ನವದೆಹಲಿ: ಜಾರ್ಖಂಡ್ ಮಾಜಿ ಸಿಎಂ ಚಂಪೈ ಸೊರೆನ್ ಅವರು ಬಿಜೆಪಿ ಸೇರುತ್ತಾರೆ ಎಂಬ ಸುದ್ದಿ ಹರಡುತ್ತಿದ್ದಂತೆ, ಸೊರೆನ್ ಈಗ ಸ್ಪಷ್ಟನೆ ನೀಡಿದ್ದು, ಹೊಸ ರಾಜಕೀಯ ಪಕ್ಷ ಆರಂಭಿಸುವ ಸುಳಿವು ನೀಡಿದ್ದಾರೆ.
ಈ ಬಗ್ಗೆ ದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜಕೀಯದಿಂದ ನಿವೃತ್ತಿ ಹೊಂದುವುದು, ಹೊಸ ಪಕ್ಷವನ್ನು ಆರಂಭಿಸುವುದು ಅಥವಾ ಇನ್ನೊಂದು ಪಕ್ಷವನ್ನು ಸೇರುವುದು ನನ್ನ ಮುಂದಿರುವ ಆಯ್ಕೆಗಳು. ಸದ್ಯಕ್ಕೆ ನಿವೃತ್ತಿಯಾಗುವುದಿಲ್ಲ. ಹೀಗಾಗಿ ನನ್ನ ಮುಂದೆ ಇನ್ನೆರಡು ಆಯ್ಕೆಗಳಿವೆ. ನಾನೇಕೆ ನನ್ನ ಸ್ವಂತ ಪಕ್ಷವನ್ನು ರಚಿಸಬಾರದು ಎಂದು ಪ್ರಶ್ನಿಸಿದರು. ನನ್ನ ಮುಂದಿನ ನಡೆ ಒಂದು ವಾರದಲ್ಲಿ ಸ್ಪಷ್ಟವಾಗುತ್ತದೆ ಎಂದು ಹೇಳಿದರು.
ಆಗಸ್ಟ್.18ರಂದು ಅವರು ಕೆಲವು ಶಾಸಕರೊಂದಿಗೆ ದೆಹಲಿಗೆ ಭೇಟಿ ನೀಡಿದ ಹಿನ್ನೆಲೆಯಲ್ಲಿ ಬಿಜೆಪಿ ಸೇರ್ಪಡೆಯಾಗಬಹುದು ಎಂದು ಊಹಿಸಲಾಗಿತ್ತು. ಆಪಾದಿತ ಭೂ ಹಗರಣ ಪ್ರಕರಣದಲ್ಲಿ ಜನವರಿ.31ರಂದು ಇ.ಡಿ ಹೇಮಂತ್ ಸೋರೆನ್ ಅವರನ್ನು ಬಂಧಿಸಿದ ನಂತರ 67 ವರ್ಷದ ಚಂಪೈ ಸೊರೆನ್ ಅವರು ಜಾರ್ಖಂಡ್ ಮುಖ್ಯಮಂತ್ರಿಯಾದರು.
ಹೇಮಂತ್ ಸೊರೆನ್ ಅವರಿಗೆ ಜಾರ್ಖಂಡ್ ಹೈಕೋರ್ಟ್ ಜಾಮೀನು ನೀಡಿದ ನಂತರ ಜುಲೈ.3ರಂದು ಅವರು ಹುದ್ದೆಯಿಂದ ಕೆಳಗಿಳಿದರು. ಈಗ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ್ದು, ಅವರ ಮುಂದಿನ ನಡೆ ಹೇಗಿರಲಿದೆ ಎಂಬುದೇ ಭಾರೀ ಕುತೂಹಲಕಾರಿಯಾಗಿದೆ.
ನಂಜನಗೂಡು : ಜಾತೀಯತೆ ಎಂಬುದು ಸಂಪೂರ್ಣವಾಗಿ ತೊಲಗಬೇಕು. ಎಲ್ಲ ಸಮುದಾಯದವರು ನಮ್ಮವರೇ ಎಂದು ತಿಳಿದಾಗ ಮಾತ್ರ ಜಾತೀಯತೆ ದೂರವಾಗಲು ಸಾಧ್ಯ…
ಮೈಸೂರು : ನಿರಂತರ ರಂಗ ತಂಡದ ‘ನಿರಂತರ ರಂಗ ಉತ್ಸವ-2025-26’ರ ಐದು ದಿನಗಳ ರಂಗೋತ್ಸವದ ಕೊನೆಯ ದಿನ ‘ಕೊಡಲ್ಲ ಅಂದ್ರೆ…
ಬೆಂಗಳೂರು : ನಗರದ ಹೊರವಲಯದ ಆನೇಕಲ್‌ನಲ್ಲಿ ಭಾನುವಾರ ಭೀಕರ ಸರಣಿ ಅಪಘಾತವಾಗಿದೆ. ವೇಗವಾಗಿ ನುಗ್ಗಿ ಬಂದ ಬೃಹತ್ ಕಂಟೈನರ್ ಲಾರಿಯೊಂದು…
ಮಂಡ್ಯ : ಮೌಢ್ಯಗಳನ್ನು ಜನರು ತಿರಸ್ಕರಿಸಿ ಬಸವಾದಿ ಶರಣರು ತಿಳಿಸಿರುವುದನ್ನು ಪಾಲನೆ ಮಾಡಬೇಕು. ವಿದ್ಯಾವಂತರಲ್ಲಿ ಕಂದಾಚಾರ ಹಾಗೂ ಮೌಢ್ಯತೆ ಇರುವುದು…
ಮೈಸೂರು : ನಗರದ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಲಲಿತ ಕಲೆ ಮತ್ತು ಕರಕುಶಲ ಹಾಗೂ ಮಹಿಳಾ ಉದ್ದಿಮೆ ಉಪ…
ಬೆಂಗಳೂರು : ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕ ಬೈರತಿ ಬಸವರಾಜು, ಕಳೆದೆರಡು…