Mysore
30
clear sky

Social Media

ಶುಕ್ರವಾರ, 07 ಫೆಬ್ರವರಿ 2025
Light
Dark

ಜಮ್ಮು & ಕಾಶ್ಮೀರ: ಉಗ್ರರೊಂದಿಗಿನ ಗುಂಡಿನ ಚಕಮಕಿಯಲ್ಲಿ ಭಾರತೀಯ ಯೋಧ ಹುತಾತ್ಮ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೋಪೊರ್‌ ಪ್ರದೇಶದಲ್ಲಿ ಶಂಕಿತ ಉಗ್ರರ ಹಡಗುತಾಣದಲ್ಲಿ ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಭಾರತೀಯ ಸೇನೆಯ ಯೋಧರೊಬ್ಬರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಉಗ್ರರ ನಡುವೆ ನಡೆದ ಗುಂಡಿನ ಘರ್ಷಣೆಯಲ್ಲಿ ಭಾರತೀಯ ಯೋಧ ಗಾಯಗೊಂಡಿದ್ದು, ಆಸ್ಪತ್ರೆಗೆ ಕರೆದುಕೊಂಡು ಹೋಗುವ ಮಾರ್ಗದಲ್ಲಿ ಅವರು ಸಾವಿಗೀಡಾಗಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈಚೆಗೆ ಸೋಪೋರ್‌ನಲ್ಲಿ ಭದ್ರತಾ ಪಡೆಗಳ ಜೊತೆಗಿನ ಎನ್‌ಕೌಂಟರ್‌ನಲ್ಲಿ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿತ್ತು ಎಂದು ಹೇಳಿದ್ದಾರೆ.

Tags: