ನವದೆಹಲಿ: ಜಮ್ಮು-ಕಾಶ್ಮೀರ ವಿಧಾನಸಭೆ ಚುನಾವಣೆಗೆ ಬಿಜೆಪಿ 44 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಜಮ್ಮು-ಕಾಶ್ಮೀರದಲ್ಲಿ ಒಟ್ಟು 90 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಈ ಬಾರಿ ಸೆಪ್ಟೆಂಬರ್.18, 25 ಹಾಗೂ ಅಕ್ಟೋಬರ್.1ರಂದು ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಇನ್ನು ಅಕ್ಟೋಬರ್.4ರಂದು ಮತ ಎಣಿಕೆ ನಡೆಯಲಿದೆ.
ನಿನ್ನೆ ದೆಹಲಿಯಲ್ಲಿ ನಡೆದ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವರು ಅಳೆದು ತೂಗಿ 44 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ.
ಇನ್ನು ಉಳಿದ ಕ್ಷೇತ್ರಗಳಿಗೆ ಕೆಲವೇ ದಿನಗಳಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ ಎಂಬ ಮಾಹಿತಿ ಲಭ್ಯವಾಗಿದ್ದು, ಚುನಾವಣೆಗೆ ಬಿಜೆಪಿ ನಾಯಕರು ಸರ್ವ ರೀತಿಯಲ್ಲೂ ಸಜ್ಜಾಗಿದ್ದಾರೆ.
ಜಮ್ಮು-ಕಾಶ್ಮೀರದಲ್ಲಿ ಎಲ್ಲಾ ಕ್ಷೇತ್ರಗಳನ್ನು ಗೆಲ್ಲಲೇಬೇಕು ಎಂದು ಪಣ ತೊಟ್ಟಿರುವ ಬಿಜೆಪಿ ನಾಯಕರು, ಚುನಾವಣೆ ಅಂಗವಾಗಿ ಪ್ರಚಾರ ಸಭೆಯನ್ನು ಸಹ ನಡೆಸುತ್ತಿದೆ.





