ದೇಶ- ವಿದೇಶ

ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರನ್ನು ಭೇಟಿ ಮಾಡಿದ ಜೈಶಂಕರ್

ಬೀಜಿಂಗ್ : ವಿದೇಶಾಂಗ ಸಚಿವ ಎಸ್.ಜೈಶಂಕರ್ ಮತ್ತು ಎಸ್‌ಸಿಒ ಸದಸ್ಯ ರಾಷ್ಟ್ರಗಳ ಅವರ ಸಹವರ್ತಿಗಳು ಇಂದು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದ್ದಾರೆ.

ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ, ಜೈಶಂಕರ್ ಅವರು ಭಾರತ-ಚೀನಾ ದ್ವಿಪಕ್ಷೀಯ ಸಂಬಂಧಗಳಲ್ಲಿನ ಇತ್ತೀಚಿನ ಬೆಳವಣಿಗೆಯ ಬಗ್ಗೆ ಅಧ್ಯಕ್ಷ ಕ್ಸಿ ಅವರಿಗೆ ಮಾಹಿತಿ ನೀಡಿದ್ದೇವೆ ಎಂದು ಬರೆದುಕೊಂಡಿದ್ದಾರೆ.

ಶಾಂಘೈ ಸಹಕಾರ ಸಂಸ್ಥೆಯ (ಎಸ್‌ಸಿಒ) ಸಮಾವೇಶದಲ್ಲಿ ಭಾಗವಹಿಸಲು ವಿದೇಶಾಂಗ ಸಚಿವರು ಎರಡು ದಿನಗಳ ಭೇಟಿಗಾಗಿ ಚೀನಾಕ್ಕೆ ಬಂದಿಳಿದರು. ಜೂನ್ 2020 ರಲ್ಲಿ ಗಾಲ್ವಾನ್ ಕಣಿವೆ ಘರ್ಷಣೆಯ ನಂತರ ದ್ವಿಪಕ್ಷೀಯ ಸಂಬಂಧಗಳು ತೀವ್ರ ಕುಸಿತ ಕಂಡ ನಂತರ ಇದು ಅವರ ಮೊದಲ ಚೀನಾ ಭೇಟಿಯಾಗಿದೆ.

ಮಂಗಳವಾರ ಬೆಳಿಗ್ಗೆ ಬೀಜಿಂಗ್‌ನಲ್ಲಿ ನನ್ನ ಸಹವರ್ತಿ ಎಸ್‌ಸಿಒ ವಿದೇಶಾಂಗ ಸಚಿವರೊಂದಿಗೆ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರನ್ನು ಭೇಟಿ ಮಾಡಿದೆ ಎಂದು ಜೈಶಂಕರ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ಮೋದಿ ಅವರ ಶುಭಾಶಯಗಳನ್ನು ತಿಳಿಸಿದ್ದೇನೆ ಎಂದು ಅವರು ಹೇಳಿದರು.

ನಮ್ಮ ದ್ವಿಪಕ್ಷೀಯ ಸಂಬಂಧಗಳ ಇತ್ತೀಚಿನ ಬೆಳವಣಿಗೆಯ ಬಗ್ಗೆ ಅಧ್ಯಕ್ಷ ಕ್ಸಿ ಅವರಿಗೆ ಮಾಹಿತಿ ನೀಡಿದ್ದೇನೆ. ಆ ನಿಟ್ಟಿನಲ್ಲಿ ನಮ್ಮ ನಾಯಕರ ಮಾರ್ಗದರ್ಶನವನ್ನು ಗೌರವಿಸುತ್ತೇನೆ ಎಂದು ವಿದೇಶಾಂಗ ಸಚಿವ ಹೇಳಿದರು.

ಆಂದೋಲನ ಡೆಸ್ಕ್

Recent Posts

ಆಕಸ್ಮಿಕ ಬೆಂಕಿ : ಒಕ್ಕಣೆ ಕಣದ ರಾಗಿ ಫಸಲು ನಾಸ

ಹನೂರು : ತಾಲೂಕಿನ ಶೆಟ್ಟಳ್ಳಿ ಗ್ರಾಮದಲ್ಲಿ ಒಕ್ಕಣೆ ಕಣದಲ್ಲಿ ಹಾಕಲಾಗಿದ್ದ ರಾಗಿ ಫಸಲಿಗೆ ಬೆಂಕಿ ಬಿದ್ದು ಸುಮಾರು 30 ಕ್ವಿಂಟಾಲ್…

10 hours ago

ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರು-ಪೇರು ; ಸದನ ಕಲಾಪಗಳಿಂದ ದೂರ ಉಳಿದ ಸಿಎಂ

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ತುಸು ಏರುಪೇರು ಆದ ಕಾರಣ, ಇಂದು (ಡಿಸೆಂಬರ್ 17) ವಿಧಾನಸಭೆ ಅಧಿವೇಶನದಲ್ಲಿ…

10 hours ago

ಶ್ರೀಕಂಠೇಶ್ವರ ದೇವಾಲಯದಲ್ಲಿ ಅಕ್ರಮ?; ತನಿಖೆ ಆರಂಭಿಸಿದ ಎಸಿ ತಂಡ

ನಂಜನಗೂಡು : ದಕ್ಷಿಣ ಕಾಶಿ ಎಂದೇ ಹೆಸರಾಗಿರುವ, ಆದಾಯದಲ್ಲಿ ರಾಜ್ಯದಲ್ಲಿ ಐದನೇ ಸ್ಥಾನದಲ್ಲಿರುವ ನಂಜನಗೂಡು ಶ್ರೀಕಂಠೇಶ್ವರ ದೇವಾಯದಲ್ಲಿ ಲಕ್ಷಾಂತರ ರೂ.…

10 hours ago

ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ

ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಥಿಯೋಪಿಯಾದ ಅತ್ಯುನ್ನತ ಪ್ರಶಸ್ತಿ ‘ದಿ ಗ್ರೇಟ್ ಆನರ್ ನಿಶಾನ್ ಆಫ್ ಇಥಿಯೋಪಿಯಾ’…

10 hours ago

ಧರ್ಮಸ್ಥಳ ಪ್ರಕರಣ : ಚಿನ್ನಯ್ಯಗೆ ಕೊನೆಗೂ ಬಿಡುಗಡೆ ಭಾಗ್ಯ

ಮಂಗಳೂರು : ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತಿಟ್ಟ ಪ್ರಕರಣದಲ್ಲಿ ವಿಶೇಷ ತನಿಖಾ ತಂಡದಿಂದ ಬಂಧನಕ್ಕೆ ಒಳಗಾದ ಚಿನ್ನಯ್ಯ ಕೊನೆಗೂ…

10 hours ago

ಕೈಗಾರಿಕೆ ಸ್ಥಾಪನೆಗೆ 500 ಎಕರೆ ಜಾಗ ಕೊಡುತ್ತೇನೆ : ಎಚ್‌ಡಿಕೆ ಯಾವ ಕೈಗಾರಿಕೆ ತರುತ್ತಾರೋ ತರಲಿ : ಶಾಸಕ ನರೇಂದ್ರಸ್ವಾಮಿ ಸವಾಲು

ಮಂಡ್ಯ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಯಾವ ಕೈಗಾರಿಕೆಯನ್ನು ತರುವರೋ ತರಲಿ. ಮಳವಳ್ಳಿ ಕ್ಷೇತ್ರದಲ್ಲಿ 400ರಿಂದ 500 ಎಕರೆ…

10 hours ago