Mysore
24
overcast clouds

Social Media

ಬುಧವಾರ, 30 ಸೆಪ್ಟೆಂಬರ್ 2026
Light
Dark

ವಿಕಸಿತ ಭಾರತಕ್ಕೆ ಕೈಜೋಡಿಸಿ : ದೇಶವಾಸಿಗಳಿಗೆ ಪ್ರಧಾನಿ ಮೋದಿ ಕರೆ

ಹೊಸದಿಲ್ಲಿ : ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಹಾರಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ವಿಕಸಿತ ಭಾರತಕ್ಕೆ ಕೈಜೋಡಿಸುವಂತೆ ದೇಶವಾಸಿಗಳಿಗೆ ಕರೆ ನೀಡಿದ್ದಾರೆ.

ಈ ವರ್ಷದ ಸ್ವಾತಂತ್ರ್ಯ ದಿನಾಚರಣೆಯು ‘ವಂದೇ ಮಾತರಂ’ ಗೀತೆಯ 150ನೇ ವರ್ಷಾಚರಣೆಯನ್ನೂ ಗುರುತಿಸುತ್ತಿದ್ದು, ‘ಯುವ ಶಕ್ತಿ’ ಮತ್ತು 2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವ ಭಾರತದ ಸಂಕಲ್ಪಕ್ಕೆ ಒತ್ತು ನೀಡಲಾಗಿದೆ.

ದೇಶದ ಇಂಧನ ಭದ್ರತೆಯನ್ನು ಮತ್ತಷ್ಟು ಬಲಪಡಿಸುವ ಅಗತ್ಯವಿದೆ ಎಂದು ಅವರು ಒತ್ತಿ ಹೇಳಿದ ಮೋದಿ, ಭಾರತದ ಇಂಧನ ಅಗತ್ಯಗಳನ್ನು ಪೂರೈಸುವ ನಿಟ್ಟಿನಲ್ಲಿ ಹೆಚ್ಚಿನ ಅಣು ವಿದ್ಯುತ್ ಸ್ಥಾವರಗಳನ್ನು ಸ್ಥಾಪಿಸುವಂತೆ ಕರೆ ನೀಡಿದರು.

ಕಳೆದ 12 ವರ್ಷಗಳಲ್ಲಿ ದೇಶದ ರಕ್ಷಣಾ ಉತ್ಪಾದನೆ ನಾಲ್ಕು ಪಟ್ಟು ಹೆಚ್ಚಾಗಿದೆ. ಭಾರತ ಅಭಿವೃದ್ಧಿ ಹೊಂದಿದ ರಾಷ್ಟ್ರವಾದಾಗ ಜಗತ್ತು ಭಾರತವನ್ನು ವಿಭಿನ್ನ ದೃಷ್ಟಿಕೋನದಿಂದ ನೋಡಲಿದೆ. ವಿಶ್ವದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಭಾರತವು ಅಭಿವೃದ್ಧಿ ಹೊಂದಿದ ರಾಷ್ಟ್ರವಾದಾಗ, ಜಗತ್ತು ಭಾರತವನ್ನು ವಿಭಿನ್ನ ದೃಷ್ಟಿಕೋನದಿಂದ ನೋಡಬೇಕಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ವೈವಿಧ್ಯಮಯ ಹಿನ್ನೆಲೆಯ 5,000 ವಿಶೇಷ ಅತಿಥಿಗಳು
ವಿವಿಧ ಕ್ಷೇತ್ರಗಳು ಮತ್ತು ಹಿನ್ನೆಲೆಗಳಿಂದ ಆಗಮಿಸಿದ 5,000 ವಿಶೇಷ ಅತಿಥಿಗಳು 80ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗವಹಿಸಿದ್ದರು.

ರಾಜ್‌ಘಾಟ್‌ನಲ್ಲಿ ಮಹಾತ್ಮ ಗಾಂಧೀಜಿ ಸಮಾಧಿಗೆ ಪ್ರಧಾನಿ ಮೋದಿ ಪುಷ್ಪ ನಮನ
80ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಭಾಷಣಕ್ಕೂ ಮುನ್ನ ರಾಜ್‌ಘಾಟ್‌ನಲ್ಲಿರುವ ಮಹಾತ್ಮ ಗಾಂಧೀಜಿ ಅವರ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದರು.

ಕೆಂಪುಕೋಟೆಯಿಂದ ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡುವ ಮುನ್ನ ಪ್ರಧಾನಿ ಅವರು ರಾಜ್‌ಘಾಟ್‌ಗೆ ತೆರಳಿ ರಾಷ್ಟ್ರಪಿತನಿಗೆ ಗೌರವ ಸಲ್ಲಿಸಿದರು. ವಸಾಹತುಶಾಹಿ ಆಳ್ವಿಕೆಗೆ ಅಂತ್ಯ ಹಾಡಲು ಕಾರಣವಾದ ಅಸಂಖ್ಯಾತ ಸ್ವಾತಂತ್ರ್ಯ ಹೋರಾಟಗಾರರ ಧೈರ್ಯ, ತ್ಯಾಗ ಮತ್ತು ಅಚಲ ಬದ್ಧತೆಗೂ ಅವರು ಗೌರವ ಸಲ್ಲಿಸಿದರು.

Tags:
error: Content is protected !!