ರಾಯ್ಪುರ: ಛತ್ತೀಸ್ ಗಢದ ಬಿಜಾಪುರದಲ್ಲಿ ಭ್ರಷ್ಟಾಚಾರದ ಕುರಿತು ವರದಿ ಮಾಡಿದ ಕೆಲವೇ ದಿನಗಳಲ್ಲಿ ಸ್ವತಂತ್ರ ಪತ್ರಕರ್ತ ಮುಖೇಶ್ ಚಂದ್ರಕರ್ ಸೆಪ್ಟಿಕ್ ಟ್ಯಾಂಕ್‌ನಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಛತ್ತೀಸ್ ಗಢದ ಬಸ್ತಾರ್ ಪ್ರದೇಶದಲ್ಲಿ ಮಾವೋವಾದಿ ಸಂಘರ್ಷದ ಕುರಿತು ಪತ್ರಕರ್ತ ಮುಖೇಶ್ ವರದಿ ಮಾಡಿ ಮನ್ನಣೆ ಗಳಿಸಿದ್ದರು.
ಚಂದ್ರಕರ್ ಹೆದ್ದಾರಿ ಯೋಜನೆಯಲ್ಲಿನ ಹಗರಣದ ಕುರಿತು ಇತ್ತೀಚೆಗೆ ವರದಿಯನ್ನು ಮಾಡಿದ್ದರು. ಹೆದ್ದಾರಿ ಯೋಜನೆಯಲ್ಲಿನ ಹಗರಣವನ್ನು ಬಹಿರಂಗಪಡಿಸಿದ್ದಕ್ಕಾಗಿ ಅವರಿಗೆ ಬೆದರಿಕೆ ಕರೆ ಬಂದಿತ್ತು ಎಂದು ಮೃತ ಪತ್ರಕರ್ತನ ಕುಟುಂಬ ಆರೋಪಿಸಿದೆ.
ಜ.1ರಂದು ಮನೆಯಿಂದ ತೆರಳಿದ್ದ ಮುಖೇಶ್ ಚಂದ್ರಕರ್ ಆ ಬಳಿಕ ಯಾರ ಸಂಪರ್ಕಕ್ಕೂ ಸಿಕ್ಕಿರಲಿಲ್ಲ. ಅವರ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿತ್ತು. ಅವರು ಮನೆಗೆ ವಾಪಸ್ಸಾಗದಿದ್ದಾಗ ಅವರ ಸಹೋದರ ಯುಕೇಶ್ ಪೊಲೀಸರಿಗೆ ನಾಪತ್ತೆ ಬಗ್ಗೆ ದೂರು ನೀಡಿದ್ದರು.
ಮುಕೇಶ್ ನಾಪತ್ತೆಯಾದ ಹಿನ್ನೆಲೆಯಲ್ಲಿ ಪೊಲೀಸರು ಮೊಬೈಲ್ ಲೊಕೇಶನ್ ಪರಿಶೀಲಿಸಿದಾಗ ಗುತ್ತಿಗೆದಾರ ಸುರೇಶ್ ಚಂದ್ರಕರ್ ಅವರ ಮನೆಯ ಅಂಗಳದಲ್ಲಿ ಕೊನೆಯ ಬಾರಿಗೆ ಅವರ ಮೊಬೈಲ್ ನೆಟ್‌ವರ್ಕ್ ತೋರಿಸಿತ್ತು. ಸ್ಥಳಕ್ಕೆ ತೆರಳಿ ಹೆಚ್ಚಿನ ಪರಿಶೀಲನೆ ನಡೆಸಿದಾಗ ಪೊಲೀಸರಿಗೆ ಸೆಪ್ಟಿಕ್ ಟ್ಯಾಂಕ್ನಲ್ಲಿ ಮುಕೇಶ್ ಅವರ ಮೃತದೇಹ ಪತ್ತೆಯಾಗಿತ್ತು. ಮುಕೇಶ್ ಅವರ ಮೃತದೇಹವು ಊದಿಕೊಂಡಿದ್ದು, ತಲೆ ಮತ್ತು ಬೆನ್ನಿನ ಮೇಲೆ ಗಾಯಗಳು ಕಂಡು ಬಂದಿದೆ. ಮುಖೇಶ್ ಧರಿಸಿದ್ದ ಬಟ್ಟೆಯಿಂದ ಮೃತದೇಹವನ್ನು ಗುರುತಿಸಲಾಗಿದೆ.
ಮುಖೇಶ್ ಚಂದ್ರಕರ್ ಅವರು 1.59 ಲಕ್ಷ ಚಂದಾದಾರರನ್ನು ಹೊಂದಿದ್ದ ಯೂಟ್ಯೂಬ್ ಚಾನೆಲ್ ಅನ್ನು ನಡೆಸುತ್ತಿದ್ದರು. ಬಸ್ತಾರ್ ಪ್ರದೇಶದಲ್ಲಿನ ನಿರ್ಣಾಯಕ ಸಮಸ್ಯೆಗಳ ಬಗ್ಗೆ ಅವರು ವರದಿ ಮಾಡುತ್ತಿದ್ದರು.
ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಹಾಗೂ ಯಂಗ್ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಇಡಿ ಸಮನ್ಸ್ ನೀಡಿದೆ. ಆ ಮೂಲಕ ನಮಗೆ…
ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲ್ಲೂಕಿನ ಸಖರಾಯಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಜೆ.ಜಾರ್ಜ್ ಪ್ರತಿಕ್ರಿಯೆ ನೀಡಿದ್ದಾರೆ. ಕೊಲೆಯಾದ…
ಚಿಕ್ಕಮಗಳೂರು: ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದು ಕಾಂಗ್ರೆಸ್ ಕಾರ್ಯಕರ್ತ ಮೃತಪಟ್ಟ ಘಟನೆ ಕಡೂರು ತಾಲ್ಲೂಕಿನ ಸಖರಾಪಟ್ಟಣದ ಸಮೀಪದ ಕಲ್ಮುರುಡೇಶ್ವರ…
ಬೆಂಗಳೂರು: ಬಿಜೆಪಿ ಜೊತೆ ಸೇರಿಕೊಂಡ ಮೇಲೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕೂಡ ಮನುವಾದಿ ಆಗಿಬಿಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು.…
ಬೆಂಗಳೂರು: ಅಂಬೇಡ್ಕರ್ ಅವರೊಬ್ಬ ಮಹಾನ್ ವ್ಯಕ್ತಿ ಹಾಗೂ ದೇಶ ಕಂಡ ಒಬ್ಬ ಅಪರೂಪದ ನಾಯಕ. ದಲಿತರಿಗೆ ಮಾತ್ರವಲ್ಲದೆ ಎಲ್ಲಾ ಶೋಷಿತರಿಗೆ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿ ದರ್ಶನ್‌ಗೆ ಬೆನ್ನುನೋವು ಮಾಯವಾಯ್ತಾ ಎಂಬ ಕುತೂಹಲ ಮನೆ ಮಾಡಿದೆ. ದರ್ಶನ್…