ಶ್ರೀನಗರ: ಸೇನಾ ವಾಹನವು ರಸ್ತೆಯಿಂದ ಆಯಾತಪ್ಪಿ ಕಂದಕಕ್ಕೆ ಉರುಳಿದ ಘಟನೆ ಜಮ್ಮು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಇಂದು(ಜೂ.13)ನಡೆದಿದೆ.
ಘಟನೆಯಲ್ಲಿ ಓರ್ವ ಯೋಧ ಸಾವನ್ನಪ್ಪಿದ್ದು, ಇತರ ನಾಲ್ವರು ಯೋಧರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಂದು ಸಂಜೆ ನೌಶೇರಾ ವಲಯದ ಗಡಿ ನಿಯಂತ್ರಣ ರೇಖೆಗೆ (ಎಲ್‌ಒಸಿ) ಸಮೀಪವಿರುವ ಭವಾನಿ ಗ್ರಾಮದ ಬಳಿ ಈ ಘಟನೆ ಸಂಭವಿಸಿದೆ ಎಂದು ಅಧಿಕಾರಿಗಳು ಖಚಿತಪಡಿಸಿದ್ದಾರೆ.
ತಕ್ಷಣಕ್ಕೆ ಧಾವಿಸಿದ ತುರ್ತು ಸ್ಪಂದನಕಾರರು ಗಾಯಗೊಂಡ ಸೈನಿಕರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಾಯಗೊಂಡಿದ್ದ ಸೈನಿಕರಲ್ಲಿ ಓರ್ವ ಯೋಧ ಸಾವನ್ನಪ್ಪಿದ್ದಾರೆ. ಗಾಯಗೊಂಡಿರುವ ನಾಲ್ವರು ಯೋಧರಿಗೆ ವೈದ್ಯಕೀಯ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಾಡಾನೆಗಳ ಹಾವಳಿಯಿಂದಾಗಿ ಕಾಡಂಚಿನ ಜನರಿಗೆ ತೊಂದರೆಯಾಗುತ್ತಿದೆ. ಆದ್ದರಿಂದ ಆನೆಗಳನ್ನು ಕೊಲ್ಲಲು ಅನುಮತಿ ನೀಡಬೇಕು ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ…
ರಾಜ್ಯಸಭೆಯ ಕಲಾಪದ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡುವ ಭರದಲ್ಲಿ ಕೆಲವರು ಅಂಬೇಡ್ಕರ್ ಎನ್ನುವುದನ್ನು ಈಗ ಫ್ಯಾಷನ್…
ದಾ.ರಾ. ಮಹೇಶ್ ವೀರನಹೊಸಹಳ್ಳಿ: ತಾಲ್ಲೂಕಿನ ಬನ್ನಿಕುಪ್ಪೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿತ್ಯ ಅವರೆಕಾಯಿ ಮಾರಾಟದಿಂದಾಗಿ ಟ್ರಾಫಿಕ್ ಜಾಮ್ ಆಗುತ್ತಿದ್ದು, ವಾಹನಗಳ ಸಂಚಾರಕ್ಕೆ…
ಮಂಡ್ಯ: ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20,21 ಮತ್ತು 22ರಂದು ಮೂರು ದಿನಗಳ ಕಾಲ ಜರುಗಲಿರುವ ಕನ್ನಡ ನುಡಿ ಜಾತ್ರೆ…
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…