ದೇಶ- ವಿದೇಶ

ರಾಜ್ಯಸಭಾ ಸಭಾನಾಯಕರಾಗಿ ಜೆಪಿ ನಡ್ಡಾ ನೇಮಕ..!

ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ, ಕೇಂದ್ರ ಸಚಿವ ಜೆಪಿ ನಡ್ಡಾ ಅವರು ರಾಜ್ಯಸಭಾ ಸಭಾನಾಯಕರಾಗಿ ನೇಮಕಗೊಂಡಿದ್ದಾರೆ.

ಕೇಂದ್ರ ಸಚಿವರಾದ ಕಿರಣ್‌ ರಿಜಿಜು ಮತ್ತು ಪ್ರಲ್ಹಾದ್‌ ಜೋಶಿ ಅವರೊಂದಿಗೆ ನಡೆಸ ಸಭೆಯಲ್ಲಿ ಜೆಪಿ ನಡ್ಡಾ ಅವರನ್ನು ರಾಜ್ಯಸಭಾ ನಾಯಕನನ್ನಾಗಿ ನೇಮಕ ಮಾಡಲಾಗಿದೆ.

ಈ ಹಿಂದೆ ಪಿಯೂಷ್‌ ಗೋಯಲ್‌ ಅವರು ರಾಜ್ಯಸಬಾ ಸಭಾನಾಯಕರಾಗಿ ನೇಮಕಗೊಂಡಿದ್ದರು. ಇವರ ಬದಲಿ ಸ್ಥಾನಕ್ಕೆ ಜೆಪಿ ನಡ್ಡಾ ಅವರನ್ನು ನೇಮಿಸಲಾಗಿದೆ ಎಂದು ಹೇಳಲಾಗಿದೆ.

ಸದ್ಯ ಈಗಿನ ನರೇಂದ್ರ ಮೋದಿ 3.0 ಕ್ಯಾಬಿನೇಟ್‌ನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರಾಸಾಯನಿಕ ಹಾಗೂ ರಸಗೊಬ್ಬರ ಇಲಾಖೆ ಸಚಿವರಾಗಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಗುಂಡ್ಲುಪೇಟೆ | ದನಗಾಹಿ ಮೇಲೆ ಹುಲಿ ದಾಳಿ ; ಪ್ರಾಣಾಪಾಯದಿಂದ ಪಾರು

ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…

58 seconds ago

ಏಕತಾ ಮಾಲ್‌ ನಿರ್ಮಾಣಕ್ಕೆ ಹೈಕೋರ್ಟ್ ತಡೆ‌

ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…

5 mins ago

ದ್ವೇಷ ಭಾಷಣಕ್ಕೆ ಕಡಿವಾಣ | ಗರಿಷ್ಟ 10 ವರ್ಷ ಶಿಕ್ಷೆ, ವಿಧಾನಸಭೆಯಲ್ಲಿ ಮಸೂದೆ ಮಂಡನೆ, BJP ವಿರೋಧ

ಬೆಳಗಾವಿ : ದ್ವೇಷ ಭಾಷಣಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದ್ದು, ಈ…

15 mins ago

ಮೈವಿವಿಯಲ್ಲಿ ಫ್ರೆಂಚ್‌ ಭಾಷೆ ವಿಭಾಗ ಪುನರಾಂಭಿಸಲು ಚರ್ಚೆ

ಮೈಸೂರು : ಮೈಸೂರು ವಿಶ್ವವಿದ್ಯಾನಿಲಯಕ್ಕೆ ಫ್ರಾನ್ಸ್ ದೇಶದ ರಾಯಭಾರಿಗಳ ನಿಯೋಗ ಭೇಟಿ ನೀಡಿ ಫ್ರೆಂಚ್ ಭಾಷೆ ವಿಭಾಗವನ್ನು ಮರು ಆರಂಭಿಸುವ…

37 mins ago

ʼಗ್ಯಾರಂಟಿʼ ಜನರ ಬದುಕಿನ ಆಧಾರ

ಬೆಳಗಾವಿ(ಸುವರ್ಣ ವಿಧಾನ ಸೌಧ) : ಗ್ಯಾರಂಟಿ ಯೋಜನೆಗಳ ಮೂಲಕ ನಾಗರಿಕರಿಗೆ ನೇರವಾಗಿ ಹಣ ವರ್ಗಾವಣೆಯಿಂದ ಅವರ ಆರ್ಥಿಕ ಬದುಕು ಬಹಳಷ್ಟು…

56 mins ago

ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

ಮೈಸೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ 2025-26ನೇ ಸಾಲಿನ ಎಸ್.ಸಿ.ಎಸ್.ಪಿ ಮತ್ತು ಟಿ.ಎಸ್.ಪಿ ಯೋಜನೆಯಡಿ ಪರಿಶಿಷ್ಟ…

1 hour ago