ನವದೆಹಲಿ: ಸತತ ಮೂರನೇ ಬಾರಿಗೆ ಪ್ರಧಾನಿ ಹುದ್ದೆ ಅಲಂಕರಿಸುತ್ತಿರುವ ನರೇಂದ್ರ ಮೋದಿ ಅವರಿಗೆ ಅಮೆರಿಕ ಅಧ್ಯಕ್ಷ ಜೋ ಬೈಡನ್ ಶುಭಾಶಯ ತಿಳಿಸಿದ್ದಾರೆ.
ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಪೊಸ್ಟ್ ಮಾಡಿರುವ ಅವರು, ಭಾರತ ಮತ್ತು ಅಮೆರಿಕದ ಬಾಂಧವ್ಯ ಮುಂದುವರಿಸುವ ಮೂಲಕ ವಿವಿಧ ಕ್ಷೇತ್ರಗಳಲ್ಲಿ ತನ್ನ ಪಾಲುದಾರಿಕೆಯನ್ನು ಮತ್ತಷ್ಟು ಹೆಚ್ಚಿಸಲು ಬಯಸುವುದಾಗಿ ಹೇಳಿದ್ದಾರೆ.
ಪ್ರಜಾಪ್ರಭುತ್ವದ ಚುನಾವಣೆ ವ್ಯವಸ್ಥೆಯಲ್ಲಿ ಮತದಾರರು ಮತ್ತೊಮ್ಮೆ ಮೋದಿ ಗೆಲುವು ಸಾಧಿಸಲು ಒಲವು ತೋರಿದ್ದಾರೆ. ಮೂರನೇ ಬಾರಿಗೆ ಪ್ರಧಾನಿಯಾಗಿ ಮುಂದುವರಿಯುತ್ತಿರುವುದು ಸಂತಸ ತಂದಿದೆ. ಭಾರತ ಮತ್ತು ಅಮೆರಿಕ ಸ್ನೇಹವು ಮತ್ತಷ್ಟು ಬಲಿಷ್ಠಗೊಳ್ಳಲಿದೆ. ಇದು ಜಾಗತಿಕ ಮಟ್ಟದಲ್ಲಿ ಇನ್ನಷ್ಟು ಎತ್ತರಕ್ಕೆ ಬೆಳೆಯಲು ಸಹಾಯಕವಾಗಲಿದೆ ಎಂದು ಪೋಸ್ಟ್‌ನಲ್ಲಿ ಉಲ್ಲೇಖಿಸಿದ್ದಾರೆ.
ಫ್ರಾನ್ಸ್ ಪ್ರವಾಸದಲ್ಲಿರುವ ಬೈಡನ್ ದೂರವಾಣಿ ಕರೆ ಮೂಲಕ ಮೋದಿ ಅವರಿಗೆ ಶುಭಾಶಯ ಕೋರಿದ್ದಾರೆ.
ಮನೆ ಮುಂಭಾಗ ತ್ಯಾಜ್ಯ ನೀರು ನಿಂತು ಗಬ್ಬುನಾರುತ್ತಿರುವ ಚರಂಡಿ ; ಸಾಂಕ್ರಾಮಿಕ ರೋಗ ಹರಡುವ ಭೀತಿ, ಚುನಾವಣೆ ಬಹಿಷ್ಕಾರಕ್ಕೆ ಸ್ಥಳೀಯರ…
ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಿಗೆ ಕೋಳಿಮೊಟ್ಟೆ ವಿತರಣೆಗಾಗಿ ನೀಡಲಾಗುವ ಅನುದಾನ ಕಳೆದ ೬ತಿಂಗಳಿಂದ…
ಗುತ್ತಲು ಕೆರೆ, ಕಾಳೇನಹಳ್ಳಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಭೇಟಿ ಮಂಡ್ಯ: ನಗರದ ಗುತ್ತಲು ಕೆರೆಗೆ ತ್ಯಾಜ್ಯ…
ಪ್ರಶಾಂತ್ ಎಸ್. ಆರು ತಿಂಗಳಿನಿಂದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತ ನೀರಿನ ಘಟಕ ನಿರ್ವಹಣೆ ಮಾಡುವಲ್ಲಿ ಕೆಎಸ್‌ಆರ್‌ಟಿಸಿ ವಿಫಲ…
ಗಿರೀಶ್ ಹುಣಸೂರು ಹೊಸ ವರ್ಷಾಚರಣೆ, ಕ್ರಿಸ್‌ಮಸ್ ರಜೆ ನಿರೀಕ್ಷೆಯಲ್ಲಿ ವ್ಯಾಪಾರಸ್ಥರು, ಉದ್ಯಮಿಗಳು ಮೈಸೂರು: ೨೦೨೫ನೇ ವರ್ಷಕ್ಕೆ ವಿದಾಯ ಹೇಳಿ, ೨೦೨೬ರ…