ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ, ಕೇಂದ್ರ ಸಚಿವ ಜೆಪಿ ನಡ್ಡಾ ಅವರು ರಾಜ್ಯಸಭಾ ಸಭಾನಾಯಕರಾಗಿ ನೇಮಕಗೊಂಡಿದ್ದಾರೆ.
ಕೇಂದ್ರ ಸಚಿವರಾದ ಕಿರಣ್ ರಿಜಿಜು ಮತ್ತು ಪ್ರಲ್ಹಾದ್ ಜೋಶಿ ಅವರೊಂದಿಗೆ ನಡೆಸ ಸಭೆಯಲ್ಲಿ ಜೆಪಿ ನಡ್ಡಾ ಅವರನ್ನು ರಾಜ್ಯಸಭಾ ನಾಯಕನನ್ನಾಗಿ ನೇಮಕ ಮಾಡಲಾಗಿದೆ.
ಈ ಹಿಂದೆ ಪಿಯೂಷ್ ಗೋಯಲ್ ಅವರು ರಾಜ್ಯಸಬಾ ಸಭಾನಾಯಕರಾಗಿ ನೇಮಕಗೊಂಡಿದ್ದರು. ಇವರ ಬದಲಿ ಸ್ಥಾನಕ್ಕೆ ಜೆಪಿ ನಡ್ಡಾ ಅವರನ್ನು ನೇಮಿಸಲಾಗಿದೆ ಎಂದು ಹೇಳಲಾಗಿದೆ.
ಸದ್ಯ ಈಗಿನ ನರೇಂದ್ರ ಮೋದಿ 3.0 ಕ್ಯಾಬಿನೇಟ್‌ನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರಾಸಾಯನಿಕ ಹಾಗೂ ರಸಗೊಬ್ಬರ ಇಲಾಖೆ ಸಚಿವರಾಗಿದ್ದಾರೆ.