ದೇಶ- ವಿದೇಶ

JOB ALERTS :ಗುಪ್ತಚರ ಇಲಾಖೆಯಲ್ಲಿ ನೇಮಕಾತಿ

ಹೊಸದಿಲ್ಲಿ : ಭಾರತ ಗೃಹ ಸಚಿವಾಲಯದ ಗುಪ್ತಚರ ಬ್ಯೂರೋ ಸಹಾಯಕ ಕೇಂದ್ರ ಗುಪ್ತಚರ ಅಧಿಕಾರಿ (ACIO) ಗ್ರೇಡ್–II ಕಾರ್ಯನಿರ್ವಾಹಕ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ.

ಈ ಅಧಿಸೂಚನೆಯಡಿಯಲ್ಲಿ, ಒಟ್ಟು 3,717 ಸಹಾಯಕ ಕೇಂದ್ರ ಗುಪ್ತಚರ ಅಧಿಕಾರಿ (ACIO) ಗ್ರೇಡ್–II/ಕಾರ್ಯನಿರ್ವಾಹಕ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಶೈಕ್ಷಣಿಕ ಅರ್ಹತೆ, ವಯಸ್ಸಿನ ಮಿತಿ, ಸಂಬಳ, ಅರ್ಜಿ ಪ್ರಕ್ರಿಯೆ ಇತ್ಯಾದಿಗಳ ವಿವರಗಳೊಂದಿಗೆ ಸಂಪೂರ್ಣ ಅಧಿಸೂಚನೆಯನ್ನು ಜುಲೈ 19 ರಂದು IB ಯ ಅಧಿಕೃತ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾಗುತ್ತದೆ.

ವರ್ಗವಾರು ಖಾಲಿ ಹುದ್ದೆಗಳ ವಿವರಗಳು:
ಸಾಮಾನ್ಯ (UR) ವರ್ಗದ ಹುದ್ದೆಗಳ ಸಂಖ್ಯೆ: 1,537.
ಒಬಿಸಿ ವರ್ಗದ ಹುದ್ದೆಗಳ ಸಂಖ್ಯೆ: 946.
SC ವಿಭಾಗದಲ್ಲಿ ಹುದ್ದೆಗಳ ಸಂಖ್ಯೆ: 566.
ಎಸ್‌ಟಿ ವಿಭಾಗದಲ್ಲಿ ಹುದ್ದೆಗಳ ಸಂಖ್ಯೆ: 226.
ಇಡಬ್ಲ್ಯೂಎಸ್ ವಿಭಾಗದಲ್ಲಿನ ಹುದ್ದೆಗಳ ಸಂಖ್ಯೆ: 442.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿಯಲ್ಲಿ ಉತ್ತೀರ್ಣರಾಗಿರಬೇಕು. ಜೊತೆಗೆ ಕಂಪ್ಯೂಟರ್ ಕೌಶಲ್ಯವನ್ನು ಸಹ ಹೊಂದಿರಬೇಕು. ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷದಿಂದ 27 ವರ್ಷಗಳ ನಡುವೆ ಇರಬೇಕು. ಅಧಿಸೂಚನೆಯಲ್ಲಿ ಸೂಚಿಸಿದಂತೆ ಮೀಸಲು ವರ್ಗಗಳಿಗೆ ವಯಸ್ಸಿನ ಮಿತಿಯಲ್ಲಿ ಸಡಿಲಿಕೆ ಇರುತ್ತದೆ.

ಆಸಕ್ತ ಅಭ್ಯರ್ಥಿಗಳು ಜುಲೈ 19 ರಿಂದ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಆಯ್ಕೆ ಪ್ರಕ್ರಿಯೆಯು ಮೂರು ಹಂತಗಳಲ್ಲಿ ನಡೆಯಲಿದೆ. ಟೈಯರ್ -1 ಪರೀಕ್ಷೆ (ವಸ್ತುನಿಷ್ಠ ಪ್ರಕಾರ), ಟೈಯರ್ -2 (ವಿವರಣಾತ್ಮಕ ಪ್ರಕಾರ) ಮತ್ತು ಸಂದರ್ಶನ ಇರುತ್ತದೆ. ಈ ಮೂರು ಹಂತಗಳಲ್ಲಿ ಅರ್ಹತೆ ಪಡೆದವರಿಗೆ ಗುಪ್ತಚರ ಬ್ಯೂರೋದಲ್ಲಿ ಉದ್ಯೋಗಾವಕಾಶ ಸಿಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ. 44,900 ರಿಂದ ರೂ. 1,42,400 ರವರೆಗೆ ವೇತನ ನೀಡಲಾಗುತ್ತದೆ. ಇತರ ಭತ್ಯೆಗಳು ಮತ್ತು ಸೌಲಭ್ಯಗಳನ್ನು ಸಹ ಒದಗಿಸಲಾಗುತ್ತದೆ. ಇತರ ವಿವರಗಳಿಗಾಗಿ, ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.

ಆಂದೋಲನ ಡೆಸ್ಕ್

Recent Posts

ರಾಜ್ಯದಲ್ಲಿ ವಸತಿ ರಹಿತರಿಗೆ 5 ಲಕ್ಷ ನಿವೇಶನ : ಸಿಎಂ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ 5 ಲಕ್ಷ ನಿವೇಶನ ಹಂಚಿಕೆಗೆ ತೀರ್ಮಾನ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದರು. ಸಿಎಂ ಡಿ.ಕೆ.ಶಿವಕುಮಾರ್‌ ನೇತೃತ್ವದ…

11 hours ago

ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ

ಮೈಸೂರು: ಚಿತ್ರದುರ್ಗದ  ರೇಣುಕಾಸ್ವಾಮಿ ಕೊಲೆ  ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…

13 hours ago

ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್‌ ಒಡೆಯರ್‌

ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್  ಒಡೆಯರ್‌ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…

15 hours ago

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್‌ 12ರಂದು ದೆಹಲಿಗೆ…

15 hours ago

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

21 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

21 hours ago