Mysore
17
clear sky

Social Media

ಗುರುವಾರ, 11 ಡಿಸೆಂಬರ್ 2025
Light
Dark

ಜಮ್ಮು ಕಾಶ್ಮೀರ: ಕಂದಕಕ್ಕೆ ಉರುಳಿದ ಸೇನಾ ವಾಹನ: ಯೋಧ ಸಾವು

ಶ್ರೀನಗರ: ಸೇನಾ ವಾಹನವು ರಸ್ತೆಯಿಂದ ಆಯಾತಪ್ಪಿ ಕಂದಕಕ್ಕೆ ಉರುಳಿದ ಘಟನೆ ಜಮ್ಮು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಇಂದು(ಜೂ.13)ನಡೆದಿದೆ.

ಘಟನೆಯಲ್ಲಿ ಓರ್ವ ಯೋಧ ಸಾವನ್ನಪ್ಪಿದ್ದು, ಇತರ ನಾಲ್ವರು ಯೋಧರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಂದು ಸಂಜೆ ನೌಶೇರಾ ವಲಯದ ಗಡಿ ನಿಯಂತ್ರಣ ರೇಖೆಗೆ (ಎಲ್‌ಒಸಿ) ಸಮೀಪವಿರುವ ಭವಾನಿ ಗ್ರಾಮದ ಬಳಿ ಈ ಘಟನೆ ಸಂಭವಿಸಿದೆ ಎಂದು ಅಧಿಕಾರಿಗಳು ಖಚಿತಪಡಿಸಿದ್ದಾರೆ.

ತಕ್ಷಣಕ್ಕೆ ಧಾವಿಸಿದ ತುರ್ತು ಸ್ಪಂದನಕಾರರು ಗಾಯಗೊಂಡ ಸೈನಿಕರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಾಯಗೊಂಡಿದ್ದ ಸೈನಿಕರಲ್ಲಿ ಓರ್ವ ಯೋಧ ಸಾವನ್ನಪ್ಪಿದ್ದಾರೆ. ಗಾಯಗೊಂಡಿರುವ ನಾಲ್ವರು ಯೋಧರಿಗೆ ವೈದ್ಯಕೀಯ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Tags:
error: Content is protected !!