ನವದೆಹಲಿ: ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪಾಕ್ ಮೂಲದ ಭಯೋತ್ಪಾದಕರು ಪ್ರವಾಸಿಗರನ್ನು ಗುರಿಯಾಗಿಸಿಕೊಂಡು 28 ಮಂದಿ ಮೇಲೆ ದಾಳಿ ಸಾವಿಗೆ ಕಾರಣರಾಗಿದ್ದಾರೆ. ಈ ಭಯೋತ್ಪಾದಕ ದಾಳಿಯನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ರಷ್ಯ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಸೇರಿದಂತೆ ಜಾಗತಿಕ ನಾಯಕರು ಖಂಡಿಸಿ, ಭಾರತದ ಜೊತೆಗೆ ಒಗ್ಗಟ್ಟ ಪ್ರದರ್ಶಿಸಿದ್ದಾರೆ.
ಭಾರತಕ್ಕೆ ಬೆಂಬಲ
ಪ್ರಧಾನಿ ಮೋದಿ ಜೊತೆ ದೂರವಾಣಿಯಲ್ಲಿ ಮಾತನಾಡಿದ ಟ್ರಂಪ್, ಭಯೋತ್ಪಾದಕ ದಾಳಿಯನ್ನು ಖಂಡಿಸುತ್ತೇನೆ. ಅಪರಾಧಿಗಳಿಗೆ ಶಿಕ್ಷಿಸಲು ಭಾರಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿದೆ ಹೇಳಿದ್ದಾರೆ.
ಭಾರತಕ್ಕೆ ಸಹಕಾರ ಹೆಚ್ಚಿಸಲು ಬದ್ಧ
ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಮೃಟಪಟ್ಟವರ ಕುಟುಂಬಗಳಿಗೆ ಸಂತಾಪಗಳು, ಪ್ರಧಾನಿ ಮೋದಿ ಅವರ ಜೊತೆ ಮಾತನಾಡಿದ್ದೇನೆ. ಈ ಕ್ರೂರ ಅಪರಾಧಕ್ಕೆ ಯಾವುದೇ ಸಮರ್ಥನೆ ಇಲ್ಲ. ಅಪರಾಧಿಗಳಿಗೆ ಶಿಕ್ಷೆ ಆಗಬೇಕು. ಭಯೋತ್ಪಾದನೆಯ ವಿರುದ್ಧ ಹೋರಾಡುವಲ್ಲಿ ಭಾರತೀಯದೊಂದಿಗೆ ಎಲ್ಲಾ ರೀತಿಯ ಸಹಕಾರವನ್ನು ಹೆಚ್ಚಿಸಲು ಬದ್ಧ ಎಂದು ರಷ್ಟಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹೇಳಿದ್ದಾರೆ.
ಭಾರತದೊಂದಿಗೆ ಇಸ್ರೇಲ್
ಅಮಾಯಕರ ಸಾವಿಗೆ ಕಾರಣವಾದ ಅಮಾನುಷ ಭಯೋತ್ಪಾದಕ ದಾಳಿಯಿಂದ ತೀವ್ರ ದುಃಖಿತರಾಗಿದ್ದೇವೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾ ಎಕ್ಸ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ. ಭಯೋತ್ಪಾದನೆಯ ವಿರುದ್ಧದ ಹೋರಾಟದಲ್ಲಿ ಇಸ್ರೇಲ್ ಭಾರತದೊಂದಿಗೆ ನಿಂತಿದೆ ಎಂದು ಅವರು ಹೇಳಿದ್ದಾರೆ.
ಇನ್ನೂ ಭಾರತದಲ್ಲೇ ಪ್ರವಾಸದಲ್ಲಿರುವ ಅಮೆರಿಕ ಉಪಾಧ್ಯಕ್ಷ ಜೆ.ಡಿ ವ್ಯಾನ್ಸ್, ವಿನಾಶಕಾರಿ ಭಯೋತ್ಪಾದಕ ದಾಳಿಯ ಮೃತರ ಕುಟುಂಬಕ್ಕೆ ಸಂತಾಪ ಹೇಳಿದ್ದಾರೆ. ನಾನು ಮತ್ತು ಉಷಾ ಸಂತಾಪ ಸೂಚಿಸುತ್ತೇವೆ. ನಾವು ಅವರ ನೋವನ್ನು ಹಂಚಿಕೊಳ್ಳಲು ಬಯಸುತ್ತೆವೆ ಎಂದು ತಿಳಿಸಿದ್ದಾರೆ.




