ದೇಶ- ವಿದೇಶ

ಪಾಟ್ನಾ: ಜೆಡಿಯು ಯುವ ಮುಖಂಡ ಸೌರಭ್‌ ಕುಮಾರ್‌ ಹತ್ಯೆ!

ಬಿಹಾರ/ಪಾಟ್ನಾ: ಜೆಡಿಯು (ಜನತಾ ದಳ ಯುನೈಟೆಡ್‌) ಯುವ ಮುಖಂಡ ಸೌರಭ್‌ ಕುಮಾರ್‌ನನ್ನು ಬುಧವಾರ (ಏ.24) ತಡರಾತ್ರಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ.

ಬಿಹಾರ ರಾಜಧಾನಿ ಪಾಟ್ನಾದ ಪನ್‌ಪುನ್‌ನಲ್ಲಿ ತಡ ರಾತ್ರಿ 33 ವರ್ಷದ ಸೌರಭ್‌ ಕುಮಾರ್‌ ಮೇಲೆ ದಾಳಿ ಕೋರರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ.

ತಡರಾತ್ರಿ ಸೌರಭ್‌ ಕುಮಾರ್‌ ಪರ್ಸಾ ಬಜಾರ್‌ ಗ್ರಾಮದಲ್ಲಿ ಸ್ನೇಹಿತ ಮದುವೆ ಸಮಾರಂಭದಿಂದ ವಾಪಾಸುಗುತ್ತಿದ್ದ ವೇಳೆ ಬೈಕ್‌ನಲ್ಲಿ ಬಂದ ನಾಲ್ವರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಗುಂಡು ಸೌರಭ್‌ ಅವರ ತಲೆ ಭಾಗಕ್ಕೆ ಬಡಿದಿದ್ದು ಮರಣ ಹೊಂದಿದ್ದಾರೆ ಹಾಗೂ ಇವರ ಜೊತೆಯಲ್ಲಿದ್ದ ಸ್ನೇಹಿತ ಮುನ್ಮನ್‌ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಸೌರಭ್‌ ಕುಮಾರ್‌ ಅವರ ಮೇಲೆ ನಡೆದ ದಾಳಿಯ ಸಿಸಿ ಟಿವಿ ದೃಶ್ಯಗಳನ್ನಾಧರಿಸಿ ಮಾಹಿತಿ ಕಲೆ ಹಾಕಲಾಗುತ್ತಿದ್ದು, ಶೀಘ್ರದಲ್ಲಿಯೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

11 hours ago

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್!

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…

12 hours ago

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…

13 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…

13 hours ago

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

16 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

17 hours ago