ಕದನ ವಿರಾಮದ ಬಳಿಕ ಸಹಜ ಸ್ಥಿತಿಗೆ ಮರಳುತ್ತಿರುವ ಜಮ್ಮು ಮತ್ತು ಕಾಶ್ಮೀರ

ಶ್ರೀನಗರ: ಸುಮಾರು 21 ದಿನಗಳ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾನುವಾರ ರಾತ್ರಿ ಶಾಂತಿಯುತವಾಗಿದ್ದು, ನಿಧಾನವಾಗಿ ಕಣಿವೆ ರಾಜ್ಯ ಸಹಜ ಸ್ಥಿತಿಗೆ ಮರಳುತ್ತಿರುವುದು ನಾಗರಿಕರಲ್ಲಿ ಹೊಸ ಆಶಾಕಿರಣ ಮೂಡಿಸಿದೆ.

ಯಾವುದೇ ಹೊಸ ಘಟನೆಗಳು ಅಥವಾ ಕದನ ವಿರಾಮ ಉಲ್ಲಂಘನೆಗಳು ವರದಿಯಾಗಿಲ್ಲ ಎಂದು ಭಾರತೀಯ ಸೇನೆ ಸ್ಪಷ್ಟಪಡಿಸಿದೆ. ಹಲವು ದಿನಗಳಲ್ಲಿ ಮೊದಲ ಬಾರಿಗೆ, ಪೂಂಚ್ ಮತ್ತು ರಜೌರಿ ಸೇರಿದಂತೆ ಜಮ್ಮು ಪ್ರದೇಶದ ಸ್ಥಳೀಯರು ವಿಮಾನ, ಕ್ಷಿಪಣಿ ದಾಳಿ ಮತ್ತು ಡ್ರೋನ್ ಚಟುವಟಿಕೆಗಳಿಂದ ಮುಕ್ತವಾದ ಶಾಂತಿಯುತ ರಾತ್ರಿಯನ್ನು ಆನಂದಿಸಿದ್ದಾರೆ. ಶಾಂತತೆಯಿಂದಾಗಿ ನಿವಾಸಿಗಳು ತಮ್ಮ ಸಾಮಾನ್ಯ ದಿನಚರಿಗೆ ಮರಳಲು ಅವಕಾಶ ಮಾಡಿಕೊಟ್ಟಿತು. ದಾಳಿಯ ಆತಂಕವಿತ್ತಾದರೂ ಅಂತಹ ಯಾವುದೇ ಘಟನೆಗಳು ನಡೆಯಲಿಲ್ಲ.

ಭಾರತ ಮತ್ತು ಪಾಕಿಸ್ತಾನ ಕದನ ವಿರಾಮ ಒಪ್ಪಂದಕ್ಕೆ ಬಂದ ಬಳಿಕವೂ ರಾತ್ರಿ ಡ್ರೋನ್ ದಾಳಿ ಪ್ರಯತ್ನಗಳು ನಡೆದಿದ್ದವು. ಆದರೆ ಭಾನುವಾರ ರಾತ್ರಿ ಜಮ್ಮು ಮತ್ತು ಕಾಶ್ಮೀರ ಶಾಂತಿಯುತ ರಾತ್ರಿಯನ್ನು ಕಂಡಿದೆ ಎಂದು ರಕ್ಷಣಾ ವಕ್ತಾರ ಲೆಫ್ಟಿನೆಂಟ್ ಕರ್ನಲ್ ಸುನೀಲ್ ಬತ್ರ್ವಾಲ್ ತಿಳಿಸಿದ್ದಾರೆ.

ಗಡಿ ರಾಜ್ಯಗಳಾದ್ಯಂತದ ನಗರಗಳಲ್ಲಿ ಸಾಮಾನ್ಯತೆಯ ಲಕ್ಷಣಗಳನ್ನು ಕಾಣತೊಡಗಿದೆ. ಭಾನುವಾರ ಮತ್ತು ಸೋಮವಾರಗಳ ನಡುವಿನ ರಾತ್ರಿಯಲ್ಲಿ ಕೇಂದ್ರಾಡಳಿತ ಪ್ರದೇಶದಲ್ಲಿ ಯಾವುದೇ ಅಹಿತಕರ ಘಟನೆಗಳು ವರದಿಯಾಗಿಲ್ಲ ಎಂದು ಅವರು ಹೇಳಿದ್ದಾರೆ.

ಭಾರತದ ಖಡಕ್ ಎಚ್ಚರಿಕೆ ಬೆನ್ನಲ್ಲೇ ತಡರಾತ್ರಿ ಬಳಿಕ ಕಾಶ್ಮೀರ ಸೇರಿದಂತೆ ಗಡಿಯ 4 ರಾಜ್ಯಗಳಲ್ಲಿ ಎಲ್ಲಿಯೂ ಕದನ ವಿರಾಮ ಉಲ್ಲಂಘಿಸುವ ಗೋಜಿಗೆ ಹೋಗಿಲ್ಲ ಎಂದು ಭಾರತೀಯ ಸೇನೆ ಮಾಹಿತಿ ನೀಡಿದೆ.

ಆಂದೋಲನ ಡೆಸ್ಕ್

Recent Posts

ನಾಳೆಯಿಂದ ರಾಜ್ಯಾದ್ಯಂತ ವೈದ್ಯರ ಮುಷ್ಕರ: ಸರ್ಕಾರಿ ಆಸ್ಪತ್ರೆ ಒಪಿಡಿ ಬಂದ್‌

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಆರೋಗ್ಯ ಇಲಾಖೆ ನೌಕರರು ನಾಳೆಯಿಂದ ಮುಷ್ಕರ ಕೈಗೊಂಡಿದ್ದಾರೆ. ನಾಳೆಯಿಂದ ಆರೋಗ್ಯ ಇಲಾಖೆ…

23 mins ago

ಮಧ್ಯಪ್ರಾಚ್ಯ ಬಿಕ್ಕಟ್ಟು: ಕನ್ನಡಿಗರ ರಕ್ಷಣೆಗೆ ಕೇಂದ್ರ ಸಚಿವ ಜೈಶಂಕರ್‌ಗೆ ಮನವಿ

ನವದೆಹಲಿ: ಇಸ್ರೇಲ್-ಇರಾನ್‌ ಸಂಘರ್ಷ ಮುಂದುವರಿದಿರುವ ಹಿನ್ನೆಲೆಯಲ್ಲಿ ವಿಮಾನಗಳ ಹಾರಾಟ ಸಂಪೂರ್ಣವಾಗಿ ಬಂದ್‌ ಆಗಿದೆ. ಸೌದಿ ಅರೇಬಿಯಾ ಸೇರಿದಂತೆ ವಿವಿಧ ದೇಶಗಳಲ್ಲಿ…

2 hours ago

ಮುಂದುವರಿದ ಇರಾನ್‌-ಇಸ್ರೇಲ್‌ ಸಂಘರ್ಷ: ಬೆಂಗಳೂರಿನಲ್ಲಿ 17 ವಿಮಾನಗಳ ಹಾರಾಟ ರದ್ದು

ಬೆಂಗಳೂರು: ಇರಾನ್‌-ಇಸ್ರೇಲ್‌ ಯುದ್ಧ ಮತ್ತೆ ತೀವ್ರಗೊಂಡ ಪರಿಣಾಮ ಬೆಂಗಳೂರಿಗೆ ಆಗಮಿಸಬೇಕಿದ್ದ 8 ಮತ್ತು ನಿರ್ಗಮಿಸಬೇಕಿದ್ದ 9 ವಿಮಾನಗಳ ಹಾರಾಟ ರದ್ದಾಗಿದೆ.…

2 hours ago

ಡಿ.ಕೆ.ಶಿವಕುಮಾರ್‌ ಅತ್ಯಂತ ಯಶಸ್ವಿ ಅಧ್ಯಕ್ಷ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಇವತ್ತಿಗೆ ಆರು ವರ್ಷಗಳಾಗಿದ್ದು, ಅತ್ಯಂತ ಯಶಸ್ವಿ ಅಧ್ಯಕ್ಷ ಎನಿಸಿಕೊಂಡಿದ್ದಾರೆ ಎಂದು ಸಚಿವೆ…

3 hours ago

ಸ್ಮೃತಿ ಇರಾನಿ ಕಾಣುತ್ತಿಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ವ್ಯಂಗ್ಯ

ಬೆಂಗಳೂರು: ಅಡುಗೆ ಅನಿಲದ ಬೆಲೆ ಏರಿಕೆ ಮಾಡುವ ಮೂಲಕ ಮಹಿಳೆಯರಿಗೆ ಉಡುಗೊರೆ ನೀಡಿರುವ ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಲು ಬಯಸುವೆ.…

3 hours ago

ಮೃಗಾಲಯದ ಆನೆ ಅಭಿ ಮತ್ತಿಗೋಡಿನಲ್ಲಿ ಕೊನೆಯುಸಿರು

ಮೈಸೂರು: ನಾಗರಹೊಳೆ ವ್ಯಾಪ್ತಿಯ ಮತ್ತಿಗೋಡು ಆನೆ ಶಿಬಿರದಲ್ಲಿದ್ದ 23 ವರ್ಷದ ಜೂನಿಯರ್ ಅಭಿ ಆನೆ ಅನಾರೋಗ್ಯದಿಂದ ಮೃತಪಟ್ಟಿದೆ.‌ ನಾಗರಹೊಳೆ ರಾಷ್ಟ್ರೀಯ…

3 hours ago