Mysore
20
broken clouds

Social Media

ಶುಕ್ರವಾರ, 20 ಡಿಸೆಂಬರ್ 2024
Light
Dark

ರಾಜ್ಯಸಭೆಯ ಸಭಾನಾಯಕರಾಗಿ ನೇಮಕವಾಗ್ತಾರಾ ಕೇಂದ್ರ ಆರೋಗ್ಯ ಸಚಿವ ಜೆ.ಪಿ ನಡ್ಡಾ?

ಹೊಸದಿಲ್ಲಿ: ಕೇಂದ್ರ ಆರೋಗ್ಯ ಸಚಿವ ಹಾಗೂ ಬಿಜೆಪಿ ನಾಯಕ ಜೆಪಿ ನಡ್ಡಾ ಅವರು ರಾಜ್ಯಸಭೆಯ ಸಭಾನಾಯಕರಾಗಿ ನೇಮಕಗೊಳ್ಳಲಿದ್ದಾರೆ ಎನ್ನುವ ಮಾಹಿತಿ ಪಕ್ಷದ ಉನ್ನತ ಮೂಲಗಳಿಂದ ತಿಳಿದುಬಂದಿದೆ.

ಸದ್ಯಕ್ಕೆ ಜೆ.ಪಿ ನಡ್ಡಾ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾಗಿದ್ದಾರೆ. ಜನವರಿ ತಿಂಗಳಲ್ಲಿ ಅವರ ಅಧಿಕಾರದ ಅವಧಿ ಕೊನೆಗೊಂಡಿತ್ತು. ಆದರೆ ಲೋಕಸಭೆ 2024ರ ಚುನಾವಣೆ ಮೇಲ್ವಿಚಾರಣೆಗಾಗಿ ಅವರಿಗೆ 6 ತಿಂಗಳ ವಿಸ್ತರಣೆಯನ್ನು ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಅವರ ಅಧಿಕಾರಾವಧಿ ಈ ತಿಂಗಳಿಗೆ ಕೊನೆಗೊಳ್ಳುತ್ತಿದೆ. ಹೀಗಾಗಿ ರಾಜ್ಯಸಭೆಯ ಸಭಾನಾಯಕರಾಗಿ ನೇಮಕಗೊಳ್ಳುವ ಸಾಧ್ಯತೆ ಇದೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದಲ್ಲಿ ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಜೆ.ಪಿ.ನಡ್ಡಾ ಅವರಿಗೆ ಆರೋಗ್ಯ ಸಚಿವಾಲಯ ಹಾಗೂ ರಾಸಾಯನಿಕ ಮತ್ತು ರಸಗೊಬ್ಬರ ಸಚಿವಾಲಯದ ಖಾತೆಯನ್ನು ನೀಡಲಾಗಿದೆ.

Tags: