ಜಮ್ಮು-ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದಲ್ಲಿ ವಾರ್ಷಿಕ ಅಮರನಾಥ ಯಾತ್ರೆ ಆರಂಭವಾಗಿದ್ದು, ಸಾವಿರಾರು ಯಾತ್ರಾರ್ಥಿಗಳು ಅಮರನಾಥ ಯಾತ್ರೆ 2024ನ್ನು ಆರಂಭಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ವಾರ್ಷಿಕ ಅಮರನಾಥ ಯಾತ್ರೆಗೆ ಚಾಲನೆ ಸಿಕ್ಕಿದ್ದು, ವಿವಿಧ ಬೇಸ್ ಕ್ಯಾಂಪ್‌ಗಳಿಂದ ನೋಂದಣಿ ಮಾಡಿಕೊಂಡ ಯಾತ್ರಾರ್ಥಿಗಳು ಅಮರನಾಥ ಯಾತ್ರೆ ಆರಂಭಿಸಿದ್ದಾರೆ. ಯಾತ್ರೆಯ ಹಿನ್ನೆಲೆಯಲ್ಲಿ ಬಿಗಿ ಭದ್ರತೆ ಮಾಡಲಾಗಿದೆ.
2024ನೇ ಸಾಲಿನ ಅಮರನಾಥ ಯಾತ್ರೆ ಇಂದು ಆರಂಭವಾಗಿದ್ದು, ಸಾವಿರಾರು ಯಾತ್ರಾರ್ಥಿಗಳು ಜಮ್ಮು ಮತ್ತು ಕಾಶ್ಮೀರದ ಗಂದರ್‌ಬಾಲ್ ಜಿಲ್ಲೆಯಲ್ಲಿರುವ ಬಾಲ್ಟಾಸ್ ಬೇಸ್ ಕ್ಯಾಂಪ್‌ನಲ್ಲಿರುವ ಪವಿತ್ರ ಗುಹೆಗೆ ಭೇಟಿ ನೀಡಲು ಯಾತ್ರೆ ಆರಂಭಿಸಿದರು.
ಅಮರನಾಥ ಯಾತ್ರೆ 2024ರ ಒಟ್ಟು 52 ದಿನಗಳ ಕಾಲ ನಡೆಯಲಿದೆ. ಶ್ರೀನಗರದಿಂದ ಸುಮಾರು 1.5 ಕಿ.ಮೀ ದೂರದಲ್ಲಿ 13,000 ಅಡಿ ಎತ್ತರವಿರುವ ಅಮರನಾಥ ಗುಹೆಗೆ ಪ್ರತಿವರ್ಷ ದೇಶದ ವಿವಿಧ ರಾಜ್ಯಗಳ ಭಕ್ತರು ಯಾತ್ರೆ ಕೈಗೊಳ್ಳುತ್ತಾರೆ.
ಅಮರನಾಥ ಯಾತ್ರೆ ಬಹಳ ಪುಣ್ಯದ ಕೆಲಸ ಎಂದು ಹಿಂದುಗಳು ನಂಬುತ್ತಾರೆ. ಪ್ರತಿವರ್ಷ ಮಳೆ, ಚಳಿಯನ್ನು ಲೆಕ್ಕಿಸದೇ ಲಕ್ಷಾಂತರ ಯಾತ್ರಾರ್ಥಿಗಳು ಅಮರನಾಥ ಯಾತ್ರೆಗಾಗಿ ಜಮ್ಮು-ಕಾಶ್ಮೀರಕ್ಕೆ ಆಗಮಿಸುತ್ತಾರೆ.
ಅಮರನಾಥ ಯಾತ್ರಾರ್ಥಿಗಳ ಮೇಲೆ ಭಯೋತ್ಪಾದಕ ದಾಳಿಗಳು ಹಲವು ಬಾರಿ ನಡೆದಿದೆ. ಆದ್ದರಿಂದ ಕೇಂದ್ರ ಸರ್ಕಾರ ಅಮರನಾಥ ಯಾತ್ರೆ ಸಂದರ್ಭದಲ್ಲಿ ಹೆಚ್ಚುವರಿ ಬಂದೋಬಸ್ತ್ ಮಾಡುತ್ತದೆ. ಜಮ್ಮು-ಕಾಶ್ಮೀರದ ಪೊಲೀಸರ ಜೊತೆ ಭಾರತೀಯ ಸೇನೆಯ ಯೋಧರು ಭದ್ರತೆಯ ಉಸ್ತುವಾರಿ ನೋಡಿಕೊಳ್ಳುತ್ತಾರೆ.
