ದೇಶ- ವಿದೇಶ

ಜಮ್ಮು-ಕಾಶ್ಮೀರದಲ್ಲಿ ಉಗ್ರರಿಂದ ಗುಂಡಿನ ದಾಳಿ: ಕನ್ನಡಿಗ ಸಾವು

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಪಲ್ಗಾಮ್‌ನಲ್ಲಿ ಪ್ರವಾಸಿಗರನ್ನೇ ಗುರಿಯಾಗಿಸಿಕೊಂಡು ಉಗ್ರರು ಗುಂಡಿನ ದಾಳಿ ನಡೆಸಿದ್ದು, ಕನ್ನಡಿಗರೊಬ್ಬರು ಬಲಿಯಾಗಿದ್ದಾರೆ.

ಪಲ್ಗಾಮ್‌ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಪ್ರವಾಸಿಗರು ಸಾವನ್ನಪ್ಪಿದ್ದು, ಅವರಲ್ಲಿ ಕರ್ನಾಟಕದ ಶಿವಮೊಗ್ಗ ಮೂಲದ ಓರ್ವರು ಬಲಿಯಾಗಿದ್ದಾರೆ.

ಗುಂಡಿನ ದಾಳಿಯಲ್ಲಿ 12ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಮೃತ ಕನ್ನಡಿಗ ಶಿವಮೊಗ್ಗ ನಗರದ ನಿವಾಸಿ ಮಂಜುನಾಥ್‌ ಎಂದು ಗುರುತಿಸಲಾಗಿದೆ. ಅವರ ಪತ್ನಿ ಪಲ್ಲವಿ ಗಾಯಗೊಂಡಿದ್ದು, ಕಣ್ಣೆದುರೇ ಪತಿಯನ್ನು ಕಳೆದುಕೊಂಡು ಕಣ್ಣೀರಾಕಿದ್ದಾರೆ.

ಇನ್ನೋರ್ವ ಕನ್ನಡಿಗ ಅಭಿಜ್ಞರಾವ್‌ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಶ್ರೀನಗರ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಇನ್ನು ಘಟನೆ ನಡೆಯುತ್ತಿದ್ದಂತೆ ಪ್ರಧಾನಿ ನರೇಂದ್ರ ಅವರು ಗೃಹ ಸಚಿವ ಅಮಿತ್‌ ಶಾಗೆ ಕರೆ ಮಾಡಿದ್ದು, ಸ್ಥಳಕ್ಕೆ ತೆರಳುವಂತೆ ಸೂಚನೆ ನೀಡಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು, ಗುಂಡಿನ ದಾಳಿ ನಡೆಸಿರುವವರಿಗೆ ತಕ್ಕ ಪಾಠ ಕಲಿಸುತ್ತೇವೆ. ದಾಳಿಯಲ್ಲಿ ಭಾಗಿಯಾದವರನ್ನು ಬಿಡಲ್ಲ. ಈ ಬಗ್ಗೆ ಪ್ರಧಾನಿ ಮೋದಿ ಅವರಿಗೆ ಮಾಹಿತಿ ನೀಡಿದ್ದೇನೆ ಎಂದು ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

11 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

15 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

15 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

15 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

15 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

15 hours ago