ದೇಶ- ವಿದೇಶ

ಜಮ್ಮು-ಕಾಶ್ಮೀರದ ಕುಪ್ವಾರದಲ್ಲಿ ಎನ್‌ಕೌಂಟರ್:‌ ಓರ್ವ ಯೋಧ ಹುತಾತ್ಮ

ಜಮ್ಮು-ಕಾಶ್ಮೀರ: ಜಮ್ಮು-ಕಾಶ್ಮೀರದಲ್ಲಿ ಉಗ್ರರು ಹಾಗೂ ಭಾರತೀಯ ಯೋಧರ ನಡುವೆ ಕಾಳಗ ಮುಂದುವರಿದಿದ್ದು, ಇಂದು ನಡೆದ ಎನ್‌ಕೌಂಟರ್‌ನಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದಾರೆ.

ಜಮ್ಮು-ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಭಯೋತ್ಪಾದಕರು ನಡೆಸಿದ ಎನ್‌ಕೌಂಟರ್‌ನಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದು, ಹಲವರಿಗೆ ಗಂಭೀರ ಗಾಯಗಳಾಗಿದೆ. ಗಾಯಾಳು ಯೋಧರನ್ನು ಜಮ್ಮು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಎನ್‌ಒಸಿ ಬಳಿಯಿರುವ ಕುಮ್ಕಡಿಯಲ್ಲಿ ಸೇನಾ ಪೋಸ್ಟ್‌ ಮೇಲೆ ಭಯೋತ್ಪಾದಕ ದಾಳಿ ನಡೆದಿದೆ ಎನ್ನಲಾಗಿದ್ದು, ಪಾಕಿಸ್ತಾನದ ಬಾರ್ಡರ್‌ ಆಕ್ಷನ್‌ ಟೀಮ್‌ನಿಂದಲೇ ಈ ದಾಳಿಯಾಗಿದೆ ಎಂದು ಬಲ್ಲ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

ಕಾರ್ಗಿಲ್‌ ವಿಜಯ್‌ ದಿವಸ್‌ ಆದ ನಿನ್ನೆ ಪ್ರಧಾನಿ ನರೇಂದ್ರ ಮೋದಿ ಅವರು ಪಾಕಿಸ್ತಾನಕ್ಕೆ ಕಠಿಣ ಎಚ್ಚರಿಕೆ ನೀಡಿದ್ದರು. ಭಾರತೀಯ ಸೇನೆಯು ಪ್ರತಿ ಭಯೋತ್ಪಾದಕ ಸವಾಲನ್ನು ಸೋಲಿಸುತ್ತದೆ ಎಂದು ಪಾಕಿಸ್ತಾನದ ವಿರುದ್ಧ ಕಿಡಿಕಾರಿದ್ದರು.

ಆದರೂ ಜಮ್ಮು-ಕಾಶ್ಮೀರದಲ್ಲಿ ಉಗ್ರರು ಪದೇ ಪದೇ ದಾಳಿ ನಡೆಸುತ್ತಿದ್ದು, ಭಯೋತ್ಪಾದಕರಿಗೆ ಭಾರತೀಯ ಸೇನೆ ಪ್ರತ್ಯುತ್ತರ ಕೂಡ ನೀಡುತ್ತಿದೆ. ಇತ್ತೀಚೆಗೆ ನಡೆದ ಎಲ್ಲಾ ಎನ್‌ಕೌಂಟರ್‌ನಲ್ಲಿಯೂ ಹಲವಾರು ಭಯೋತ್ಪಾದಕರನ್ನು ಹೊಡೆದುರುಳಿಸಿದೆ.

ಈ ಎಲ್ಲಾ ಬೆಳವಣಿಗೆಗಳ ನಡುವೆ ಪ್ರಧಾನಿ ನರೇಂದ್ರ ಮೋದಿ ಅವರು ಉಗ್ರರ ದಾಳಿಯನ್ನು ತಡೆಗಟ್ಟಲು ಹೊಸ ಹೆಜ್ಜೆ ಇಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ರಾಜ್ಯದಲ್ಲಿ ವಸತಿ ರಹಿತರಿಗೆ 5 ಲಕ್ಷ ನಿವೇಶನ : ಸಿಎಂ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ 5 ಲಕ್ಷ ನಿವೇಶನ ಹಂಚಿಕೆಗೆ ತೀರ್ಮಾನ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದರು. ಸಿಎಂ ಡಿ.ಕೆ.ಶಿವಕುಮಾರ್‌ ನೇತೃತ್ವದ…

11 hours ago

ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ

ಮೈಸೂರು: ಚಿತ್ರದುರ್ಗದ  ರೇಣುಕಾಸ್ವಾಮಿ ಕೊಲೆ  ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…

14 hours ago

ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್‌ ಒಡೆಯರ್‌

ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್  ಒಡೆಯರ್‌ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…

15 hours ago

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್‌ 12ರಂದು ದೆಹಲಿಗೆ…

16 hours ago

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

21 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

21 hours ago