ಶ್ರೀನಗರ: ಶ್ರೀನಗರದ ಹೊರವಲಯಲ್ಲಿರುವ ನೌಗಮ್ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದ ಆಕಸ್ಮಿಕ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.
ಘಟನೆಯಲ್ಲಿ 32 ಮಂದಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಳೆದ ವಾರ ಫರೀದಾಬಾದ್ ಭಯೋತ್ಪಾದನಾ ಮಾಡ್ಯೂಲ್ ಪ್ರಕರಣದಲ್ಲಿ ವಶಪಡಿಸಿಕೊಂಡಿದ್ದ ಸ್ಫೋಟಕಗಳ ಸಂಗ್ರಹದಿಂದ ಅಧಿಕಾರಿಗಳು ಮಾದರಿಯನ್ನು ಹೊರತೆಗೆಯುತ್ತಿದ್ದಾಗ ಆಕಸ್ಮಿಕವಾಗಿ ಸ್ಫೋಟ ಸಂಭವಿಸಿದೆ.
ಸ್ಫೋಟದಿಂದ ವ್ಯಾಪಕ ಹಾನಿಯಾಗಿದ್ದು, ಹಲವಾರು ವಾಹನಗಳಿಗೆ ಬೆಂಕಿ ಹೊತ್ತಿಕೊಂಡಿತ್ತು. ಜೊತೆಗೆ ಹತ್ತಿರದ ಮನೆಗಳ ಕಿಟಕಿ ಗಾಜುಗಳು ಸಹ ಛಿದ್ರಗೊಂಡಿದ್ದು, ಕೆಲವು ಕಿಲೋ ಮೀಟರ್ ದೂರದಲ್ಲಿ ಅದರ ಪರಿಣಾಮ ಕಂಡುಬಂದಿದೆ.
ಭಾರೀ ಸ್ಫೋಟದಿಂದ ಪೊಲೀಸ್ ಠಾಣೆ ಕಟ್ಟಡಕ್ಕೆ ಹಾನಿಯನ್ನುಂಟುಮಾಡಿದ್ದು, ಸಣ್ಣ ಸಣ್ಣ ಸ್ಫೋಟಗಳು ಬಾಂಬ್ ನಿಷ್ಕ್ರಿಯ ದಳದ ತಕ್ಷಣದ ರಕ್ಷಣಾ ಕಾರ್ಯಾಚರಣೆಯನ್ನು ತಡೆಯಿತು.
ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…
ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…
ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…
ಮಂಡ್ಯ: ಮನ್ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…
ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…