Mysore
18
broken clouds

Social Media

ಶನಿವಾರ, 31 ಜನವರಿ 2026
Light
Dark

ಜಮ್ಮು-ಕಾಶ್ಮೀರ| ಇಬ್ಬರು ಉಗ್ರರನ್ನು ಸದೆಬಡಿದ ಭಾರತೀಯ ಸೇನೆ

indian army

ಜಮ್ಮು-ಕಾಶ್ಮೀರ: ಭಾರತೀಯ ಸೇನೆಯು ಆಪರೇಷನ್‌ ಶಿವಶಕ್ತಿ ಕಾರ್ಯಾಚರಣೆ ಕೈಗೊಂಡಿದ್ದು, ಜಮ್ಮು-ಕಾಶ್ಮೀರದ ಗಡಿಯಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ. ಕಾಶ್ಮೀರದ ಪೂಂಚ್‌ ಸೆಕ್ಟರ್‌ ಬಳಿ ಗಡಿ ನಿಯಂತ್ರಣ ರೇಖೆ ಬಳಿ ದೇಶದ ಒಳನುಗ್ಗಲು ಯತ್ನಿಸುತ್ತಿದ್ದ ಇಬ್ಬರು ಉಗ್ರರನ್ನು ಭಾರತೀಯ ಸೇನೆ ಎನ್‌ಕೌಂಟರ್‌ನಲ್ಲಿ ಹೊಡೆದುರುಳಿಸಿದೆ.

ಇನ್ನು ನುಸುಳುಕೋರರನ್ನು ತಡೆಯುವ ನಿಟ್ಟಿನಲ್ಲಿ ಭಾರತೀಯ ಸೇನೆ ಗಡಿಯುದ್ದಕ್ಕೂ ಆಪರೇಷನ್‌ ಶಿವಶಕ್ತಿ ಕಾರ್ಯಾಚರಣೆಯನ್ನು ಕೈಗೊಂಡಿದ್ದು, ಸೇನೆಯ 16 ಕಾರ್ಪ್ಸ್‌ ತುಕಡಿ ಈ ಕಾರ್ಯಾಚರಣೆ ನಡೆಸಿದೆ.

ಎನ್‌ಕೌಂಟರ್‌ನಲ್ಲಿ ಬಲಿಯಾದ ಉಗ್ರರ ಬಳಿ ಮೂರು ಆಯುಧಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಭಾರತೀಯ ಸೇನೆ ತಿಳಿಸಿದೆ.

Tags:
error: Content is protected !!