ಜಮ್ಮು-ಕಾಶ್ಮೀರ: ಕಳೆದ ಕೆಲ ದಿನಗಳಿಂದ ಜಮ್ಮು-ಕಾಶ್ಮೀರದಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.
ಮಳೆ ಸಂಬಂಧಿತ ಘಟನೆಗಳಲ್ಲಿ ಕನಿಷ್ಠ 41 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಕಳೆದ ಎರಡು ದಿನಗಳಿಂದ ಯಾತ್ರಾ ಮಾರ್ಗದಲ್ಲಿ ಸಂಭವಿಸಿದ ಭಾರೀ ಭೂಕುಸಿತದಲ್ಲಿ 41 ಮಾತಾ ವೈಷ್ಣೋದೇವಿ ಯಾತ್ರಿಕರು ಸಾವನ್ನಪ್ಪಿದ್ದಾರೆ. ಕಳೆದ 24 ಗಂಟೆಗಳಲ್ಲಿ ಜಮ್ಮುವಿನಲ್ಲಿ 380 ಮಿ.ಮೀ ಮಳೆಯಾಗಿದೆ ಎಂದು ವರದಿಯಾಗಿದೆ.
ಘಟನೆಯಲ್ಲಿ ಕನಿಷ್ಠ 20 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ದೋಡಾದಲ್ಲಿ ನಾಲ್ಕು ಸಾವುಗಳು ವರದಿಯಾಗಿದೆ. ಭೂಕುಸಿತ ಸಂತ್ರಸ್ತರ ಕುಟುಂಬಗಳಿಗೆ ತಲಾ 9 ಲಕ್ಷ ರೂಪಾಯಿ ಪರಿಹಾರವನ್ನು ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಪ್ರಕಟಿಸಿದ್ದಾರೆ.
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರು ಭೂಕುಸಿತ ಘಟನೆಯಲ್ಲಿ ಮೃತಪಟ್ಟ ರಾಜ್ಯದ ಯಾತ್ರಿಕರಿಗೆ 4 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದಾರೆ.





