ದೇಶ- ವಿದೇಶ

ಭಯೋತ್ಪಾದಕ ದಾಳಿ : ಜಾಗತಿಕ ನಾಯಕರ ಖಂಡನೆ

ನವದೆಹಲಿ: ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪಾಕ್‌ ಮೂಲದ ಭಯೋತ್ಪಾದಕರು ಪ್ರವಾಸಿಗರನ್ನು ಗುರಿಯಾಗಿಸಿಕೊಂಡು 28 ಮಂದಿ ಮೇಲೆ ದಾಳಿ ಸಾವಿಗೆ ಕಾರಣರಾಗಿದ್ದಾರೆ. ಈ ಭಯೋತ್ಪಾದಕ ದಾಳಿಯನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌, ರಷ್ಯ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಸೇರಿದಂತೆ ಜಾಗತಿಕ ನಾಯಕರು ಖಂಡಿಸಿ, ಭಾರತದ ಜೊತೆಗೆ ಒಗ್ಗಟ್ಟ ಪ್ರದರ್ಶಿಸಿದ್ದಾರೆ.

ಭಾರತಕ್ಕೆ ಬೆಂಬಲ
ಪ್ರಧಾನಿ ಮೋದಿ ಜೊತೆ ದೂರವಾಣಿಯಲ್ಲಿ ಮಾತನಾಡಿದ ಟ್ರಂಪ್‌, ಭಯೋತ್ಪಾದಕ ದಾಳಿಯನ್ನು ಖಂಡಿಸುತ್ತೇನೆ. ಅಪರಾಧಿಗಳಿಗೆ ಶಿಕ್ಷಿಸಲು ಭಾರಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿದೆ ಹೇಳಿದ್ದಾರೆ.

ಭಾರತಕ್ಕೆ ಸಹಕಾರ ಹೆಚ್ಚಿಸಲು ಬದ್ಧ
ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಮೃಟಪಟ್ಟವರ ಕುಟುಂಬಗಳಿಗೆ ಸಂತಾಪಗಳು, ಪ್ರಧಾನಿ ಮೋದಿ ಅವರ ಜೊತೆ ಮಾತನಾಡಿದ್ದೇನೆ. ಈ ಕ್ರೂರ ಅಪರಾಧಕ್ಕೆ ಯಾವುದೇ ಸಮರ್ಥನೆ ಇಲ್ಲ. ಅಪರಾಧಿಗಳಿಗೆ ಶಿಕ್ಷೆ ಆಗಬೇಕು. ಭಯೋತ್ಪಾದನೆಯ ವಿರುದ್ಧ ಹೋರಾಡುವಲ್ಲಿ ಭಾರತೀಯದೊಂದಿಗೆ ಎಲ್ಲಾ ರೀತಿಯ ಸಹಕಾರವನ್ನು ಹೆಚ್ಚಿಸಲು ಬದ್ಧ ಎಂದು ರಷ್ಟಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್ ಹೇಳಿದ್ದಾರೆ.

ಭಾರತದೊಂದಿಗೆ ಇಸ್ರೇಲ್‌
ಅಮಾಯಕರ ಸಾವಿಗೆ ಕಾರಣವಾದ ಅಮಾನುಷ ಭಯೋತ್ಪಾದಕ ದಾಳಿಯಿಂದ ತೀವ್ರ ದುಃಖಿತರಾಗಿದ್ದೇವೆ ಎಂದು ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾ ಎಕ್ಸ್‌ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ. ಭಯೋತ್ಪಾದನೆಯ ವಿರುದ್ಧದ ಹೋರಾಟದಲ್ಲಿ ಇಸ್ರೇಲ್‌ ಭಾರತದೊಂದಿಗೆ ನಿಂತಿದೆ ಎಂದು ಅವರು ಹೇಳಿದ್ದಾರೆ.

ಇನ್ನೂ ಭಾರತದಲ್ಲೇ ಪ್ರವಾಸದಲ್ಲಿರುವ ಅಮೆರಿಕ ಉಪಾಧ್ಯಕ್ಷ ಜೆ.ಡಿ ವ್ಯಾನ್ಸ್‌, ವಿನಾಶಕಾರಿ ಭಯೋತ್ಪಾದಕ ದಾಳಿಯ ಮೃತರ ಕುಟುಂಬಕ್ಕೆ ಸಂತಾಪ ಹೇಳಿದ್ದಾರೆ. ನಾನು ಮತ್ತು ಉಷಾ ಸಂತಾಪ ಸೂಚಿಸುತ್ತೇವೆ. ನಾವು ಅವರ ನೋವನ್ನು ಹಂಚಿಕೊಳ್ಳಲು ಬಯಸುತ್ತೆವೆ ಎಂದು ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ರಾಜ್ಯದಲ್ಲಿ ವಸತಿ ರಹಿತರಿಗೆ 5 ಲಕ್ಷ ನಿವೇಶನ : ಸಿಎಂ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ 5 ಲಕ್ಷ ನಿವೇಶನ ಹಂಚಿಕೆಗೆ ತೀರ್ಮಾನ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದರು. ಸಿಎಂ ಡಿ.ಕೆ.ಶಿವಕುಮಾರ್‌ ನೇತೃತ್ವದ…

11 hours ago

ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ

ಮೈಸೂರು: ಚಿತ್ರದುರ್ಗದ  ರೇಣುಕಾಸ್ವಾಮಿ ಕೊಲೆ  ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…

14 hours ago

ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್‌ ಒಡೆಯರ್‌

ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್  ಒಡೆಯರ್‌ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…

15 hours ago

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್‌ 12ರಂದು ದೆಹಲಿಗೆ…

16 hours ago

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

21 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

21 hours ago