ಜಮ್ಮು-ಕಾಶ್ಮೀರ: ಜಮ್ಮು-ಕಾಶ್ಮೀರದಲ್ಲಿ ಉಗ್ರರು ಹಾಗೂ ಭಾರತೀಯ ಯೋಧರ ನಡುವೆ ಕಾಳಗ ಮುಂದುವರಿದಿದ್ದು, ಇಂದು ನಡೆದ ಎನ್‌ಕೌಂಟರ್‌ನಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದಾರೆ.
ಜಮ್ಮು-ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಭಯೋತ್ಪಾದಕರು ನಡೆಸಿದ ಎನ್‌ಕೌಂಟರ್‌ನಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದು, ಹಲವರಿಗೆ ಗಂಭೀರ ಗಾಯಗಳಾಗಿದೆ. ಗಾಯಾಳು ಯೋಧರನ್ನು ಜಮ್ಮು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಎನ್‌ಒಸಿ ಬಳಿಯಿರುವ ಕುಮ್ಕಡಿಯಲ್ಲಿ ಸೇನಾ ಪೋಸ್ಟ್ ಮೇಲೆ ಭಯೋತ್ಪಾದಕ ದಾಳಿ ನಡೆದಿದೆ ಎನ್ನಲಾಗಿದ್ದು, ಪಾಕಿಸ್ತಾನದ ಬಾರ್ಡರ್ ಆಕ್ಷನ್ ಟೀಮ್‌ನಿಂದಲೇ ಈ ದಾಳಿಯಾಗಿದೆ ಎಂದು ಬಲ್ಲ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.
ಕಾರ್ಗಿಲ್ ವಿಜಯ್ ದಿವಸ್ ಆದ ನಿನ್ನೆ ಪ್ರಧಾನಿ ನರೇಂದ್ರ ಮೋದಿ ಅವರು ಪಾಕಿಸ್ತಾನಕ್ಕೆ ಕಠಿಣ ಎಚ್ಚರಿಕೆ ನೀಡಿದ್ದರು. ಭಾರತೀಯ ಸೇನೆಯು ಪ್ರತಿ ಭಯೋತ್ಪಾದಕ ಸವಾಲನ್ನು ಸೋಲಿಸುತ್ತದೆ ಎಂದು ಪಾಕಿಸ್ತಾನದ ವಿರುದ್ಧ ಕಿಡಿಕಾರಿದ್ದರು.
ಆದರೂ ಜಮ್ಮು-ಕಾಶ್ಮೀರದಲ್ಲಿ ಉಗ್ರರು ಪದೇ ಪದೇ ದಾಳಿ ನಡೆಸುತ್ತಿದ್ದು, ಭಯೋತ್ಪಾದಕರಿಗೆ ಭಾರತೀಯ ಸೇನೆ ಪ್ರತ್ಯುತ್ತರ ಕೂಡ ನೀಡುತ್ತಿದೆ. ಇತ್ತೀಚೆಗೆ ನಡೆದ ಎಲ್ಲಾ ಎನ್‌ಕೌಂಟರ್‌ನಲ್ಲಿಯೂ ಹಲವಾರು ಭಯೋತ್ಪಾದಕರನ್ನು ಹೊಡೆದುರುಳಿಸಿದೆ.
ಈ ಎಲ್ಲಾ ಬೆಳವಣಿಗೆಗಳ ನಡುವೆ ಪ್ರಧಾನಿ ನರೇಂದ್ರ ಮೋದಿ ಅವರು ಉಗ್ರರ ದಾಳಿಯನ್ನು ತಡೆಗಟ್ಟಲು ಹೊಸ ಹೆಜ್ಜೆ ಇಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.