ಅಮರನಾಥ ಯಾತ್ರೆ 2024ರ ಭದ್ರತೆಗಾಗಿ 13 ಪೊಲೀಸ್ ತಂಡಗಳು, ಎಸ್‌ಡಿಆರ್‌ಎಫ್‌ನ 11 ತಂಡಗಳು, ಬಿಎಸ್‌ಎಫ್‌ನ 4 ತಂಡಗಳು, ಸಿಆರ್‌ಪಿಎಫ್‌ಎ 2 ತಂಡಗಳನ್ನು ನಿಯೋಜನೆ ಮಾಡಲಾಗಿದೆ. ಉಧಮ್‌ಪುರ್‌ನಿಂದ ಬನಿಹಾಲ್ ತನಕ 10 ಅತ್ಯಾಧುನಿಕ ಕ್ಯಾಮರಾ ಅಳವಡಿಕೆ ಮಾಡಿ ಕಣ್ಗಾವಲು ವಹಿಸಲಾಗಿದೆ.
ಎಚ್.ಡಿ.ಕೋಟೆ : ತಾಲ್ಲೂಕಿನ ಕ್ಯಾತನಹಳ್ಳಿ, ಆಲನಹಳ್ಳಿ, ಜಿ. ಬಿ. ಸರಗೂರು ವ್ಯಾಪ್ತಿಯ ಐದು ಕೆರೆಗಳಿಗೆ ನೀರು ತುಂಬಿಸಲು ಅಧಿಕಾರಿಗಳು ನಿರ್ಲಕ್ಷಿ…
ಮೈಸೂರಿನ ರಾಮಕೃಷ್ಣನಗರದಲ್ಲಿರುವ ಸುಯೋಗ್ ಆಸ್ಪತ್ರೆ ಎದುರಿನ ರಸ್ತೆಯು ಸಂಪೂರ್ಣ ಹದಗೆಟ್ಟಿದೆ. ಈ ರಸ್ತೆಯಲ್ಲಿ ಎಲ್ಲೆಡೆ ದೊಡ್ಡ ದೊಡ್ಡ ಗುಂಡಿಗಳು ನಿರ್ಮಾಣವಾಗಿದ್ದು,…
ಇತ್ತೀಚಿನ ದಿನಗಳಲ್ಲಿ, ಟೂತ್ ಪೇಸ್ಟ್‌ಗಳಲ್ಲಿ ತಂಬಾಕು ಮತ್ತು ನಿಕೋಟಿನ್ ಅಂಶ ಪತ್ತೆಯಾಗಿದ್ದು, ಇದರ ಸೇವನೆಯಿಂದ ಹಲವು ಮಕ್ಕಳು ತೊಂದರೆಗೊಳಗಾಗಿರುವ ಘಟನೆಗಳು…
ಮೈಸೂರಿನ ಕುವೆಂಪುನಗರದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ರಸ್ತೆ, ಗದ್ದಿಗೆ ರಸ್ತೆ, ವಿಶ್ವಮಾನವ ಜೋಡಿ ರಸ್ತೆ, ವಿದ್ಯಾರಣ್ಯಪುರಂ -…
ಆಂದ್ರದಲ್ಲಿನ ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರ ನಾಲ್ಕು ವರ್ಷಗಳ ಹಿಂದೆ ಜಾರಿಗೆ ತಂದ ನೂತನ ಶಿಕ್ಷಣ ನೀತಿಯನ್ನು ಪರಿಣಾಮಕಾರಿಯಾಗಿ…
ತಿ.ನರಸೀಪುರ : ಬೈಕ್ ಗೆ ಎದುರಿಗೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿಯಾದ ಪರಿಣಾಮ ಯುವಕನೋರ್ವ ಸ್ಥಳದಲ್ಲಿಯೇ ಮೃತಪಟ್ಟಿ ಘಟನೆ ತಾಲೂಕಿನ…