ಹೊಸದಿಲ್ಲಿ : ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿಗಳ ಒಕ್ಕೂಟದ ಚುನಾವಣೆಯ ಫಲಿತಾಂಶ ಗುರುವಾರ ಪ್ರಕಟಗೊಂಡಿದ್ದು, ಪ್ರಮುಖ ನಾಲ್ಕೂ ಸ್ಥಾನಗಳಲ್ಲಿ ಎಡ ಪಕ್ಷಗಳ ವಿದ್ಯಾರ್ಥಿ ಸಂಘಟನೆಗಳು ಜಯ ಸಾಧಿಸಿವೆ. ಈ ಮೂಲಕ ಆರ್‌ಎಸ್‌ಎಸ್ ಬೆಂಬಲಿತ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ವಿಕಾಸ್ ಪಟೇಲ್ ಅವರನ್ನು ಸೋಲಿಸಿವೆ.
ಅಖಿಲ ಭಾರತ ವಿದ್ಯಾರ್ಥಿಗಳ ಅಸೋಸಿಯೇಷನ್ (ಎಐಎಸ್‌ಎ), ಸ್ಟೂಡೆಂಟ್ ಫೆಡರೇಷನ್ ಆಫ್ ಇಂಡಿಯಾ (ಎಸ್‌ಎಫ್‌ಐ), ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಫೆಡರೇಷನ್ (ಡಿಎಸ್‌ಎಫ್) ಸಂಘಟನೆಳು ಎಡ ಒಕ್ಕೂಟದ ಭಾಗವಾಗಿ ಚುನಾವಣೆಯಲ್ಲಿ ಸ್ಪರ್ಧಿಸಿ, ಗೆಲುವು ಸಾಧಿಸಿವೆ.
ಇದನ್ನೂ ಓದಿ:-ಮೈಸೂರು : ಸೆಸ್ಕ್‌ನಿಂದ ವಿದ್ಯುತ್ ಬಿಲ್ ಬಾಕಿ ವಸೂಲಾತಿ ಅಭಿಯಾನ
ಎಬಿವಿಪಿಯ ವಿಕಾಸ್ ಪಟೇಲ್ ಅವರನ್ನು 449 ಮತಗಳಿಂದ ಸೋಲಿಸಿ ಅದಿತಿ ಮಿಶ್ರಾ ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರ ಸ್ಥಾನಕ್ಕೆ ಗೋಪಿಕಾ ಬಾಬು, ಪ್ರಧಾನ ಕಾರ್ಯದರ್ಶಿಯಾಗಿ ಸುನಿಲ್ ಯಾದವ್, ಜಂಟಿ ಕಾರ್ಯದರ್ಶಿಯಾಗಿ ಡ್ಯಾನಿಶ್ ಅಲಿ ಗೆಲುವು ಸಾಧಿಸಿದ್ದಾರೆ.
ಎಡ ಒಕ್ಕೂಟದ ಪ್ರಬಲ ಪ್ರಚಾರ, ವಿದ್ಯಾರ್ಥಿ ಹಕ್ಕುಗಳ ಕುರಿತು ಘೋಷಣೆಗಳು ಹಾಗೂ ಕ್ಯಾಂಪಸ್‌ನಲ್ಲಿ ನಡೆದ ಚರ್ಚೆಗಳು ಚುನಾವಣಾ ಹೋರಾಟಕ್ಕೆ ಮೆರಗು ನೀಡಿತ್ತು. ಫಲಿತಾಂಶ ಬಳಿಕ ಎಡ ಒಕ್ಕೂಟದ ವಿದ್ಯಾರ್ಥಿಗಳು ಜೆಎನ್‌ಯು ಮತ್ತೆ ಕೆಂಪಾಗಿದೆ ಎಂದು ಘೋಷಣೆ ಕೂಗಿ ಸಂಭ್ರಮಿಸಿದರು.
ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…
ಶಿವಮೊಗ್ಗ: ಕಾಂಗ್ರೆಸ್ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.…
ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…
ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…