಹೆಚ್ಚಿನ ಪ್ರಾಧ್ಯಾನತೆ ನೀಡಿರುವುದು ಕಾಂಗ್ರೆಸ್ ನಾಯಕತ್ವದ ಅಸಮಾಧಾನಕ್ಕೆ ಕಾರಣವಾಗಿದ್ದು, ಖರ್ಗೆ ಮತ್ತು ರಾಹುಲ್ ಗಾಂಧಿ ಅವರು ಭಾಗವಹಿಸುತ್ತಿಲ್ಲ ಎಂಬ ವರದಿಯಾಗಿತ್ತು ಎಂದಿದ್ದಾರೆ.
ಜಾಗತಿಕ ಬಂಡವಾಳ ಹೂಡಿಕೆಯ ಶಕ್ತಿ ಕೇಂದ್ರವನ್ನಾಗಿ ಕರ್ನಾಟಕವನ್ನು ಅಭಿವೃದ್ಧಿಪಡಿಸಲು ನೆರವಾಗುವ, ನಾವೀನ್ಯ ಕೈಗಾರಿಕಾ ಪ್ರಗತಿ ಹಾಗೂ ಜಾಗತಿಕ ಪಾಲುದಾರಿಕೆಗೆ ರಾಜ್ಯದಲ್ಲಿನ ಸೌಲಭ್ಯಗಳನ್ನು ಇಡೀ ವಿಶ್ವಕ್ಕೆ ಪರಿಚಯಿಸುವ ಆಶಯದ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ಇಂದಿನಿಂದ ಪ್ರಾರಂಭವಾಗಲಿದೆ. 19 ದೇಶಗಳ ಹೆಸರಾಂತ ಉದ್ಯಮಿಗಳು, ಅವರ ಪ್ರತಿನಿಧಿಗಳು ಭಾಗವಹಿಸುವ ಮೂಲಕ ಸುಮಾರು 10 ಲಕ್ಷ ಕೋಟಿ ಬಂಡವಾಳ ಹೂಡಿಕೆಯ ನಿರೀಕ್ಷೆಯನ್ನು ಮೂಡಿಸಿದೆ. ನೀತಿ ನಿರೂಪಣೆ ಹಾಗೂ ನಾವೀನ್ಯತೆ ಕ್ಷೇತ್ರದ ದಿಗ್ಗಜರ ಸಮಾಗಮಕ್ಕೆ ಮತ್ತು ಚಿಂತನ ಮಂಥನ ಸಮಾವೇಶಕ್ಕೆ ವೇದಿಕೆಯಾಗಲಿದೆ ಎಂದು ಹೇಳಿದ್ದಾರೆ.
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…
ಬೆಳಗಾವಿ : ದ್ವೇಷ ಭಾಷಣಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದ್ದು, ಈ…
ಮೈಸೂರು : ಮೈಸೂರು ವಿಶ್ವವಿದ್ಯಾನಿಲಯಕ್ಕೆ ಫ್ರಾನ್ಸ್ ದೇಶದ ರಾಯಭಾರಿಗಳ ನಿಯೋಗ ಭೇಟಿ ನೀಡಿ ಫ್ರೆಂಚ್ ಭಾಷೆ ವಿಭಾಗವನ್ನು ಮರು ಆರಂಭಿಸುವ…