ನವದೆಹಲಿ: ದಶಕಗಳಿಗೆ ಒಮ್ಮೆ ಮಾಡುವ ಜನಗಣತಿಯನ್ನು ವಿಳಂಬ ಮಾಡಿದರೆ ಅನೇಕ ಸಾಮಾಜಿಕ ನೀತಿಗಳಿಗೆ ಧಕ್ಕೆಯುಂಟಾಗುತ್ತದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕ ಜೈರಾಮ್ ಕಿಡಿಕಾರಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, 2021 ರಿಂದ ಜನಗಣತಿ ಬಾಕಿಯಾಗಿಯೇ ಉಳಿದಿದೆ. ಈ ವರ್ಷ ನಡೆಸುವುದೂ ಅನುಮಾನವಾಗಿದೆ. ದೇಶದಲ್ಲಿ ಜನನ ಮತ್ತು ಮರಣಗಳ ಕುರಿತು ಕನಿಷ್ಠ ಎರಡು ಪ್ರಮುಖ ವರದಿಗಳನ್ನು ಕೇಂದ್ರ ಗೃಹ ಸಚಿವಾಲಯವು ಕಳೆದ ಐದು ವರ್ಷಗಳಿಂದ ಬಿಡುಗಡೆ ಮಾಡಿಲ್ಲ. ಇದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಮೀಸಲಾತಿ ಮತ್ತು ಆಹಾರ ಭದ್ರತೆಯ ಹಕ್ಕುಗಳು ಸೇರಿದಂತೆ ಅನೇಕ ಸಾಮಾಜಿಕ ನೀತಿಗಳು ಮತ್ತು ಕಾರ್ಯಕ್ರಮಗಳಿಗೆ ಹಾನಿಯುಂಟು ಮಾಡುತ್ತಿದೆ ಎಂದಿದ್ದಾರೆ.
ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಭಾಷಣದಲ್ಲಿ ಜನಗಣತಿಗೆ ಹಣ ಬಿಡುಗಡೆ ಮಾಡುವ ಬಗ್ಗೆ ಯಾವುದೇ ಪ್ರಸ್ತಾಪ ಮಾಡದಿರುವುದು ನಿರಾಸೆಯನ್ನುಂಟು ಮಾಡಿದೆ. ಅಲ್ಲದೇ ಜನಗಣತಿಯನ್ನು ಸಮಯಕ್ಕೆ ಸರಿಯಾಗಿ ನಡೆಸಲು ಸರ್ಕಾರ ವಿಫಲವಾಗಿರುವುದು ರಾಜ್ಯದ ಆಡಳಿತಾತ್ಮಕ ಸಾಮರ್ಥ್ಯದ ಮೇಲೆ ಗಂಭೀರ ಪರಿಣಾಮಗಳನ್ನು ಉಂಟು ಮಾಡಲಿದೆ ಎಂದು ಹೇಳಿದ್ದಾರೆ.
ಬೆಂಗಳೂರು : 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಅಭಿಯಾನ ಯಶಸ್ವಿಯಾಗಿ ನಡೆಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು…
ಸಿದ್ದಾಪುರ : ಎರಡು ಬೈಕ್‌ಗಳು ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ…
ಹೊಸದಿಲ್ಲಿ : ಎಲ್‌ಪಿಜಿ ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು…
ಟೆಹ್ರಾನ್ : ಇರಾನ್‌ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…
ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…
ಚಾಮರಾಜನಗರ : ಇತ್ತೀಚೆಗೆ ಸುರಿದ ಗಾಳಿ ಸಹಿತ ಮಳೆಯಿಂದಾಗಿ ತಾಲ್ಲೂಕು ವ್ಯಾಪ್ತಿಯ ದೊಡ್ಡಮೋಳೆ, ಕಟ್ನವಾಡಿ, ಗ್ರಾಮಗಳಲ್ಲಿ ಮನೆ ಗೋಡೆ ಕುಸಿದಿದ್ದ…