ದೇಶ- ವಿದೇಶ

ಭೀಕರ ಪ್ರವಾಹಕ್ಕೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ

ಜಮ್ಮು-ಕಾಶ್ಮೀರ: ಕಳೆದ ಕೆಲ ದಿನಗಳಿಂದ ಜಮ್ಮು-ಕಾಶ್ಮೀರದಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.

ಮಳೆ ಸಂಬಂಧಿತ ಘಟನೆಗಳಲ್ಲಿ ಕನಿಷ್ಠ 41 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಕಳೆದ ಎರಡು ದಿನಗಳಿಂದ ಯಾತ್ರಾ ಮಾರ್ಗದಲ್ಲಿ ಸಂಭವಿಸಿದ ಭಾರೀ ಭೂಕುಸಿತದಲ್ಲಿ 41 ಮಾತಾ ವೈಷ್ಣೋದೇವಿ ಯಾತ್ರಿಕರು ಸಾವನ್ನಪ್ಪಿದ್ದಾರೆ. ಕಳೆದ 24 ಗಂಟೆಗಳಲ್ಲಿ ಜಮ್ಮುವಿನಲ್ಲಿ 380 ಮಿ.ಮೀ ಮಳೆಯಾಗಿದೆ ಎಂದು ವರದಿಯಾಗಿದೆ.

ಘಟನೆಯಲ್ಲಿ ಕನಿಷ್ಠ 20 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ದೋಡಾದಲ್ಲಿ ನಾಲ್ಕು ಸಾವುಗಳು ವರದಿಯಾಗಿದೆ. ಭೂಕುಸಿತ ಸಂತ್ರಸ್ತರ ಕುಟುಂಬಗಳಿಗೆ ತಲಾ 9 ಲಕ್ಷ ರೂಪಾಯಿ ಪರಿಹಾರವನ್ನು ಲೆಫ್ಟಿನೆಂಟ್‌ ಗವರ್ನರ್‌ ಮನೋಜ್‌ ಸಿನ್ಹಾ ಪ್ರಕಟಿಸಿದ್ದಾರೆ.

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ ಅವರು ಭೂಕುಸಿತ ಘಟನೆಯಲ್ಲಿ ಮೃತಪಟ್ಟ ರಾಜ್ಯದ ಯಾತ್ರಿಕರಿಗೆ 4 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದಾರೆ.

ಆಂದೋಲನ ಡೆಸ್ಕ್

Recent Posts

13 ವರ್ಷಗಳಿಂದ ಕೋಮಾ : ಹರೀಶ್‌ ರಾಣಾ ದಯಾಮರಣಕ್ಕೆ ಸುಪ್ರೀಂ ಅನುಮತಿ

ಹೊಸದಿಲ್ಲಿ : ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ ಹರೀಶ್‌ ರಾಣಾ ದಯಾಮರಣಕ್ಕೆ ಸುಪ್ರೀಂಕೋರ್ಟ ಅನುಮತಿ ನೀಡಿದೆ. ಚಲಿಸಲು ಅಥವಾ ಮಾತನಾಡಲು…

22 mins ago

ಹಾರ್ಮುಜ್‌ ಜಲಸಂಧಿ ಬಳಿ ಅಮೇರಿಕಾ ಅಬ್ಬರ: ಇರಾನ್‌ನ 16 ನೌಕೆಗಳು ಧ್ವಂಸ

ಟೆಹರಾನ್:‌ ವಿಶ್ವದ ಪ್ರಮುಖ ಇಂಧನ ಸಾಗಣೆ ಮಾರ್ಗವಾದ ಹಾರ್ಮುಜ್‌ ಜಲಸಂಧಿಯ ಬಳಿ ನೌಕಾ ಮೈನ್‌ಗಳನ್ನು ಅಳವಡಿಸಲು ಸಜ್ಜಾಗಿದ್ದ ಇರಾನ್‌ನ 16…

2 hours ago

90 ದಿನದೊಳಗೆ ಅಂಗನವಾಡಿ ಖಾಲಿ ಹುದ್ದೆ ಭರ್ತಿಗೆ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಬೆಂಗಳೂರು: ಅಂಗನವಾಡಿ ಕೇಂದ್ರಗಳಲ್ಲಿ ಯಾವುದೇ ಹುದ್ದೆ ಖಾಲಿಯಾದ 90 ದಿನಗಳ ಒಳಗಾಗಿ ಭರ್ತಿ ಮಾಡಬೇಕು ಎಂದು ಕಳೆದ ಡಿಸೆಂಬರ್‌ನಲ್ಲೇ ಜಿಲ್ಲಾಧಿಕಾರಿಗಳು…

2 hours ago

ಗೃಹ ಬಳಕೆಯ ಗ್ಯಾಸ್‌‍ ಸಿಲಿಂಡರ್‌ನ ಪೂರೈಕೆಯಲ್ಲಿ ಯಾವುದೇ ಸಮಸ್ಯೆ ಇಲ್ಲ: ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು: ಗೃಹ ಬಳಕೆಯ ಗ್ಯಾಸ್‌‍ ಸಿಲಿಂಡರ್‌ನ ಪೂರೈಕೆಯಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ…

3 hours ago

ಮಂಡ್ಯ: ಕುಡಿಯುವ ನೀರಿನ ಗುಣಮಟ್ಟಕ್ಕೆ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ಕುಡಿಯುವ ನೀರಿನ ಗುಣಮಟ್ಟವು ನೇರವಾಗಿ ಆರೋಗ್ಯದ ಮೇಲೆ ಪರಿಣಾಮ ಬೀರುವುದರಿಂದ ಸುರಕ್ಷಿತ, ಶುದ್ಧ ಮತ್ತು ರಾಸಾಯನಿಕ ಮುಕ್ತ ನೀರನ್ನು…

4 hours ago

ನಾಳೆ ಮೈಸೂರಿಗೆ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಜೆಟ್‌ ಅಧಿವೇಶನದ ನಡುವೆಯೇ ಸಿಎಂ ಸಿದ್ದರಾಮಯ್ಯ ನಾಳೆ ಮೈಸೂರಿಗೆ ಆಗಮಿಸಲಿದ್ದಾರೆ. ನಾಳೆ ಬೆಳಿಗ್ಗೆ 10 ಗಂಟೆಗೆ ಎಚ್‌ಎಎಲ್‌ ವಿಮಾನ…

4 hours ago