ಜಮ್ಮು-ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್‌ನಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಭಾರತೀಯ ಸೇನೆಯ ಯೋಧ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದಕ್ಷಿಣ ಕಾಶ್ಮೀರ ಜಿಲ್ಲೆಯ ಮೊಡೆರ್ಗಾಮ್ ಗ್ರಾಮದಲ್ಲಿ ಭದ್ರತಾ ಸಿಬ್ಬಂದಿ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾಗ ಇದ್ದಕ್ಕಿದ್ದಂತೆ ಭಯೋತ್ಪಾದಕರು ಅವರ ಮೇಲೆ ಗುಂಡು ಹಾರಿಸಿದರು ಎಂದು ಅಧಿಕಾರಿಗಳು ಹೇಳಿದ್ದಾರೆ.
ಗುಂಡಿನ ಚಕಮಕಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಭಾರತೀಯ ಸೇನೆಯ ಯೋಧ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆದರೂ ಕಾರ್ಯಾಚರಣೆ ಮತ್ತೆ ಮುಂದುವರಿದಿದ್ದು, ಉಗ್ರರ ವಿರುದ್ಧ ಸೆದೆಬಡಿಯಲು ಸೇನೆ ಸರ್ವ ರೀತಿಯಲ್ಲೂ ಸಜ್ಜಾಗಿದೆ.
ಇನ್ನೂ ಜಮ್ಮು-ಕಾಶ್ಮೀರದಲ್ಲಿ ಕಳೆದ ೧೫ ದಿನಗಳಿಂದಲೂ ಉಗ್ರರು ಹಾಗೂ ಭಾರತೀಯ ಸೇನೆಯ ನಡುವೆ ಗುಂಡಿನ ಚಕಮಕಿ ನಡೆಯುತ್ತಲೇ ಇದೆ. ಹೀಗಿರುವಾಗಲೇ ಇಂದು ಓರ್ವ ಭಾರತೀಯ ಯೋಧ ಸಾವನ್ನಪ್ಪಿರುವುದು ಎಲ್ಲರಿಗೂ ಭಾರೀ ಬೇಸರ ತರಿಸಿದ್ದು, ಉಗ್ರರನ್ನು ಸೆದೆಬಡಿಯಲೇಬೇಕು ಎಂದು ಭಾರತೀಯ ಸೇನೆ ಪಣತೊಟ್ಟಿದೆ.
ಇಲ್ಲಿನ ಮಣ್ಣು ಮನೆಯ ಬಳಿ ಉಗ್ರರು ಅಡಗಿರುವ ಶಂಕೆ ವ್ಯಕ್ತವಾಗಿದ್ದು, ಮಣ್ಣ ಮನೆಯನ್ನು ಭಾರತೀಯ ಸೇನೆ ಸುತ್ತುವರೆದಿದೆ ಎಂಬ ಮಾಹಿತಿ ಲಭ್ಯವಾಗಿದೆ