ದೇಶ- ವಿದೇಶ

ನೇಪಾಳದ ರೋಲ್ಪಾದಲ್ಲಿ ಪ್ರಪಾತಕ್ಕೆ ಬಿದ್ದ ಜೀಪ್:‌ 20 ಮಂದಿ ಸಾವು

ಕಠ್ಮಂಡು: ಜೀಪ್‌ ಪ್ರಪಾತಕ್ಕೆ ಬಿದ್ದು 20 ಮಂದಿ ಸಾವನ್ನಪ್ಪಿರುವ ಘಟನೆ ನೇಪಾಳದ ರೋಲ್ಪಾದಲ್ಲಿ ನಡೆದಿದ್ದು, ಭಾರೀ ಮಳೆಯಿಂದ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯುಂಟಾಗಿದೆ.

ರೋಲ್ಪಾ ಜಿಲ್ಲೆಯಲ್ಲಿ ಜೀಪ್‌ ಗುಡ್ಡಗಾಡು ರಸ್ತೆ ಮೂಲಕವಾಗು ಸಂಚರಿಸುತ್ತಿತ್ತು. ಜಲ್ಜಲಾ ಪ್ರದೇಶದಲ್ಲಿ ಮಳೆ ಬರುತ್ತಿದ್ದಾಗ ಕೆಸರಿನ ಪ್ರದೇಶದಿಂದ ಜಾರಿ ಸುಮಾರು 700 ಮೀಟರ್‌ ಆಳದ ಕಂದಕಕ್ಕೆ ಉರುಳಿದೆ. ಪರಿಣಾಮ ಕನಿಷ್ಠ 20 ಮಂದಿ ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯುಂಟಾಗಿದೆ. ಅಪಘಾತದ ಸಮಯದಲ್ಲಿ ವಾಹನದಲ್ಲಿ ಎಷ್ಟು ಪ್ರಯಾಣಿಕರಿದ್ದರು ಎಂಬುದು ಇನ್ನೂ ನಿಖರವಾಗಿ ತಿಳಿದುಬಂದಿಲ್ಲ ಎನ್ನಲಾಗಿದೆ.

 

ಆಂದೋಲನ ಡೆಸ್ಕ್

Recent Posts

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…

42 mins ago

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

4 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

4 hours ago

ಕಸ್ತೂರಿ ರಂಗನ್ ವರದಿ: ದೇವರ ಕಾಡುಗಳಿಗೂ ಆತಂಕ

ಲಕ್ಷ್ಮೀ ಕಾಂತ್ ಕೊಮಾರಪ್ಪ ಕೃಷಿ, ಧಾರ್ಮಿಕ ಆಚರಣೆಗಳಿಗೆ ಧಕ್ಕೆ ಬಾರದಂತೆ ತಿದ್ದುಪಡಿ ತರಲು ಆಗ್ರಹ  ಸೋಮವಾರಪೇಟೆ: ಕೊಡಗು ಜಿಲ್ಲೆಯ ಅರ್ಧದಷ್ಟು…

4 hours ago

ರಸ್ತೆ ಡುಬ್ಬ ನಿರ್ಮಿಸಿ; ಅಪಘಾತ ತಪ್ಪಿಸಿ

ಪ್ರಶಾಂತ್ ಎಸ್. ಬೊಂತಗಳ್ಳಿ ಸೇತುವೆ, ತಂತಿಗುಳ್ಳು ತಿರುವಿನಲ್ಲಿ ಹಂಪ್, ಬ್ಯಾರಿಕೇಡ್‌ಗಳನ್ನು ಅಳವಡಿಸಲು ಗ್ರಾಮಸ್ಥರ ಆಗ್ರಹ  ಮೈಸೂರು: ಬನ್ನೂರು ಮುಖ್ಯ ರಸ್ತೆಯಲ್ಲಿನ…

4 hours ago

ಕಾಲ್ಚೆಂಡು ಮೈದಾನ ಈಗ ಬಿಡಾಡಿ ದನಗಳ, ವಾಹನಗಳ ತಂಗುದಾಣ

ಕೆ.ಬಿ.ರಮೇಶನಾಯಕ ಮೈದಾನ ಸಂರಕ್ಷಿಸಿಕೊಳ್ಳದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ; ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಾಲ್ಚೆಂಡು ಮೈದಾನ ಈಗ ಬಿಡಾಡಿ ದನಗಳ,…

5 hours ago