Mysore
17
overcast clouds

Social Media

ಮಂಗಳವಾರ, 10 ಫೆಬ್ರವರಿ 2026
Light
Dark

ಕಾಶ್ಮೀರ ಜನರ ಸಾಂವಿಧಾನಿಕ ಹಕ್ಕು ರಕ್ಷಿಸಲು ನಮ್ಮ ಸರ್ಕಾರ ಬದ್ಧ: ಮಲ್ಲಿಕಾರ್ಜುನ ಖರ್ಗೆ

ಜಮ್ಮು-ಕಾಶ್ಮೀರ: ಜಮ್ಮು-ಕಾಶ್ಮೀರದ ಜನರ ಸಾಂವಿಧಾನಿ ಹಕ್ಕುಗಳನ್ನು ರಕ್ಷಿಸಲು ನಮ್ಮ ಪಕ್ಷ ಬದ್ಧವಾಗಿದೆ ಎಂದು ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ಜಮ್ಮು ಮತ್ತು ಕಾಶ್ಮೀರದ ಜನರ ಸಾಂವಿಧಾನಿಕ ಹಕ್ಕುಗಳನ್ನು ರಕ್ಷಿಸಲು ಕಾಂಗ್ರೆಸ್‌ ಪ್ರತಿಜ್ಞೆ ಮಾಡುತ್ತದೆ. ಜಮ್ಮು-ಕಾಶ್ಮೀರಕ್ಕೆ ಕಾಂಗ್ರೆಸ್‌ ಪಕ್ಷ ನೀಡಿದ ಏಳು ಗ್ಯಾರಂಟಿ ಯೋಜನೆಗಳು ಈ ಪ್ರದೇಶದ ಜನರ ಉಜ್ವಲ ಭವಿಷ್ಯವನ್ನು ರೂಪಿಸುವ ಗುರಿಯನ್ನು ಹೊಂದಿದೆ ಎಂದು ಬರೆದುಕೊಂಡಿದ್ದಾರೆ.

ಕಾಂಗ್ರೆಸ್ ಪಕ್ಷದ ಏಳು ಗ್ಯಾರಂಟಿ ಯೋಜನೆಗಳ ಬಗ್ಗೆ ವಿವರಿಸಿ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.‌ ಜಮ್ಮು ಮತ್ತು ಕಾಶ್ಮೀರ ಜನರ ಬಗ್ಗೆ ಕಾಂಗ್ರೆಸ್‌ ಪಕ್ಷ ಹೊಸ ಹೊಸ ಯೋಜನೆಗಳನ್ನು ಕೈಗೊಂಡು ಅಭಿವೃದ್ಧಿ ಮಾಡುವತ್ತ ಹೆಜ್ಜೆ ಇಡಲಿದೆ ಎಂದು ಮಾಹಿತಿ ನೀಡಿದ್ದಾರೆ.

Tags:
error: Content is protected !!